ರಾಜ್ಯ ಕಾನೂನು ಸೇವಾ ಪ್ರಾಧಿಕಾರದಿಂದ ಟೆಲಿಗ್ರಾಂ ಚಾನಲ್‌ ಆರಂಭ; ಜೂನ್‌ 25ಕ್ಕೆ ಲೋಕ್ ಅದಾಲತ್

ಪ್ರಾಧಿಕಾರದ ಚಟುವಟಿಕೆಗಳ ಕುರಿತು ಹೆಚ್ಚಿನ ಮಾಹಿತಿಗಾಗಿ http://t.me/kslsa ಗೆ ಭೇಟಿ ನೀಡಬಹುದು ಎಂದು ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಚ್ ಶಶಿಧರ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಜ್ಯ ಕಾನೂನು ಸೇವಾ ಪ್ರಾಧಿಕಾರದಿಂದ ಟೆಲಿಗ್ರಾಂ ಚಾನಲ್‌ ಆರಂಭ; ಜೂನ್‌ 25ಕ್ಕೆ ಲೋಕ್ ಅದಾಲತ್

ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರ ತನ್ನ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸಲು ಟೆಲಿಗ್ರಾಮ್ ಚಾನಲ್ ಆರಂಭಿಸಿದೆ.

ಪ್ರಾಧಿಕಾರದಿಂದ ನಡೆಸಲಾಗುತ್ತಿರುವ ಕಾರ್ಯಕ್ರಮಗಳು ಹಾಗೂ ಚಟುವಟಿಕೆಗಳ ಬಗ್ಗೆ ಇನ್ನು ಹೆಚ್ಚಿನ ಮಾಹಿತಿಯನ್ನು ಸಾರ್ವಜನಿಕರಿಗೆ ಒದಗಿಸುವ ಉದ್ದೇಶದಿಂದ ಟೆಲಿಗ್ರಾಮ್ ಚಾನಲ್ ಆರಂಭಿಸಲಾಗಿದೆ. ಈ ಚಾನಲ್‌ನಲ್ಲಿ ಕಾನೂನಿನ ಬಗ್ಗೆ ಉಪಯುಕ್ತ ಮಾಹಿತಿಗಳು, ಕಾನೂನು ಸೇವಾ ಪ್ರಾಧಿಕಾರದ ಕಾರ್ಯಚಟುವಟಿಕೆಗಳ ಬಗ್ಗೆ ಮಾಹಿತಿ ಲಭ್ಯವಾಗುವುದರಿಂದ ಸಾರ್ವಜನಿಕರು ಅವರ ಕಾನೂನು ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಅನುಕೂಲವಾಗಲಿದೆ.

ಪ್ರಾಧಿಕಾರದ ಚಟುವಟಿಕೆಗಳ ಕುರಿತು ಹೆಚ್ಚಿನ ಮಾಹಿತಿಗಾಗಿ https://kslsa.kar.nic.in ಗೆ ಭೇಟಿ ನೀಡಬಹುದು. ಅದೇ ರೀತಿ ಟೆಲಿಗ್ರಾಮ್ ಚಾನಲ್‌ಗೆ ಸೇರಲು http://t.me/kslsa ಇದಕ್ಕೆ ಭೇಟಿ ಕೊಡಬಹುದು ಎಂದು ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಚ್ ಶಶಿಧರ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜೂ.25ಕ್ಕೆ ಲೋಕ್ ಅದಾಲತ್: ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರದಿಂದ ಜೂನ್‌ 25ರಂದು ರಾಜ್ಯವ್ಯಾಪಿ ರಾಷ್ಟ್ರೀಯ ಲೋಕ್ ಅದಾಲತ್ ಹಮ್ಮಿಕೊಳ್ಳಲಾಗುತ್ತಿದ್ದು, ಇದರಲ್ಲಿ ಸಾರ್ವಜನಿಕರು ನ್ಯಾಯಾಲಯಗಳಲ್ಲಿ ಬಾಕಿ ಇರುವ ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಬಹುದು ಎಂದು ಪ್ರಕಟಣೆ ತಿಳಿಸಿದೆ.

Related Stories

No stories found.
Kannada Bar & Bench
kannada.barandbench.com