ಕೇರಳ ನಟಿ ಮೇಲಿನ ಹಲ್ಲೆ ಪ್ರಕರಣ: ಜಾಮೀನು ಕೋರಿ ಸುಪ್ರೀಂ ಕೋರ್ಟ್‌ ಮೊರೆ ಹೋದ ಪ್ರಧಾನ ಆರೋಪಿ ಪಲ್ಸರ್ ಸುನಿ [ಚುಟುಕು]

ಕೇರಳ ನಟಿ ಮೇಲಿನ ಹಲ್ಲೆ ಪ್ರಕರಣ: ಜಾಮೀನು ಕೋರಿ ಸುಪ್ರೀಂ ಕೋರ್ಟ್‌ ಮೊರೆ ಹೋದ ಪ್ರಧಾನ ಆರೋಪಿ ಪಲ್ಸರ್ ಸುನಿ [ಚುಟುಕು]
Pulsar Suni

ಮಲಯಾಳಂ ಸಿನಿಮಾ ನಟ ದಿಲೀಪ್ ಆರೋಪಿಯಾಗಿರುವ ಬಹುಭಾಷಾ ನಟಿಯೊಬ್ಬರ ಅಪಹರಣ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದ ಪ್ರಮುಖ ಆರೋಪಿ ಪಲ್ಸರ್ ಸುನಿ ಜಾಮೀನು ಕೋರಿ ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದಾನೆ.

ಮಾರ್ಚ್ 29ರಂದು ಕೇರಳ ಹೈಕೋರ್ಟ್ ಪಲ್ಸರ್‌ ಸುನಿಗೆ ಜಾಮೀನು ನಿರಾಕರಿಸಿತ್ತು. ಈ ಆದೇಶವನ್ನು ಆತ ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದಾನೆ. ಬಹುತೇಕ ಎಲ್ಲ ಸಾಕ್ಷಿಗಳ ವಿಚಾರಣೆ ಮುಗಿದಿದ್ದರೂ ತನಿಖಾ ಸಂಸ್ಥೆ ಹೆಚ್ಚಿನ ತನಿಖೆ ಆರಂಭಿಸಿದೆ ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ.

ಹೆಚ್ಚಿನ ಮಾಹಿತಿಗೆ ʼಬಾರ್‌ ಅಂಡ್‌ ಬೆಂಚ್‌ʼ ಇಂಗ್ಲಿಷ್‌ ತಾಣದ ಲಿಂಕ್‌ ಗಮನಿಸಿ.

Related Stories

No stories found.