Nawab Malik, Anil Deshmukh
ಸುದ್ದಿಗಳು
ಎಂಎಲ್‌ಸಿ ಚುನಾವಣೆ: ಮತದಾನಕ್ಕಾಗಿ ನವಾಬ್ ಮಲಿಕ್, ದೇಶಮುಖ್ ಮಾಡಿದ್ದ ಮನವಿ ತಿರಸ್ಕರಿಸಿದ ಬಾಂಬೆ ಹೈಕೋರ್ಟ್ [ಚುಟುಕು]
ಮಹಾರಾಷ್ಟ್ರ ಎಂಎಲ್‌ಸಿ ಚುನಾವಣೆಗೆ ಮತದಾನ ಮಾಡಲು ಅನುಮತಿ ಕೋರಿ ಸಚಿವ ನವಾಬ್ ಮಲಿಕ್ ಹಾಗೂ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಅವರು ಸಲ್ಲಿಸಿದ್ದ ಅರ್ಜಿಯನ್ನು ಬಾಂಬೆ ಹೈಕೋರ್ಟ್ ಶುಕ್ರವಾರ ತಿರಸ್ಕರಿಸಿದೆ.
ನ್ಯಾಯಮೂರ್ತಿ ಎನ್ ಜೆ ಜಮಾದಾರ್ ಅವರು ನೀಡಿರುವ ತೀರ್ಪು ಜೂ. 20ರಂದು ನಡೆಯಲಿರುವ ಚುನಾವಣೆಯಲ್ಲಿ ಮತ ಚಲಾಯಿಸಲು ಅನುವು ಮಾಡಿಕೊಡುವ ಸಲುವಾಗಿ ಇಬ್ಬರೂ ಮಂತ್ರಿಗಳನ್ನು ನ್ಯಾಯಾಂಗ ಬಂಧನದಿಂದ ಬಿಡುಗಡೆ ಮಾಡುವುದಿಲ್ಲ ಎಂದು ಹೇಳುತ್ತದೆ. ಕೆಲ ದಿನಗಳ ಹಿಂದೆ ರಾಜ್ಯಸಭೆ ಚುನಾವಣೆಗೆ ಮತ ಚಲಾಯಿಸಲು ಅನುಮತಿ ಕೋರಿ ಈ ಇಬ್ಬರೂ ಸಲ್ಲಿಸಿದ್ದ ಅರ್ಜಿಯನ್ನು ಕೂಡ ಬಾಂಬೆ ಹೈಕೋರ್ಟ್ ತಿರಸ್ಕರಿಸಿದ್ದನ್ನು ಇಲ್ಲಿ ಸ್ಮರಿಸಬಹುದು.