
Allahabad High Court
ಅಪರಾಧ ದಂಡ ಸಂಹಿತೆ (ಸಿಆರ್‌ಪಿಸಿ) ಸೆಕ್ಷನ್ 156 (3)ರ ಅಡಿ ತನಿಖೆಯ 'ಮೇಲ್ವಿಚಾರಣೆ' ಮಾಡುವ ಅಧಿಕಾರ ಮ್ಯಾಜಿಸ್ಟ್ರೇಟ್ ಅವರಿಗೆ ಇದೆ ಎಂದು ಅಲಾಹಾಬಾದ್ ಹೈಕೋರ್ಟ್ ಇತ್ತೀಚೆಗೆ ತಿಳಿಸಿದ್ದು ಪೊಲೀಸ್ ತನಿಖೆಯಿಂದ ನೊಂದ ವ್ಯಕ್ತಿ ತನಿಖೆಯ ಮೇಲ್ವಿಚಾರಣೆಗಾಗಿ ಮ್ಯಾಜಿಸ್ಟ್ರೇಟ್ ಅವರನ್ನು ಸಂಪರ್ಕಿಸಬಹುದು ಎಂದು ಹೇಳಿದೆ. ಕ್ರಿಮಿನಲ್ ಪ್ರಕರಣವೊಂದರಲ್ಲಿ ನ್ಯಾಯಯುತ ತನಿಖೆ ನಡೆಸಲು ಪ್ರತಿವಾದಿ ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ಕುರಿತಂತೆ ನ್ಯಾಯಮೂರ್ತಿಗಳಾದ ಅಂಜನಿ ಕುಮಾರ್ ಮಿಶ್ರಾ ಮತ್ತು ದೀಪಕ್ ವರ್ಮಾ ಅವರ ವಿಭಾಗೀಯ ಪೀಠ ಈ ತೀರ್ಪು ನೀಡಿದೆ
ಹೆಚ್ಚಿನ ಮಾಹಿತಿಗೆ ʼಬಾರ್ ಅಂಡ್ ಬೆಂಚ್ʼ ಇಂಗ್ಲಿಷ್ ತಾಣದ ಲಿಂಕ್ ಗಮನಿಸಿ.