ಮೀಡಿಯಾ ಒನ್‌ ನಿಷೇಧ ವಿರುದ್ಧ ವಾಹಿನಿ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆಗೆ ಸಮ್ಮತಿಸಿದ ಸುಪ್ರೀಂ [ಚುಟುಕು]

Media One and Supreme Court

Media One and Supreme Court


Published on

ಮಲಯಾಳಂ ಸುದ್ದಿವಾಹಿನಿ ಮೀಡಿಯಾ ಒನ್‌ ಪರವಾನಗಿ ರದ್ದುಪಡಿಸಿದ್ದ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ನಿರ್ಧಾರ ಪ್ರಶ್ನಿಸಿ ಸುದ್ದಿ ವಾಹಿನಿ ಸಲ್ಲಿಸಿದ್ದ ಮೇಲ್ಮನವಿಯನ್ನು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್‌ ಸಮ್ಮತಿಸಿದೆ. ಮಾರ್ಚ್ 11 ರಂದು ಶುಕ್ರವಾರ ಪ್ರಕರಣದ ವಿಚಾರಣೆ ನಡೆಯಲಿದೆ. ಪ್ರಕರಣವನ್ನು ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಎನ್‌ ವಿ ರಮಣ ಅವರಿದ್ದ ಪೀಠದ ಮುಂದೆ ಪ್ರಸ್ತಾಪಿಸಿದ ಹಿರಿಯ ನ್ಯಾಯವಾದಿ ದುಶ್ಯಂತ್‌ ದವೆ ಪತ್ರಿಕಾ ಸ್ವಾತಂತ್ರ್ಯ ಅಪಾಯದಲ್ಲಿರುವ ಕಾರಣಕ್ಕೆ ಪ್ರಕರಣದ ತುರ್ತು ವಿಚಾರಣೆ ಕೋರಿದರು. ಸಚಿವಾಲಯದ ನಿರ್ಧಾರವನ್ನು ಈ ಹಿಂದೆ ಕೇರಳ ಹೈಕೋರ್ಟ್‌ ವಿಭಾಗೀಯ ಪೀಠ ಎತ್ತಿಹಿಡಿದಿತ್ತು.

ಹೆಚ್ಚಿನ ಮಾಹಿತಿಗೆ ʼಬಾರ್‌ ಅಂಡ್‌ ಬೆಂಚ್‌ʼ ಇಂಗ್ಲಿಷ್‌ ತಾಣದ ಲಿಂಕ್‌ ಗಮನಿಸಿ.

Kannada Bar & Bench
kannada.barandbench.com