ಲಖಿಂಪುರ ಖೇರಿ ಘಟನೆಯ ಪ್ರಮುಖ ಆರೋಪಿ ಆಶಿಶ್ ಮಿಶ್ರಾಗೆ ನೀಡಲಾಗಿರುವ ಜಾಮೀನನ್ನು ರದ್ದುಗೊಳಿಸುವಂತೆ ಕೋರಿ ಮೃತರ ಕುಟುಂಬಸ್ಥರು ಸಲ್ಲಿಸಿದ್ದ ಮನವಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಬುಧವಾರ ಉತ್ತರ ಪ್ರದೇಶ ಸರ್ಕಾರ ಸಹಿತ ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿದೆ. ಅರ್ಜಿಗೆ ವಿವರವಾದ ಪ್ರತಿಕ್ರಿಯೆಯನ್ನು ಸಲ್ಲಿಸಲು ಮತ್ತು ಸಾಕ್ಷಿಗಳನ್ನು ರಕ್ಷಿಸಲಾಗಿದೆಯೆ ಎಂದು ಖಚಿತಪಡಿಸಿಕೊಳ್ಳಲು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ, ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಹಾಗೂ ಹಿಮಾ ಕೊಹ್ಲಿ ನೇತೃತ್ವದ ಪೀಠ ಉತ್ತರ ಪ್ರದೇಶ ಸರ್ಕಾರಕ್ಕೆ ಸೂಚಿಸಿದೆ.
ಹೆಚ್ಚಿನ ಮಾಹಿತಿಗೆ ʼಬಾರ್ ಅಂಡ್ ಬೆಂಚ್ʼ ಇಂಗ್ಲಿಷ್ ತಾಣದ ಲಿಂಕ್ ಗಮನಿಸಿ.