ಲಂಚ ಪ್ರಕರಣ: ಐಎಎಸ್‌ ಅಧಿಕಾರಿ ಮಂಜುನಾಥ್‌ ಜಾಮೀನು ಅರ್ಜಿ ತೀರ್ಪು ಜುಲೈ 11ಕ್ಕೆ

ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧಿತರಾಗಿದ್ದ ಮಂಜುನಾಥ್‌ ಅವರನ್ನು ಭ್ರಷ್ಟಾಚಾರ ನಿಯಂತ್ರಣ ಕಾಯಿದೆ ಅಡಿ ಸ್ಥಾಪಿಸಲಾಗಿರುವ ವಿಶೇಷ ನ್ಯಾಯಾಲಯವು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿತ್ತು.
Arrested IAS Officer J Manjunath
Arrested IAS Officer J Manjunath
Published on

ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿರುವ ಅಮಾನತುಗೊಂಡಿರುವ ಐಎಎಸ್‌ ಅಧಿಕಾರಿ ಜೆ ಮಂಜುನಾಥ್‌ ಅವರ ಜಾಮೀನು ಮನವಿಯ ವಿಚಾರಣೆಯನ್ನು ಬುಧವಾರ ನಡೆಸಿದ ಲೋಕಾಯುಕ್ತ ವಿಶೇಷ ನ್ಯಾಯಾಲಯವು ಜುಲೈ 11ಕ್ಕೆ ತೀರ್ಪನ್ನು ಕಾಯ್ದಿರಿಸಿದೆ.

ಆನೇಕಲ್‌ ತಾಲ್ಲೂಕಿನ ಕೂಡ್ಲು ಗ್ರಾಮದ 38ಗುಂಟೆ ಜಮೀನು ಒಡೆತನಕ್ಕೆ ಸಂಬಂಧಿಸಿದಂತೆ ಅನುಕೂಲಕರ ಆದೇಶ ಮಾಡಲು ಅಜಂ ಪಾಷಾ ಎಂಬುವರಿಂದ 5 ಲಕ್ಷ ರೂಪಾಯಿ ಪಡೆಯುತ್ತಿದ್ದಾಗ ಬೆಂಗಳೂರು ಜಿಲ್ಲಾಧಿಕಾರಿ ಕಚೇರಿಯ ವ್ಯವಸ್ಥಾಪಕ ಮಹೇಶ್‌ ಮತ್ತು ನ್ಯಾಯಾಲಯ ವಿಭಾಗದ ಸಹಾಯಕ ಚೇತನ್‌ ಕುಮಾರ್‌ ಅಲಿಯಾಸ್‌ ಚಂದ್ರ ಅವರನ್ನು ಮೇ 21ರಂದು ಎಸಿಬಿ ಬಂಧಿಸಿತ್ತು. ಈ ಪ್ರಕರಣದಲ್ಲಿ ಮಂಜುನಾಥ್‌ ಅವರನ್ನು ಮೂರನೇ ಆರೋಪಿಯಾಗಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಜುನಾಥ್‌ ಅವರನ್ನು ಎಸಿಬಿ ಅಧಿಕಾರಿಗಳು ಸೋಮವಾರ ವಶಕ್ಕೆ ಪಡೆದಿದ್ದರು.

ಹೆಚ್ಚುವರಿ ಸಿಟಿ ಸಿವಿಲ್‌ ಮತ್ತು ಸತ್ರ ಹಾಗೂ ಭ್ರಷ್ಟಾಚಾರ ನಿಯಂತ್ರಣ ಕಾಯಿದೆ ಅಡಿ ಸ್ಥಾಪಿಸಲಾಗಿರುವ ವಿಶೇಷ ನ್ಯಾಯಾಲಯವು ಮಂಜುನಾಥ್‌ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿತ್ತು.

Kannada Bar & Bench
kannada.barandbench.com