ಮಹಿಳಾ ನೌಕರರಿಗೆ ಋತುಚಕ್ರದ ರಜೆ: ಫೆಬ್ರವರಿ 23ಕ್ಕೆ ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್‌

ರಾಜ್ಯದ ಮಹಿಳಾ ನೌಕರರಿಗೆ ಮಾಸಿಕ ಒಂದು ದಿನದ ವೇತನಸಹಿತ ರಜೆಯಂತೆ ವಾರ್ಷಿಕ 12 ಋತುಚಕ್ರದ ರಜೆ ಘೋಷಿಸಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ‌. ಈ ಅಧಿಸೂಚನೆಗೆ ಯಾವುದೇ ತಡೆ ನೀಡಿರದ ಕಾರಣ ಸಮಸ್ಯೆಯಾಗುತ್ತಿದೆ ಎಂದ ಅರ್ಜಿದಾರರ ವಕೀಲರು.
Menstrual Leave Policy
Menstrual Leave Policy
Published on

ರಾಜ್ಯದಲ್ಲಿ ವಿವಿಧ ಕಾರ್ಮಿಕ ಕಾಯಿದೆಗಳಡಿ ನೋಂದಣಿಯಾಗಿರುವ ಉದ್ದಿಮೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ನೌಕರರಿಗೆ ಅವರ ಋತುಚಕ್ರದ ಸಮಯದಲ್ಲಿ ಮಾಸಿಕ ಒಂದು ದಿನದ ವೇತನಸಹಿತ ರಜೆ ನೀಡುವ ಸಂಬಂಧ ರಾಜ್ಯ ಸರ್ಕಾರದ ಹೊರಡಿಸಿರುವ ಅಧಿಸೂಚನೆ ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಫೆಬ್ರವರಿ 23ಕ್ಕೆ ಮುಂದೂಡಿದೆ.

ರಾಜ್ಯ ಕಾರ್ಮಿಕ ಇಲಾಖೆ 2025ರ ನವೆಂಬರ್ 20ರಂದು ಹೊರಡಿಸಿರುವ ಅಧಿಸೂಚನೆ ಪ್ರಶ್ನಿಸಿ ಕರ್ನಾಟಕ ಉದ್ಯೋಗದಾತರ ಸಂಘ, ಬೆಂಗಳೂರು ಹೋಟೆಲ್‌ಗಳ ಸಂಘ, ಅವಿರತ ಡಿಫೆನ್ಸ್ ಸಿಸ್ಟಮ್, ಫೆಸಿಲ್ ಏರೋಸ್ಪೇಸ್ ಟೆಕ್ನಾಲಜೀಸ್ ಲಿಮಿಟೆಡ್, ಸ್ಯಾಮೋಸ್ ಟೆಕ್ನಾಲಜೀಸ್ ಲಿಮಿಟೆಡ್‌‌‌ಗಳ ಆಡಳಿತ ಮಂಡಳಿಗಳು ಸಲ್ಲಿಸಿದ್ದ ಅರ್ಜಿಗಳನ್ನು ನ್ಯಾಯಮೂರ್ತಿ ಅನಂತ ರಾಮನಾಥ ಹೆಗ್ಡೆ ಏಕಸದಸ್ಯ ಪೀಠ ಸೋಮವಾರ ವಿಚಾರಣೆ ನಡೆಸಿತು.

Also Read
ಮುಟ್ಟಿನ ರಜೆ ನೀತಿ ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲು ಮನವಿ: ಸರ್ಕಾರಕ್ಕೆ ನೋಟಿಸ್‌ ಜಾರಿ ಮಾಡಿದ ಹೈಕೋರ್ಟ್‌

ಅರ್ಜಿದಾರರೊಬ್ಬರ ಪರ ವಕೀಲರು, ರಾಜ್ಯದ ಮಹಿಳಾ ನೌಕರರಿಗೆ ಮಾಸಿಕ ಒಂದು ದಿನದ ವೇತನಸಹಿತ ರಜೆಯಂತೆ ವಾರ್ಷಿಕ 12 ಋತುಚಕ್ರದ ರಜೆ ಘೋಷಿಸಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ‌. ಈ ಅಧಿಸೂಚನೆಗೆ ಯಾವುದೇ ತಡೆಯಾಜ್ಞೆ ನೀಡಿರದ ಕಾರಣ ಸಮಸ್ಯೆಯಾಗುತ್ತಿದೆ. ಆದ್ದರಿಂದ, ಅರ್ಜಿಯನ್ನು ಶೀಘ್ರ ವಿಚಾರಣೆ ನಡೆಸಬೇಕು ಎಂದು ಮನವಿ ಮಾಡಿದರು.

ಇದನ್ನು ಆಲಿಸಿದ ಪೀಠವು ಅರ್ಜಿ ವಿಚಾರಣೆಯನ್ನು ಫೆಬ್ರವರಿ 23ಕ್ಕೆ ಮುಂದೂಡಿತು.

Kannada Bar & Bench
kannada.barandbench.com