ಗುರು ರಾಘವೇಂದ್ರ ಸಹಕಾರ ಬ್ಯಾಂಕ್‌ನಲ್ಲಿ ಹಣ ದುರ್ಬಳಕೆ: ನಿರ್ಮಾಪಕ ರಘುನಾಥ್‌ಗೆ ಜಾಮೀನು ನಿರಾಕರಿಸಿದ ಹೈಕೋರ್ಟ್‌

₹105 ಕೋಟಿ ಸಾಲ ಪಡೆದಿದ್ದ ಅರ್ಜಿದಾರರು ಅದರಲ್ಲಿ ₹60 ಕೋಟಿ ನಗದು ರೂಪದಲ್ಲಿ ಪಡೆದಿದ್ದಾರೆ. ಇದು ಕಾನೂನುಬಾಹಿರವಾಗಿದ್ದು, ಹಣವನ್ನು ಎಲ್ಲಿ ಹೂಡಿಕೆ ಮಾಡಿದ್ದಾರೆ ಎಂಬ ಬಗ್ಗೆ ವಿವರಣೆ ನೀಡಲು ವಿಫಲವಾಗಿದ್ದಾರೆ ಎಂದಿರುವ ಹೈಕೋರ್ಟ್‌.
Karnataka High Court
Karnataka High Court

ಬೆಂಗಳೂರಿನ ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ನಿಯಮಿತದಿಂದ ಕೋಟ್ಯಂತರ ರೂಪಾಯಿ ಸಾಲ ಪಡೆದು ಮರು ಪಾವತಿಸದ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಚಲನಚಿತ್ರ ನಿರ್ಮಾಪಕ ಹಾಗೂ ಉದ್ಯಮಿ ಜಿ ರಘುನಾಥ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಈಚೆಗೆ ವಜಾಗೊಳಿಸಿದೆ.

ಆರೋಪಿ ರಘುನಾಥ್ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ ನಟರಾಜನ್ ಅವರ ನೇತೃತ್ವದ ಏಕಸದಸ್ಯ ಪೀಠವು ನಡೆಸಿತು.

105 ಕೋಟಿ ರೂಪಾಯಿ ಸಾಲ ಪಡೆದಿದ್ದ ಅರ್ಜಿದಾರರು ಅದರಲ್ಲಿ 60 ಕೋಟಿ ರೂಪಾಯಿಗಳನ್ನು ನಗದು ರೂಪದಲ್ಲಿ ಪಡೆದಿದ್ದಾರೆ. ಇದು ಕಾನೂನುಬಾಹಿರವಾಗಿದ್ದು, ಹಣವನ್ನು ಎಲ್ಲಿ ಹೂಡಿಕೆ ಮಾಡಿದ್ದಾರೆ ಎಂಬ ಬಗ್ಗೆ ವಿವರಣೆ ನೀಡಲು ಅವರು ವಿಫಲವಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಜಾಮೀನು ನೀಡಿದರೆ, ಅರ್ಜಿದಾರರು ತಮ್ಮ ಆಸ್ತಿಯನ್ನು ಜಾರಿ ನಿರ್ದೇಶನಾಲಯ (ಇ ಡಿ) ಜಪ್ತಿ ಮಾಡದಂತೆ ತಡೆಯುವ ಎಲ್ಲ ಸಾಧ್ಯತೆಗಳಿವೆ. ಆದ್ದರಿಂದ, ಈ ಹಂತದಲ್ಲಿ ಜಾಮೀನು ನೀಡಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟು ಅರ್ಜಿ ವಜಾಗೊಳಿಸಿದೆ.

Also Read
ಗುರು ರಾಘವೇಂದ್ರ ಸಹಕಾರ ಬ್ಯಾಂಕ್‌ನಲ್ಲಿ ಹಣ ದುರ್ಬಳಕೆ ಪ್ರಕರಣ: ಆದೇಶ ಪಾಲನೆಯ ವರದಿ ಸಲ್ಲಿಸಲು ಹೈಕೋರ್ಟ್‌ ನಿರ್ದೇಶನ

ಪ್ರಕರಣದ ಹಿನ್ನೆಲೆ: ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ನಿಯಮಿತದಲ್ಲಿ ನಕಲಿ ಠೇವಣಿ ಸೃಷ್ಟಿಸಿ, ಸೂಕ್ತ ದಾಖಲೆಗಳಿಲ್ಲದೆ ಸಾಲ ಮಂಜೂರು ಮಾಡಿ 1,556 ಕೋಟಿ ರೂಪಾಯಿ ನಷ್ಟ ಉಂಟು ಮಾಡಿದ ಆರೋಪದಲ್ಲಿ ಬ್ಯಾಂಕ್‌ನ ಅಧ್ಯಕ್ಷ, ಉಪಾಧ್ಯಕ್ಷ, ವ್ಯವಸ್ಥಾಪಕ ನಿರ್ದೇಶಕ ಮತ್ತಿತರರ ವಿರುದ್ಧ ಜಾರಿ ನಿರ್ದೇಶನಾಲಯ (ಇ ಡಿ) ಪ್ರಕರಣ ದಾಖಲಿಸಿತ್ತು. ಇದೇ ಪ್ರಕರಣದಲ್ಲಿ ರಘುನಾಥ್ 17ನೇ ಆರೋಪಿಯಾಗಿದ್ದಾರೆ. ಬ್ಯಾಂಕ್‌ನಿಂದ 105 ಕೋಟಿ ರೂಪಾಯಿ ಸಾಲ ಪಡೆದಿರುವ ರಘುನಾಥ್ ಅವರು ಒಟ್ಟು 139.85 ಕೋಟಿ ಮೊತ್ತಕ್ಕೆ ಸುಸ್ತಿದಾರನಾಗಿದ್ದಾರೆ. ಬ್ಯಾಂಕ್ ಅಧಿಕಾರಿಗಳ ಜತೆ ಶಾಮೀಲಾಗಿ ಈ ಹಣವನ್ನು ಲಪಟಾಯಿಸಿದ್ದಾರೆ ಎಂಬ ಆರೋಪ ಅವರ ಮೇಲಿದೆ. ಇಡಿ ಅಧಿಕಾರಿಗಳು ರಘುನಾಥ್ ಅವರನ್ನು 2022ರ ಜೂನ್‌ 28ರಂದು ಬಂಧಿಸಿದ್ದಾರೆ.

Related Stories

No stories found.
Kannada Bar & Bench
kannada.barandbench.com