ಮೀಡಿಯಾ ಒನ್ ನಿಷೇಧ: ಕೇಂದ್ರ ಅವಲಂಬಿಸಿರುವ ಸಾಕ್ಷ್ಯಗಳನ್ನು ಸಲ್ಲಿಸುವಂತೆ ನಿರ್ದೇಶಿಸಿದ ಸುಪ್ರೀಂ [ಚುಟುಕು]

ಮೀಡಿಯಾ ಒನ್ ನಿಷೇಧ: ಕೇಂದ್ರ ಅವಲಂಬಿಸಿರುವ ಸಾಕ್ಷ್ಯಗಳನ್ನು ಸಲ್ಲಿಸುವಂತೆ ನಿರ್ದೇಶಿಸಿದ ಸುಪ್ರೀಂ [ಚುಟುಕು]

supreme court and mediaone

ರಾಷ್ಟ್ರೀಯ ಭದ್ರತೆಯ ಆಧಾರದ ಮೇಲೆ ತನ್ನ ಪ್ರಸಾರ ಪರವಾನಗಿಯನ್ನು ರದ್ದುಗೊಳಿಸುವ ಕೇಂದ್ರ ಸರ್ಕಾರದ ನಿರ್ಧಾರ ಪ್ರಶ್ನಿಸಿ ಮಲಯಾಳಂ ಸುದ್ದಿವಾಹಿನಿ ಮೀಡಿಯಾ ಒನ್ ಸಲ್ಲಿಸಿದ್ದ ಮೇಲ್ಮನವಿಯ ಕುರಿತು ಪ್ರತಿಕ್ರಿಯೆ ಕೇಳಿ ಸುಪ್ರೀಂ ಕೋರ್ಟ್‌ ಗುರುವಾರ ಕೇಂದ್ರ ಸರ್ಕಾರಕ್ಕೆ ನೋಟಿಸ್‌ ನೀಡಿದೆ. ತಾನು ಅವಲಂಬಿಸಿರುವ ಎಲ್ಲಾ ಸಾಕ್ಷ್ಯಗಳನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ಕೇಂದ್ರಕ್ಕೆ ಆದೇಶಿಸಿದ ನ್ಯಾಯಮೂರ್ತಿಗಳಾದ ಡಿ ವೈ ಚಂದ್ರಚೂಡ್, ಸೂರ್ಯಕಾಂತ್ ಮತ್ತು ವಿಕ್ರಮ್ ನಾಥ್ ಅವರಿದ್ದ ಪೀಠ ಪ್ರಕರಣವನ್ನು ವಿಚಾರಣೆಗಾಗಿ ಮಾರ್ಚ್ 15 ಕ್ಕೆ ಪಟ್ಟಿ ಮಾಡಲು ಸೂಚಿಸಿತು.

ಹೆಚ್ಚಿನ ಮಾಹಿತಿಗೆ ʼಬಾರ್ ಅಂಡ್ ಬೆಂಚ್ʼ ಇಂಗ್ಲಿಷ್ ತಾಣದ ಲಿಂಕ್‌ ಗಮನಿಸಿ.

Related Stories

No stories found.