
ಕೋಳಿಕ್ಕೋಡ್ ಅವಳಿ ಸ್ಫೋಟ ಪ್ರಕರಣದ ಆರೋಪಿಗಳಾದ ತಡಿಯಂಟವಿಡೆ ನಜೀರ್, ಶಫಾಸ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ ಖುಲಾಸೆಗೊಳಿಸಿದೆ. 2006ರಲ್ಲಿ ನಡೆದ ಈ ಸ್ಫೋಟಗಳಿಗೆ ಸಂಬಂಧಿಸಿದಂತೆ ಬಂಧಿತನಾಗಿದ್ದ ನಜೀರ್ ಶಂಕಿತ ಲಷ್ಕರ್-ಎ-ತೊಯ್ಬಾ ಉಗ್ರ ಎನ್ನಲಾಗಿತ್ತು. ಇಬ್ಬರೂ ಆರೋಪಿಗಳ ಮನವಿಯನ್ನು ನ್ಯಾಯಮೂರ್ತಿಗಳಾದ ಕೆ ವಿನೋದ್ ಚಂದ್ರನ್ ಮತ್ತು ಸಿ ಜಯಚಂದ್ರನ್ ಅವರ ವಿಭಾಗೀಯ ಪೀಠ ಪುರಸ್ಕರಿಸಿತು. ಪ್ರಕರಣದ ಇತರ ಆರೋಪಿಗಳಾದ ಅಬ್ದುಲ್ ಹಲೀಮ್ ಮತ್ತು ಅಬೂಬಕರ್ ಯೂಸುಫ್ ಅವರನ್ನು ಖುಲಾಸೆಗೊಳಿಸಿದ್ದ ವಿಚಾರಣಾ ನ್ಯಾಯಾಲಯದ ಆದೇಶ ಪ್ರಶ್ನಿಸಿ ಎನ್‌ಐಎ ಸಲ್ಲಿಸಿದ್ದ ಮೇಲ್ಮನವಿಯನ್ನೂ ಪೀಠ ಇದೇ ವೇಳೆ ವಜಾಗೊಳಿಸಿದೆ.
ಹೆಚ್ಚಿನ ಮಾಹಿತಿಗೆ ʼಬಾರ್ ಅಂಡ್ ಬೆಂಚ್ʼ ಇಂಗ್ಲಿಷ್ ತಾಣದ ಲಿಂಕ್ ಗಮನಿಸಿ.