ಮೇಕೆದಾಟು ಪಾದಯಾತ್ರೆ: ಸಿಎಂ ಸಿದ್ದು, ಡಿಸಿಎಂ ಡಿಕೆಶಿ ವಿರುದ್ಧದ ಪ್ರಕರಣ ವಜಾ ಮಾಡಿದ ಹೈಕೋರ್ಟ್‌

ಸಾತನೂರು ಠಾಣೆಯಲ್ಲಿ ಮೂರು, ರಾಮನಗರ ಗ್ರಾಮೀಣ ಮತ್ತು ಐಜೂರು ಠಾಣೆಯಲ್ಲಿ ದಾಖಲಾಗಿದ್ದ ತಲಾ ಒಂದೊಂದು ಪ್ರಕರಣಗಳನ್ನು ಹೈಕೋರ್ಟ್‌ ರದ್ದುಪಡಿಸಿದೆ.
Congress Leaders And Supporters During Mekedatu padayatra In Karnataka
Congress Leaders And Supporters During Mekedatu padayatra In Karnataka
Published on

ಮೇಕೆದಾಟು ಪಾದಯಾತ್ರೆಯ ಸಂದರ್ಭದಲ್ಲಿ ಕೋವಿಡ್‌ ನಿಯಮಾವಳಿಗಳನ್ನು ಉಲ್ಲಂಘಿಸಲಾಗಿದೆ ಎಂದು ಆರೋಪಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ ಸೇರಿದಂತೆ ಹಲವರ ವಿರುದ್ಧ ದಾಖಲಿಸಿದ್ದ ಒಂದು ಪ್ರಕರಣ ಸೇರಿದಂತೆ ಒಟ್ಟು ಐದು ಪ್ರಕರಣಗಳನ್ನು ಶುಕ್ರವಾರ ಕರ್ನಾಟಕ ಹೈಕೋರ್ಟ್‌ ವಜಾ ಮಾಡಿದೆ.

ರಾಮನಗರ ಜಿಲ್ಲೆಯ ರಾಮನಗರ ಗ್ರಾಮಾಂತರ, ಸಾತನೂರು ಮತ್ತು ಐಜೂರು ಠಾಣೆಗಳಲ್ಲಿ ದಾಖಲಾಗಿದ್ದ ಪ್ರಕರಣಗಳ ರದ್ದು ಕೋರಿ ಡಿ ಕೆ ಶಿವಕುಮಾರ್‌ ಸಲ್ಲಿಸಿದ್ದ ಅರ್ಜಿಗಳನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ನೇತೃತ್ವದ ಏಕಸದಸ್ಯ ಪೀಠ ಪುರಸ್ಕರಿಸಿದೆ. ವಿಸ್ತೃತ ಆದೇಶ ಇನ್ನಷ್ಟೇ ಪ್ರಕಟವಾಗಬೇಕಿದೆ.

ಸಾತನೂರು ಠಾಣೆಯಲ್ಲಿ ಮೂರು, ರಾಮನಗರ ಗ್ರಾಮೀಣ ಮತ್ತು ಐಜೂರು ಠಾಣೆಯಲ್ಲಿ ದಾಖಲಾಗಿದ್ದ ತಲಾ ಒಂದೊಂದು ಪ್ರಕರಣಗಳನ್ನು ಹೈಕೋರ್ಟ್‌ ರದ್ದುಪಡಿಸಿದೆ.

ರಾಮನಗರ ಗ್ರಾಮೀಣ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಡಿ ಕೆ ಶಿವಕುಮಾರ್‌, ಸಿದ್ದರಾಮಯ್ಯ, ದಿವಂಗತ ಧ್ರುವನಾರಾಯಣ್‌, ಟಿ ಬಿ ಜಯಚಂದ್ರ, ಎಚ್‌ ಆಂಜನೇಯ, ಸಚಿವರಾದ ಕೃಷ್ಣಬೈರೇಗೌಡ, ಪ್ರಿಯಾಂಕ್‌ ಖರ್ಗೆ, ಅಂಜಲಿ ನಿಂಬಾಳ್ಕರ್‌, ಸಲೀಂ ಅಹ್ಮದ್‌, ಕೆ ರಾಜು, ಡಾ. ರವೀಂದ್ರ, ಕುಸುಮಾ, ಪಾರ್ವತಮ್ಮ ಆರೋಪಿಗಳಾಗಿದ್ದರು. ಈ ಪ್ರಕರಣ ವಜಾಗೊಂಡಿದೆ. ಉಳಿದೆಡೆ ಡಿ ಕೆ ಶಿವಕುಮಾರ್‌ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣಗಳು ವಜಾಗೊಂಡಿವೆ.

Also Read
ಮೇಕೆದಾಟು ಪಾದಯಾತ್ರೆ: ಡಿಸಿಎಂ ಶಿವಕುಮಾರ್ ವಿರುದ್ಧ ದಾಖಲಾಗಿದ್ದ ಪ್ರಕರಣ ವಜಾಗೊಳಿಸಿದ ಹೈಕೋರ್ಟ್‌

ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ಪಕ್ಷವು 2022ರ ಜನವರಿ 9ರಿಂದ 10 ದಿನ ಪಾದಯಾತ್ರೆ ಹಮ್ಮಿಕೊಂಡಿತ್ತು. ಪಾದಯಾತ್ರೆಯಲ್ಲಿ ಕೋವಿಡ್ ನಿಯಮ ಉಲ್ಲಂಘಿದ್ದಲ್ಲದೆ, ಸಾಂಕ್ರಾಮಿಕ ರೋಗ ಹರಡಲು ಕಾರಣವಾದ ಆರೋಪದ ಮೇಲೆ ನೈಸರ್ಗಿಕ ವಿಪತ್ತು ನಿರ್ವಹಣಾ ಕಾಯಿದೆ ಸೆಕ್ಷನ್‌ 51(ಬಿ) ಮತ್ತು ಐಪಿಸಿ ಸೆಕ್ಷನ್‌ 269 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

Kannada Bar & Bench
kannada.barandbench.com