ಮೂರು ವರ್ಷಕ್ಕಿಂತ ಕಡಿಮೆ ಅನುಭವ ಹೊಂದಿರುವ ವಕೀಲರಿಗೆ ಮಾಸಿಕ ₹3 ಸಾವಿರ ಭತ್ಯೆ ನೀಡಲು ಕೇರಳ ಸರ್ಕಾರ ನಿರ್ಧಾರ

Young lawyers with Kerala High Court
Young lawyers with Kerala High Court

ವಾರ್ಷಿಕ ₹1 ಲಕ್ಷಕ್ಕಿಂತ ಕಡಿಮೆ ಆದಾಯ ಹೊಂದಿರುವ ಮೂರು ವರ್ಷಕ್ಕಿಂತ ಕಡಿಮೆ ಅನುಭವ ಹೊಂದಿರುವ 30 ವರ್ಷದೊಳಗಿರುವ ಯುವ ವಕೀಲರಿಗೆ ಮಾಸಿಕ ₹3 ಸಾವಿರ ಭತ್ಯೆ ನೀಡುವುದಕ್ಕೆ ಸಂಬಂಧಿಸಿದಂತೆ ಕೇರಳ ಸರ್ಕಾರವು ಆದೇಶ ಮಾಡಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ವಾರ್ಷಿಕ ₹1 ಲಕ್ಷದ ಆದಾಯ ಮಿತಿ ಅನ್ವಯಿಸುವುದಿಲ್ಲ ಎಂದು ಜೂನ್‌ 26ರಂದು ಹೊರಡಿಸಿರುವ ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.

ವಾರ್ಷಿಕ ₹1 ಲಕ್ಷಕ್ಕಿಂತ ಕಡಿಮೆ ಆದಾಯ ಹೊಂದಿರುವ ಮೂರು ವರ್ಷಕ್ಕಿಂತ ಕಡಿಮೆ ಅನುಭವ ಹೊಂದಿರುವ ವಕೀಲರಿಗೆ ಮಾಸಿಕ ₹5 ಸಾವಿರ ಭತ್ಯೆ ನೀಡುವುದಕ್ಕೆ ಸಂಬಂಧಿಸಿದಂತೆ ಕೇರಳ ರಾಜ್ಯ ವಕೀಲರ ಪರಿಷತ್‌ 2021ರ ಡಿಸೆಂಬರ್‌ನಲ್ಲಿ ಹೊರಡಿಸಿದ್ದ ಕೇರಳ ವಕೀಲರ ಭತ್ಯೆ ನಿಯಮಗಳನ್ನು ಪರಿಗಣಿಸಿ ರಾಜ್ಯ ಸರ್ಕಾರವು ಆದೇಶ ಹೊರಡಿಸಿದೆ.

ಹೆಚ್ಚಿನ ಮಾಹಿತಿಗಾಗಿ ʼಬಾರ್‌ ಅಂಡ್‌ ಬೆಂಚ್‌ʼ ಇಂಗ್ಲಿಷ್‌ ಜಾಲತಾಣದ ಲಿಂಕ್‌ ಗಮನಿಸಿ.

Related Stories

No stories found.
Kannada Bar & Bench
kannada.barandbench.com