ಬೆಂಗಳೂರು ಜಿಲ್ಲೆಯ ಎರಡು ವಿಶೇಷ ಜಿಲ್ಲಾಧಿಕಾರಿಗಳ ಹುದ್ದೆಗೆ ಕರ್ನಾಟಕ ಆಡಳಿತ ಸೇವೆಯ (ಕೆಎಎಸ್) ಕೇಡರ್‌ನ ಅಧಿಕಾರಿಗಳಾದ ಕೆ ಎಂ ಜಗದೀಶ್ ಮತ್ತು ಬಸವರಾಜ್ ಅವರನ್ನು ನೇಮಿಸಿರುವುದು ಕಾನೂನುಬಾಹಿರ ಎಂದು ಈಚೆಗೆ ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿದ್ದು, ಐಎಎಸ್ ಅಧಿಕಾರಿಗಳನ್ನು ಸದರಿ ಹುದ್ದೆಗೆ ನೇಮಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.
ಕರ್ನಾಟಕ ಭೂ ಕಂದಾಯ ಕಾಯಿದೆಯ ಸೆಕ್ಷನ್ 136(3) ಮತ್ತು ಇತರೆ ನಿಬಂಧನೆಗಳು ನ್ಯಾಯಿಕ ಸ್ವರೂಪದವಾಗಿರುವುದರಿಂದ ಇಲ್ಲಿ ಕರ್ತವ್ಯ ನಿರ್ವಹಿಸಲು ಐಎಎಸ್ ಅಧಿಕಾರಿಗಳನ್ನು ನೇಮಿಸಬೇಕು. ಈ ನೇಮಕಾತಿಯನ್ನು ಒಂದು ತಿಂಗಳ ಒಳಗೆ ಮಾಡಬೇಕು ಎಂದು ನ್ಯಾಯಮೂರ್ತಿಗಳಾದ ಬಿ ವಿ ನಾಗರತ್ನ ಮತ್ತು ಹಂಚಾಟೆ ಸಂಜೀವ್‌ಕುಮಾರ್ ಅವರಿದ್ದ ವಿಭಾಗೀಯ ಪೀಠವು ಆದೇಶಿಸಿದೆ.
ರಾಷ್ಟ್ರೀಯ ಭದ್ರತಾ ಕಾಯಿದೆ ಅಡಿ ತಪ್ಪಾಗಿ ತಮ್ಮ ಪುತ್ರನನ್ನು ಬಂಧಿಸಿದ್ದಕ್ಕೆ ಪರಿಹಾರ ನೀಡುವಂತೆ ಕೋರಿ ಸಾಮಾಜಿಕ ಕಾರ್ಯಕರ್ತ ಎರೆಂಡ್ರೊ ಲೈಚೋಮ್‌ಬಾಮ್ ಅವರ ತಂದೆ ಸಲ್ಲಿಸಿದ್ದ ಮನವಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಂಗಳವಾರ ಮಣಿಪುರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದ್ದು, ಪ್ರತಿಕ್ರಿಯಿಸುವಂತೆ ಆದೇಶಿಸಿ
ನ್ಯಾಯಮೂರ್ತಿಗಳಾದ ಡಿ ವೈ ಚಂದ್ರಚೂಡ್ ಮತ್ತು ಎಂ ಆರ್ ಶಾ ನೇತೃತ್ವದ ಪೀಠವು ಪರಿಹಾರದ ಕೋರಿಕೆಯು ಗಂಭೀರವಾದ ವಿಚಾರವಾಗಿದೆ ಎಂದಿದೆ. ಎನ್ಎಸ್ಎ ಅಡಿ ಪ್ರಕರಣಗಳನ್ನು ಹಿಂಪಡೆದಿರುವುದರಿಂದ ಪ್ರಕರಣವನ್ನು ಅಲ್ಲಿಗೆ ಕೈಬಿಡಬೇಕು ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಸರ್ಕಾರದ ಪರವಾಗಿ ಹೇಳಿದರು. ಅರ್ಜಿದಾರರ ಪರ ವಕೀಲ ಶಾದನ್ ಫರಾಸತ್ ಅವರು ಪರಿಹಾರದ ಮನವಿಯನ್ನು ಪರಿಗಣಿಸಬೇಕು ಎಂದು ಪೀಠಕ್ಕೆ ಮನವಿ ಮಾಡಿದರು. ಪ್ರತಿವಾದಿಗಳಿಗೆ ಪ್ರತ್ಯುತ್ತರ ಮನವಿ ಸಲ್ಲಿಸಲು ಎರಡು ವಾರಗಳ ಕಾಲಾವಕಾಶ ನೀಡಿರುವ ಪೀಠವು ವಿಚಾರಣೆ ಮುಂದೂಡಿದೆ.
ಕೋವಿಡ್ ಹಿನ್ನೆಲೆಯಲ್ಲಿ ದ್ವಿತೀಯ ಪಿಯುಸಿಯ ಸಾಮಾನ್ಯ ವಿದ್ಯಾರ್ಥಿಗಳ ಮೌಲ್ಯಮಾಪನಕ್ಕೆ 2020-21ರ ಶೈಕ್ಷಣಿಕ ವರ್ಷಕ್ಕೆ ಅನ್ವಯಿಸಿ ಅನುಸರಿಸಿರುವ ಮಾನದಂಡವನ್ನೇ ಮರುಪರೀಕ್ಷೆ ತೆಗೆದುಕೊಂಡಿರುವ (ರಿಪೀಟರ್ಸ್) ವಿದ್ಯಾರ್ಥಿಗಳಿಗೂ ಅನ್ವಯಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿಯ ಸಂಬಂಧ ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರದ ಪ್ರತಿಕ್ರಿಯೆಯನ್ನು ಬಯಸಿದೆ.
ಅರ್ಜಿ ವಿಚಾರಣೆಯನ್ನು ನಡೆಸಿದ ನ್ಯಾ. ಬಿ ವಿ ನಾಗರತ್ನ ಮತ್ತು ನ್ಯಾ. ಹಂಚಾಟೆ ಸಂಜೀವ್ ಕುಮಾರ್ ಅವರಿದ್ದ ವಿಭಾಗೀಯ ಪೀಠವು ಪ್ರಕರಣವನ್ನು ಜು.17ಕ್ಕೆ ಮುಂದೂಡಿತು. ಆದರೆ, ಇದಕ್ಕೂ ಮುನ್ನ ಮತ್ತೊಂದು ಅರ್ಜಿಯನ್ನು ಆಲಿಸುವ ವೇಳೆ ರಾಜ್ಯ ಸರ್ಕಾರವು ಪಿಯುಸಿ ಮರುಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಕೃಪಾಂಕ ನೀಡುವ ಮೂಲಕ ಉತ್ತೀರ್ಣಗೊಳಿಸಲಾಗುವುದು ಎಂದು ನ್ಯಾಯಾಲಯಕ್ಕೆ ತಿಳಿಸಿದೆ. ಈ ಹಿಂದಿನ ಯತ್ನದಲ್ಲಿ ಗಳಿಸಿದ್ದ ಅಂಕಗಳಿಗೆ ಹೆಚ್ಚುವರಿಯಾಗಿ ಕೃಪಾಂಕಗಳನ್ನು ನೀಡುವ ಮುಖೇನ ಮರುಪರೀಕ್ಷೆ ವಿದ್ಯಾರ್ಥಿಗಳನ್ನು ಉತ್ತೀರ್ಣ ಮಾಡಲಾಗುವುದು ಎಂದು ಸರ್ಕಾರವು ತಿಳಿಸಿದೆ.