ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು: ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಏಕನಾಥ್ ಶಿಂಧೆ ಬಣ

ಪ್ರಕರಣವನ್ನು ತುರ್ತು ಪಟ್ಟಿಗಾಗಿ ನಾಳೆ ಉಲ್ಲೇಖಿಸುವ ಸಾಧ್ಯತೆಯಿದೆ.
Eknath Shinde, Uddhav Thackeray and Supreme Court
Eknath Shinde, Uddhav Thackeray and Supreme Court Facebook

ಏಕನಾಥ್‌ ಶಿಂಧೆ ಬಣ ಸಲ್ಲಿಸಿರುವ ಎರಡು ಪ್ರತ್ಯೇಕ ಅರ್ಜಿಗಳಿಂದಾಗಿ ಮಹಾರಾಷ್ಟ್ರದ ರಾಜಕೀಯ ಬಿಕ್ಕಟ್ಟು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದೆ. ಶಿವಸೇನಾ ಶಾಸಕಾಂಗ ಪಕ್ಷದ ನಾಯಕರಾಗಿ ಅಜಯ್ ಚೌಧರಿ ನೇಮಕವನ್ನು ಪ್ರಶ್ನಿಸಿ ಒಂದು ಅರ್ಜಿಯನ್ನು ಸಲ್ಲಿಸಲಾಗಿದ್ದರೆ ಮತ್ತೊಂದು ಅರ್ಜಿ, 16 ಬಂಡಾಯ ಶಾಸಕರಿಗೆ ಮಹಾರಾಷ್ಟ್ರ ವಿಧಾನಸಭೆಯ ಉಪ ಸ್ಪೀಕರ್ ನೀಡಿದ ಅನರ್ಹತೆ ನೋಟಿಸನ್ನು ಪ್ರಶ್ನಿಸಿದೆ.

ಪ್ರಕರಣವನ್ನು ತುರ್ತು ಪಟ್ಟಿಗಾಗಿ ನಾಳೆ ಉಲ್ಲೇಖಿಸುವ ಸಾಧ್ಯತೆಯಿದೆ.

Also Read
ʼಮಹಾʼ ಬಿಕ್ಕಟ್ಟು: ಅನರ್ಹ ಇಲ್ಲವೆ ರಾಜೀನಾಮೆಯಿತ್ತ ಶಾಸಕರು ಚುನಾವಣೆಗೆ ಸ್ಪರ್ಧಿಸದಂತೆ ತಡೆಯಲು ಸುಪ್ರೀಂಗೆ ಮನವಿ

ಕಳೆದ ಕೆಲವು ದಿನಗಳಿಂದ ಶಿಂಧೆ ಹಾಗೂ ಬಂಡಾಯ ಶಾಸಕರು ರಾಜ್ಯ ತೊರೆದು ಅಸ್ಸಾಂನ ಗುವಾಹಟಿಯಲ್ಲಿ ಬೀಡುಬಿಟ್ಟ ನಂತರ ಮಹಾರಾಷ್ಟ್ರ ರಾಜಕೀಯ ಗೊಂದಲದಲ್ಲಿ ಸಿಲುಕಿದೆ. ಕಾಂಗ್ರೆಸ್ ಮತ್ತು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದೊಂದಿಗೆ ಶಿವಸೇನಾ ಮೈತ್ರಿ ಮಾಡಿಕೊಂಡಿರುವ ಬಗ್ಗೆ ಶಿಂಧೆ ಬಣ ಅಸಮಾಧಾನ ವ್ಯಕ್ತಪಡಿಸಿದೆ. ಶಿವಸೇನಾ ಸಂಸ್ಥಾಪಕರಾದ ಬಾಳಾಸಾಹೇಬ್‌ ಠಾಕ್ರೆ ನಂಬಿದ್ದ ತತ್ವಗಳನ್ನು ತಾನು ಪ್ರತಿಪಾದಿಸುತ್ತಿರುವುದಾಗಿ ಹೇಳಿಕೊಂಡಿರುವ ಗುಂಪು ತನ್ನನ್ನು ತಾನು ಶಿವಸೇನಾ ಬಾಳಾಸಾಹೇಬ್‌ ಬಣ ಎಂದು ಕರೆದುಕೊಂಡಿದೆ.

ಎರಡು ಬಣಗಳ ನಡುವಿನ ಕಲಹ ರಾಜ್ಯದಲ್ಲಿ ಇತ್ತೀಚೆಗೆ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಅಚ್ಚರಿಯ ಗೆಲುವು ಸಾಧಿಸಲು ಕಾರಣವಾಗಿತ್ತು.

Related Stories

No stories found.
Kannada Bar & Bench
kannada.barandbench.com