ಸುಲಿಗೆ ಪ್ರಕರಣ: ಐಪಿಎಸ್‌ ಅಧಿಕಾರಿ ಶ್ರೀನಾಥ್‌ ಜೋಶಿ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿದ ನ್ಯಾಯಾಲಯ

ಶ್ರೀನಾಥ್‌ ಜೋಶಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ನಡೆಸಿ ಜುಲೈ 16ರಂದು ಕಾಯ್ದಿರಿಸಿದ್ದ ಆದೇಶವನ್ನು ಲೋಕಾಯುಕ್ತ ನ್ಯಾಯಾಲಯದ ನ್ಯಾಯಾಧೀಶ ಕೆ ಎಂ ರಾಧಾಕೃಷ್ಣ ಇಂದು ಪ್ರಕಟಿಸಿದರು.
Karnataka Lokayukta
Karnataka Lokayukta
Published on

ಲೋಕಾಯುಕ್ತ ಅಧಿಕಾರಿಗಳ ಹೆಸರಿನಲ್ಲಿ ಸರ್ಕಾರಿ ನೌಕರರಿಂದ ಹಣ ವಸೂಲಿ ಮಾಡಿದ ಪ್ರಕರಣದಲ್ಲಿ ಐಪಿಎಸ್‌ ಅಧಿಕಾರಿ ಶ್ರೀನಾಥ್‌ ಜೋಶಿ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಶುಕ್ರವಾರ ಲೋಕಾಯುಕ್ತ ವಿಶೇಷ ನ್ಯಾಯಾಲಯವು ವಜಾಗೊಳಿಸಿದೆ. ಇದರಿಂದ ಜೋಶಿಗೆ ಬಂಧನದ ಭೀತಿ ಎದುರಾಗಿದೆ.

ಶ್ರೀನಾಥ್‌ ಜೋಶಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ನಡೆಸಿ ಜುಲೈ 16ರಂದು ಕಾಯ್ದಿರಿಸಿದ್ದ ಆದೇಶವನ್ನು ಲೋಕಾಯುಕ್ತ ನ್ಯಾಯಾಲಯದ ನ್ಯಾಯಾಧೀಶ ಕೆ ಎಂ ರಾಧಾಕೃಷ್ಣ ಅವರು ಶುಕ್ರವಾರ ಪ್ರಕಟಿಸಿದರು. ವಿಸ್ತೃತ ಆದೇಶ ಇನ್ನಷ್ಟೇ ಪ್ರಕಟವಾಗಬೇಕಿದೆ.

Judge K M Radhakrishna
Judge K M Radhakrishna

ಭ್ರಷ್ಟ ಅಧಿಕಾರಿಗಳ ವಿರುದ್ಧ ನಡೆಸಲಾಗುವ ದಾಳಿಗಳನ್ನು ಹೆಸರಿಸಿ ಸರ್ಕಾರಿ ಅಧಿಕಾರಿಗಳನ್ನು ಬ್ಲ್ಯಾಕ್‌ಮೇಲ್ ಮಾಡುವ ಮೂಲಕ ಹಾಗೂ ದಾಳಿಗಳ ಕುರಿತು ಮುಂಚಿತವಾಗಿಯೇ ಮಾಹಿತಿಯನ್ನು ಸೋರಿಕೆ ಮಾಡುವ ಮುಖಾಂತರ ನಿಂಗಪ್ಪ ಅಪರಾಧ ಎಸಗಿದ್ದಾರೆ ಎಂದು ಎಫ್‌ಐಆರ್‌ನಲ್ಲಿ ದಾಖಲಿಸಲಾಗಿದ್ದು, ಅವರ ವಿರುದ್ಧ ಭ್ರಷ್ಟಾಚಾರ ಪ್ರತಿಬಂಧ ಕಾಯಿದೆ–1988ರ ಸೆಕ್ಷನ್ 7a ಮತ್ತು 7A ಅಡಿ ಪ್ರಕರಣ ದಾಖಲಿಸಲಾಗಿದೆ.

Also Read
ಸರ್ಕಾರಿ ನೌಕರರ ಸುಲಿಗೆ: ಐಪಿಎಸ್‌ ಅಧಿಕಾರಿ ಶ್ರೀನಾಥ್‌ ಜೋಶಿ ನಿರೀಕ್ಷಣಾ ಜಾಮೀನು ಆದೇಶ ಕಾಯ್ದಿರಿಸಿದ ನ್ಯಾಯಾಲಯ

ಈ ಪ್ರಕರಣದಲ್ಲಿ ತನಿಖೆಗೆ ಹಾಜರಾಗುವಂತೆ ಲೋಕಾಯುಕ್ತ ಪೊಲೀಸರು ಶ್ರೀನಾಥ್‌ ಜೋಶಿಗೆ ನೋಟಿಸ್‌ ಜಾರಿ ಮಾಡಿದ್ದರು. ಇದನ್ನು ಹೈಕೋರ್ಟ್‌ನಲ್ಲಿ ಶ್ರೀನಾಥ್‌ ಜೋಶಿ ಪ್ರಶ್ನಿಸಿದ್ದರು. ಹೊಸದಾಗಿ ಶ್ರೀನಾಥ್‌ಗೆ ನೋಟಿಸ್‌ ಜಾರಿ ಮಾಡಲು ಹಾಗೂ ನಿರೀಕ್ಷಣಾ ಜಾಮೀನು ಸೇರಿದಂತೆ ಕಾನೂನಿನಲ್ಲಿ ಲಭ್ಯವಿರುವ ಅವಕಾಶಗಳನ್ನು ಬಳಸುವಂತೆ ಜೋಶಿಗೆ ಹೈಕೋರ್ಟ್‌ ನಿರ್ದೇಶಿಸಿ, ಅರ್ಜಿ ಇತ್ಯರ್ಥಪಡಿಸಿತ್ತು.

ಇನ್ನು, ನಿಂಗಪ್ಪ ಸಾವಂತ್‌ ಅವರು ತಮ್ಮ ವಿರುದ್ಧದ ಎಫ್‌ಐಆರ್‌ ರದ್ದತಿ ಕೋರಿರುವ ಅರ್ಜಿಯ ಆದೇಶವನ್ನು ಕರ್ನಾಟಕ ಹೈಕೋರ್ಟ್‌ ಕಾಯ್ದಿರಿಸಿದೆ. 

Kannada Bar & Bench
kannada.barandbench.com