ʼಆಘಾತಕಾರಿ ಸ್ಥಿತಿʼ: ಅಂಗನವಾಡಿಗಳಿಗೆ ಕೂಡಲೇ ವಿದ್ಯುತ್, ಶೌಚಾಲಯ ಒದಗಿಸಲು ಕರ್ನಾಟಕ ಹೈಕೋರ್ಟ್‌ ನಿರ್ದೇಶನ

ಸರ್ಕಾರ ಸಲ್ಲಿಸಿದ ವರದಿಯ ಪ್ರಕಾರ ರಾಜ್ಯದ ಒಟ್ಟು 65,911 ಅಂಗನವಾಡಿ ಕೇಂದ್ರಗಳ ಪೈಕಿ ಕೇವಲ 33,146 ಕೇಂದ್ರಗಳಿಗೆ ಮಾತ್ರ ವಿದ್ಯುತ್ ಸಂಪರ್ಕ ಇದೆ. ಶೌಚಾಲಯ ಸೌಲಭ್ಯ ಇರುವ ಅಂಗನವಾಡಿ ಕೇಂದ್ರಗಳ ಸಂಖ್ಯೆ ಕೇವಲ 44,025.
ʼಆಘಾತಕಾರಿ ಸ್ಥಿತಿʼ: ಅಂಗನವಾಡಿಗಳಿಗೆ  ಕೂಡಲೇ ವಿದ್ಯುತ್, ಶೌಚಾಲಯ ಒದಗಿಸಲು ಕರ್ನಾಟಕ ಹೈಕೋರ್ಟ್‌ ನಿರ್ದೇಶನ

ರಾಜ್ಯದ ಎಲ್ಲಾ ಅಂಗನವಾಡಿ ಕೇಂದ್ರಗಳಲ್ಲಿ ವಿದ್ಯುತ್‌, ಫ್ಯಾನ್‌ ಹಾಗೂ ಶೌಚಾಲಯ ವ್ಯವಸ್ಥೆ ಕಲ್ಪಿಸಲು ಕರ್ನಾಟಕ ಹೈಕೋರ್ಟ್‌ ಸೋಮವಾರ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ಮತ್ತು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ವಿಭಾಗೀಯ ಪೀಠ ಅಂಗನವಾಡಿ ಕೇಂದ್ರಗಳಲ್ಲಿನ ಮೂಲಸೌಕರ್ಯಗಳ ಬಗ್ಗೆ ಆಘಾತ ವ್ಯಕ್ತಪಡಿಸಿದೆ.

ಅಂಗನವಾಡಿ ಕೇಂದ್ರಗಳಿಗೆ ಮೂಲಸೌಕರ್ಯಗಳಿಗೆ ಸಂಬಂಧಿಸಿದಂತೆ ಅನುಸರಣಾ ವರದಿ ಸಲ್ಲಿಸಲಾಗಿದ್ದು ಅದರಲ್ಲಿ ನೀಡಿರುವ ಹೇಳಿಕೆಗಳು ಆಘಾತಕಾರಿ ಸ್ಥಿತಿಯನ್ನು ತೋರಿಸುತ್ತವೆ ”ಎಂದು ಆದೇಶದಲ್ಲಿ ತಿಳಿಸಲಾಗಿದೆ.

ರಾಜ್ಯದಲ್ಲಿ ಮಧ್ಯಮ ಪ್ರಮಾಣದಿಂದ ತೀವ್ರ ಅಪೌಷ್ಟಿಕತೆಯ ಹಂತದವರೆಗೆ ಬಳಲುತ್ತಿರುವ ಎಲ್ಲಾ ಮಕ್ಕಳನ್ನು ಗುರುತಿಸಿ ಸಹಾಯ ಮಾಡಲು ಕೋರಿ ಸರ್ಕಾರೇತರ ಸಂಸ್ಥೆಯೊಂದು ಬರೆದ ಪತ್ರ ಆಧರಿಸಿ ಹೈಕೋರ್ಟ್‌ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದೆ. ಸರ್ಕಾರ ಸಲ್ಲಿಸಿದ ವರದಿಯ ಪ್ರಕಾರ ರಾಜ್ಯದ ಒಟ್ಟು 65,911 ಅಂಗನವಾಡಿ ಕೇಂದ್ರಗಳ ಪೈಕಿ ಕೇವಲ 33,146 ಕೇಂದ್ರಗಳಿಗೆ ಮಾತ್ರ ವಿದ್ಯುತ್ ಸಂಪರ್ಕ ಇದೆ. ಶೌಚಾಲಯ ಸೌಲಭ್ಯ ಇರುವ ಅಂಗನವಾಡಿ ಕೇಂದ್ರಗಳ ಸಂಖ್ಯೆ ಕೇವಲ 44,025.

"ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ವಿದ್ಯುತ್ ಸರಬರಾಜು, ಫ್ಯಾನ್‌ ವ್ಯವಸ್ಥೆ ಪೂರೈಸಲು ಸರ್ಕಾರಕ್ಕೆ ನಿರ್ದೇಶಿಸುತ್ತಿದ್ದೇವೆ. ಶಿಫಾರಸಿನಂತೆ 65,911 ಕೇಂದ್ರಗಳಿಗೆ ಶೌಚಾಲಯ ಸೌಲಭ್ಯ ಒದಗಿಸುವಂತೆ ಸೂಚಿಸುತ್ತಿದ್ದೇವೆ ಎಂದು ನ್ಯಾಯಾಲಯ ಸರ್ಕಾರಕ್ಕೆ ನಿರ್ದೇಶಿಸಿದೆ.

Also Read
14 ಲಕ್ಷ ಅಂಗನವಾಡಿ ಕೇಂದ್ರಗಳ ಪುನರಾರಂಭಕ್ಕೆ ಅರ್ಜಿ: ಕೇಂದ್ರ- ರಾಜ್ಯ ಸರ್ಕಾರಗಳಿಗೆ ನೊಟೀಸ್ ನೀಡಿದ ಸುಪ್ರೀಂ

ಇದರ ಜೊತೆಗೆ ಬೆಂಗಳೂರು ನಗರದಲ್ಲಿ ಹೆಚ್ಚು ಅಂಗನವಾಡಿ ಕೇಂದ್ರಗಳನ್ನು ಸ್ಥಾಪಿಸುವಂತೆ ನ್ಯಾಯಾಲಯ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ. “ಬಾಲಕರು ಬಾಲಕಿಯರು ಹಾಗೂ ವಿಶೇಷ ಚೇತನ ಮಕ್ಕಳಿಗೆ ಪ್ರತ್ಯೇಕ ಶೌಚಾಲಯ ಕಲ್ಪಿಸಬೇಕು. ಈ ಶಿಫಾರಸುಗಳನ್ನು ಸರ್ಕಾರ ಗಮನಿಸಬೇಕು. ಬೆಂಗಳೂರು ನಗರದಲ್ಲಿ ಸಾಕಷ್ಟು ಸಂಖ್ಯೆಯ ಅಂಗನವಾಡಿ ಕೇಂದ್ರಗಳಿವೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು” ಎಂದು ಅದು ತಿಳಿಸಿದೆ.

ಹಂತ ಹಂತವಾಗಿ ನಿರ್ದೇಶನಗಳನ್ನು ಪಾಲಿಸಬೇಕು ಎಂದು ಪೀಠ ಸೂಚಿಸಿದೆ. ಈ ಎಲ್ಲಾ ನಿರ್ದೇಶನಗಳನ್ನು ಪಾಲಿಸಿರುವ ಸಂಬಂಧ ಮುಂದಿನ ವಿಚಾರಣೆ ನಿಗದಿಯಾಗಿರುವ ಜೂನ್‌ 11 ರೊಳಗೆ ಅನುಸರಣಾ ಅಫಿಡವಿಟ್‌ ಸಲ್ಲಿಸುವಂತೆಯೂ ಅದು ಹೇಳಿದೆ.

ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳು, ಹದಿಹರೆಯದ ಹೆಣ್ಣುಮಕ್ಕಳು, ಗರ್ಭಿಣಿಯರು ಹಾಗೂ ಬಾಣಂತಿಯರನ್ನು ಗುರುತಿಸಿ ವೈದ್ಯಕೀಯ ಪರೀಕ್ಷೆ ಮತ್ತು ಚಿಕಿತ್ಸೆಯ ಮೇಲ್ವಿಚಾರಣೆಗಾಗಿ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎ ಎನ್ ವೇಣುಗೋಪಾಲ ಗೌಡರ ನೇತೃತ್ವದಲ್ಲಿ ಸಮಿತಿ ರಚಿಸಿತ್ತು.

Related Stories

No stories found.
Kannada Bar & Bench
kannada.barandbench.com