ಆನೆಗೊಂದಿಯಲ್ಲಿನ ಉತ್ತರಾದಿ, ರಾಘವೇಂದ್ರ ಸ್ವಾಮಿ ಮಠದ ಭೂವಿವಾದ: ಜಂಟಿ ಸರ್ವೆ ಆದೇಶಕ್ಕೆ ತಡೆ

ಸರ್ವೆ ನಂಬರ್ 192ರ ಜಮೀನನ್ನು ಹೊಸದಾಗಿ ಜಂಟಿ ಸರ್ವೆ ನಡೆಸಿ ಅದರಂತೆ ಕಂದಾಯ ಮತ್ತು ಸರ್ವೆ ದಾಖಲೆಗಳನ್ನು ಸರಿಪಡಿಸಬೇಕು ಎಂದು ಕಂದಾಯ ಹಾಗೂ ಸರ್ವೆ ಇಲಾಖೆಗೆ ಏಕಸದಸ್ಯ ಪೀಠವು ನೀಡಿದ್ದ ಆದೇಶವನ್ನು ಅಮಾನತ್ತಿನಲ್ಲಿರಿಸಲಾಗಿದೆ.
Chief Justice N V Anjaria and K V Aravind, Karnataka HC
Chief Justice N V Anjaria and K V Aravind, Karnataka HC
Published on

ಉತ್ತರಾದಿ ಹಾಗೂ ರಾಘವೇಂದ್ರ ಸ್ವಾಮಿ ಮಠಗಳ ನಡುವಿನ ಕೊಪ್ಪಳ ಜಿಲ್ಲೆ ಆನೆಗೊಂದಿಯ ನವ ವೃಂದಾವನದ ಭೂ ಮಾಲೀಕತ್ವದ ವಿವಾದಕ್ಕೆ ಸಂಬಂಧಿಸಿದಂತೆ ಸರ್ವೆ ನಂಬರ್ 192ರ ಒಟ್ಟು ಜಮೀನಿನ ಜಂಟಿ ಸರ್ವೆ ನಡೆಸುವಂತೆ ನಿರ್ದೇಶಿಸಿದ್ದ ಕರ್ನಾಟಕ ಹೈಕೋರ್ಟ್‌ನ ಏಕಸದಸ್ಯ ಪೀಠದ ಆದೇಶವನ್ನು ವಿಭಾಗೀಯ ಪೀಠವು ಬುಧವಾರ ಅಮಾನತುಗೊಳಿಸಿ ಆದೇಶಿಸಿದೆ.

ಉತ್ತರಾದಿ ಮಠದ ಪೀಠಾಧಿಪತಿ ಸತ್ಯಾತ್ಮತೀರ್ಥ ಸ್ವಾಮೀಜಿ ಅವರು ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಎನ್ ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ ವಿ ಅರವಿಂದ್‌ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಉತ್ತರಾದಿ ಮಠದ ಪರ ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲ ಮುಕುಲ್ ರೋಹಟ್ಗಿ ವಾದ ಮಂಡಿಸಿದರು. ಕೆಲ ಕಾಲ ವಾದ ಆಲಿಸಿದ ಪೀಠವು ಮೇಲ್ಮನವಿಯನ್ನು ವಿಚಾರಣೆಗೆ ಅಂಗೀಕರಿಸಿತು.

Also Read
[ರಾಮಚಂದ್ರಾಪುರ ಮಠ ವಿವಾದ] ಅಂತಿಮ ವಿಚಾರಣೆ ವೇಳೆ ಮಧ್ಯಪ್ರವೇಶ ಮನವಿಗಳ ವಿಚಾರಣೆಗೆ ಮುಂದಾಗಲಿರುವ ಹೈಕೋರ್ಟ್‌

ಆನೆಗೊಂದಿಯಲ್ಲಿನ ನವ ವೃಂದಾವನ ಗಡ್ಡೆ ಇರುವ ಸರ್ವೆ ನಂಬರ್ 192ರ ಜಮೀನನ್ನು ಹೊಸದಾಗಿ ಜಂಟಿ ಸರ್ವೆ ನಡೆಸಿ ಅದರಂತೆ ಕಂದಾಯ ಮತ್ತು ಸರ್ವೆ ದಾಖಲೆಗಳನ್ನು ಸರಿಪಡಿಸಬೇಕು ಎಂದು ಕಂದಾಯ ಹಾಗೂ ಸರ್ವೇ ಇಲಾಖೆಗೆ ಏಕಸದಸ್ಯ ಪೀಠವು 2024ರ ಜುಲೈ 3ರಂದು ನೀಡಿದ್ದ ಆದೇಶವನ್ನು ಅಮಾನತ್ತಿನಲ್ಲಿಟ್ಟು ಆದೇಶಿಸಿತು. ವಿಚಾರಣೆಯನ್ನು ನವೆಂಬರ್ 13ಕ್ಕೆ ಮುಂದೂಡಲಾಗಿದೆ. ವಕೀಲರಾದ ವಿನಾಯಕ ಕುಲಕರ್ಣಿ ಹಾಗೂ ಅನಿಲ್ ಕೆಂಭಾವಿ ವಕಾಲತ್ತು ವಹಿಸಿದ್ದರು.

Kannada Bar & Bench
kannada.barandbench.com