ವಕೀಲರು, ಕಕ್ಷಿದಾರರು ಹಾಗೂ ಸಾರ್ವಜನಿಕರಿಗೆ ನ್ಯಾಯಾಲಯದ ಕಲಾಪಗಳು ಮತ್ತು ಪ್ರಕರಣಗಳ ಬಗ್ಗೆ ಮಾಹಿತಿ ಒದಗಿಸುವ ಇ- ಕೋರ್ಟ್ ಅಂತರ್ಜಾಲ ವ್ಯವಸ್ಥೆ ಕಳೆದ ಒಂದು ವಾರದಿಂದ ದಕ್ಷಿಣ ಕನ್ನಡ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಕಾರ್ಯ ನಿರ್ವಹಿಸದೇ ಇರುವುದಕ್ಕೆ ಮಂಗಳೂರು ವಕೀಲರ ಸಂಘ ಅಸಮಾಧಾನ ವ್ಯಕ್ತಪಡಿಸಿದೆ.
ವಿಜಯಪುರ, ಉತ್ತರ ಕನ್ನಡ, ತುಮಕೂರು ಮತ್ತಿತರ ಜಿಲ್ಲೆಗಳಲ್ಲಿ ಕೂಡ ಅಂತರ್ಜಾಲ ವ್ಯವಸ್ಥೆ ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ ಎಂದು ಪತ್ರಿಕಾ ಪ್ರಕಟಣೆಯಲ್ಲಿ ಸಂಘ ತಿಳಿಸಿದೆ.
ಇ- ಕೋರ್ಟ್ ಅಂತರ್ಜಾಲ ವ್ಯವಸ್ಥೆಯನ್ನು ನಿರ್ವಹಿಸುತ್ತಿರುವ ಎನ್‌ಐಸಿ ಹಾಗೂ ಸಂಬಂಧಪಟ್ಟ ಇಲಾಖೆಗಳು ಕೂಡಲೇ ಗಮನಹರಿಸಿ ಇ- ಕೋರ್ಟ್ ವ್ಯವಸ್ಥೆ ಸರಿಪಡಿಸಬೇಕೆಂದು ಮಂಗಳೂರು ವಕೀಲರ ಸಂಘ ಆಗ್ರಹಿಸಿದೆ.
ಒಂದು ವೇಳೆ ಸಮಸ್ಯೆ ಸರಿಪಡಿಸುವುದು ವಿಳಂಬವಾದಲ್ಲಿ ವಕೀಲರು ಪ್ರತಿಭಟನೆಯ ಮಾರ್ಗ ಹಿಡಿಯಬೇಕಾಗಬಹುದು ಎಂದು ಸಂಘದ ಅಧ್ಯಕ್ಷರಾದ ಪೃಥ್ವಿರಾಜ್ ರೈ ಕೆ ಎಚ್ಚರಿಸಿದ್ದಾರೆ.