ಆದಿವಾಸಿ ಯುವಕ ಮಧುವನ್ನು ಕೊಂದ 14 ಮಂದಿ ಅಪರಾಧಿಗಳು: ಕೇರಳ ನ್ಯಾಯಾಲಯದ ತೀರ್ಪು

ಕಿರಾಣಿ ಅಂಗಡಿಯಿಂದ ಅಕ್ಕಿ ಕದ್ದಿದ್ದಾನೆ ಎಂದು ಆರೋಪಿಸಿ ಬುಡಕಟ್ಟು ಜನಾಂಗದ ಮಾನಸಿಕ ಅಸ್ವಸ್ಥ ಯುವಕ ಮಧು ಎಂಬಾತನನ್ನು ಕಟ್ಟಿಹಾಕಿ ಬರ್ಬರವಾಗಿ ಥಳಿಸಿ ಹತ್ಯೆಗೈದ
Madhu
Madhu Mathrubhumi.com

ಆದಿವಾಸಿ ಯುವಕ ಮಧು ಎಂಬಾತನನ್ನು 2018ರಲ್ಲಿ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ 14 ಮಂದಿ ಆರೋಪಿಗಳನ್ನು ದೋಷಿಗಳು ಎಂದು ಕೇರಳದ ನ್ಯಾಯಾಲಯ ಮಂಗಳವಾರ ತೀರ್ಪು ನೀಡಿದೆ.

ಮಾಧ್ಯಮಗಳಲ್ಲಿನ ವರದಿಯ ಪ್ರಕಾರ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯಿದೆ (ಎಸ್‌ಸಿ/ಎಸ್‌ಟಿ ಕಾಯಿದೆ) ಅಡಿಯ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ವಿಶೇಷ ನ್ಯಾಯಾಲಯ  ಈ ಆದೇಶ ನೀಡಿದೆ.

ಪಾಲಕ್ಕಾಡ್‌ನ ಅಟ್ಟಪ್ಪಾಡಿಯಲ್ಲಿ ಬುಡಕಟ್ಟು ಜನಾಂಗದ ಮಾನಸಿಕ ಅಸ್ವಸ್ಥ ಯುವಕ ಮಧು ಎಂಬಾತನನ್ನು ಆರೋಪಿಗಳು ಕಟ್ಟಿಹಾಕಿ ಬರ್ಬರವಾಗಿ ಹೊಡೆದು ಕೊಂದಿದ್ದರು ಎಂಬುದು ಪ್ರಾಸಿಕ್ಯೂಷನ್ ವಾದವಾಗಿತ್ತು.

Also Read
ಮೂತ್ರ ನೆಕ್ಕಿಸಿದ ಪ್ರಕರಣ: ಆರೋಪಿ ಪಿಎಸ್ಐ ಅರ್ಜುನ್ ಹೊರಕೇರಿ ಅರ್ಜಿ ವಜಾಗೊಳಿಸಿದ ರಾಜ್ಯ ಹೈಕೋರ್ಟ್‌

ಕಿರಾಣಿ ಅಂಗಡಿಯಿಂದ ಅಕ್ಕಿ ಕಳ್ಳತನ ಮಾಡುತ್ತಿದ್ದಾನೆ ಎಂದು ಆರೋಪಿಗಳು ಮಧುವನ್ನು ಸಮೀಪದ ಕಾಡಿನಿಂದ ಹಿಡಿದು ಆತನ ಮೇಲೆ ಹಲ್ಲೆ ನಡೆಸಿದ್ದರು ಎಂದು ತಿಳಿದುಬಂದಿತ್ತು.

ಐಪಿಸಿ ಸೆಕ್ಷನ್‌ 143, 147, 148, 323, 324, 326, 294 (ಬಿ), 342, 352, 364, 367, 368, ಹಾಗೂ 302 ಸಹವಾಚನ 149  ಮತ್ತು ಎಸ್‌ಸಿ-ಎಸ್‌ಟಿ ಕಾಯಿದೆಯ (1) (ಡಿ), (ಆರ್‌) (ಎಸ್‌) ಮತ್ತು 3(2) (ವಿ) ಅಡಿ ವಿಶೇಷ ನ್ಯಾಯಾಲಯ ಅವರನ್ನು ತಪ್ಪಿತಸ್ಥರು ಎಂದು ತೀರ್ಪು ನೀಡಿದೆ.

ಈ ಹಿಂದೆ ಹಲವು ಷರತ್ತುಗಳನ್ನು ವಿಧಿಸಿ ಹೈಕೋರ್ಟ್‌ ಅವರಿಗೆ ಜಾಮೀನು ನೀಡಿತ್ತು. ಆದರೆ ಸಾಕ್ಷಿಗಳು ಪ್ರತಿಕೂಲ ಸಾಕ್ಷಿಗಳಾಗಿ ಬದಲಾಗುತ್ತಿದ್ದುದನ್ನು ಗಮನಿಸಿದ್ದ ವಿಶೇಷ ನ್ಯಾಯಾಲಯ ಜಾಮೀನನ್ನು ರದ್ದುಗೊಳಿಸಿತ್ತು. ಜಾಮೀನು ರದ್ದತಿ ತೀರ್ಪನ್ನು ಹೈಕೋರ್ಟ್ 2022 ರಲ್ಲಿ ಎತ್ತಿಹಿಡಿದಿತ್ತು.

Related Stories

No stories found.
Kannada Bar & Bench
kannada.barandbench.com