![[ಸದನ ಅವಲೋಕನ] ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಳ ಸೇರಿ 4 ವಿಧೇಯಕ ಮಂಡನೆ; ಬಂಧಿಗಳ ಗುರುತಿಸುವಿಕೆ ವಿಧೇಯಕ ಹಿಂಪಡೆತ](http://media.assettype.com/barandbench-kannada%2F2022-12%2F0be2e759-fb42-4e78-ae4c-c13bb4c23741%2FWhatsApp_Image_2022_12_20_at_12_14_17__1_.jpeg?w=480&auto=format%2Ccompress&fit=max)
ಕರ್ನಾಟಕ ವಿಧಾನಸಭೆಯಲ್ಲಿ ಇಂದು ಅಧಿಕೃತವಾಗಿ ಚಟುವಟಿಕೆಗಳು ಆರಂಭವಾಗಿದ್ದು, ನಾಲ್ಕು ವಿಧೇಯಕಗಳು ಮಂಡನೆಯಾಗಿವೆ. ಒಂದು ವಿಧೇಯಕವನ್ನು ಹಿಂಪಡೆಯಲಾಗುತ್ತದೆ ಎಂದು ಸರ್ಕಾರ ತಿಳಿಸಿದೆ.
ಕರ್ನಾಟಕ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಪಂಗಡಗಳು (ಶೈಕ್ಷಣಿಕ ಸಂಸ್ಥೆಗಳಲ್ಲಿನ ಸ್ಥಾನಗಳಲ್ಲಿ ಮತ್ತು ರಾಜ್ಯಾಧೀನ ಸೇವೆಗಳಲ್ಲಿನ ನೇಮಕಾತಿ ಅಥವಾ ಹುದ್ದೆಗಳಲ್ಲಿ ಮೀಸಲಾತಿ) ವಿಧೇಯಕವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಡಿಸಿದರು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಪ್ರಮಾಣವನ್ನು ಶೇ.6ಕ್ಕೆ ಏರಿಕೆ ಮಾಡಿ ಈಗಾಗಲೇ ಸರ್ಕಾರವು ಸುಗ್ರೀವಾಜ್ಞೆ ಹೊರಡಿಸಿದೆ.
ಭೂ ಕಂದಾಯ (ಎರಡನೇ ತಿದ್ದುಪಡಿ) ವಿಧೇಯಕವನ್ನು ಕಂದಾಯ ಸಚಿವ ಆರ್ ಅಶೋಕ್ ಮಂಡನೆ ಮಾಡಿದ್ದಾರೆ.
ವಿಶೇಷ ಹೂಡಿಕೆ ಪ್ರದೇಶ ವಿಧೇಯಕವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಮಂಡನೆ ಮಾಡಿದ್ದಾರೆ.
ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ವಿಧೇಯಕವನ್ನು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ ಸುನಿಲ್ ಕುಮಾರ್ ಮಂಡಿಸಿದ್ದಾರೆ.
ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಕಳೆದ ವರ್ಷ ಮಂಡಿಸಿದ್ದ ಬಂಧಿಗಳ ಗುರುತಿಸುವಿಕೆ (ಕರ್ನಾಟಕ ತಿದ್ದುಪಡಿ) ವಿಧೇಯಕವನ್ನು ಹಿಂಪಡೆಯಲಿದ್ದಾರೆ.