ಗಡಿಪಾರು ಆದೇಶ ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ ಮಹೇಶ್‌ ಶೆಟ್ಟಿ ತಿಮರೋಡಿ

ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿಗೆ ಗಡಿಪಾರು ಮಾಡಿ ಸೆಪ್ಟೆಂಬರ್ 18ರಂದು ಪುತ್ತೂರು ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗೀಸ್ ಹೊರಡಿಸಿರುವ ಆದೇಶವನ್ನು ತಿಮರೋಡಿ ಪ್ರಶ್ನಿಸಿದ್ದಾರೆ.
ಗಡಿಪಾರು ಆದೇಶ ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ ಮಹೇಶ್‌ ಶೆಟ್ಟಿ ತಿಮರೋಡಿ
Published on

ದಕ್ಷಿಣ‌ ಕನ್ನಡ ಜಿಲ್ಲೆಯಿಂದ ಒಂದು ವರ್ಷದ ಅವಧಿಗೆ ಗಡಿಪಾರು ಮಾಡಿ ಪುತ್ತೂರು ಸಹಾಯಕ ಆಯುಕ್ತರು ಹೊರಡಿಸಿರುವ ಆದೇಶ ರದ್ದು ಕೋರಿ ಮಹೇಶ್ ಶೆಟ್ಟಿ ತಿಮರೋಡಿ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿಗೆ ಗಡಿಪಾರು ಮಾಡಿ ಸೆಪ್ಟೆಂಬರ್ 18ರಂದು ಪುತ್ತೂರು ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗೀಸ್ ಹೊರಡಿಸಿರುವ ಆದೇಶ ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಸಿ ಎಂ ಪೂಣಚ್ಚ ಅವರ ರಜಾಕಾಲೀನ ಏಕಸದಸ್ಯ ಪೀಠ ಮಂಗಳವಾರ ನಡೆಸಲಿದೆ.

Also Read
ಬಿ ಎಲ್‌ ಸಂತೋಷ್‌ ಅವಹೇಳನ: ಎಫ್‌ಐಆರ್‌ ರದ್ದತಿ ಕೋರಿ ಹೈಕೋರ್ಟ್‌ ಕದತಟ್ಟಿದ ಮಹೇಶ್‌ ತಿಮರೋಡಿ

ಅರ್ಜಿಯಲ್ಲಿ ರಾಜ್ಯ ಗೃಹ ಇಲಾಖೆ, ಪುತ್ತೂರು ಸಹಾಯಕ ಆಯುಕ್ತರು, ಬಂಟ್ವಾಳ ಉಪ ವಿಭಾಗದ ಉಪ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಬೆಳ್ತಂಗಡಿ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಅವರನ್ನು ಪ್ರತಿವಾದಿಯಾಗಿಸಲಾಗಿದೆ.

ಗಡಿಪಾರು ಆದೇಶ ರದ್ದು ಕೋರಿರುವ ಮಹೇಶ್ ಶೆಟ್ಟಿ ತಿಮರೋಡಿ, ಅರ್ಜಿ ಇತ್ಯರ್ಥವಾಗುವವರೆಗೆ ಆದೇಶ ಜಾರಿಗೆ ತಡೆ ನೀಡುವಂತೆ ಮಧ್ಯಂತರ ಮನವಿ ಮಾಡಿದ್ದಾರೆ.

Kannada Bar & Bench
kannada.barandbench.com