ಎರಡು ಧಾರ್ಮಿಕ ಗುಂಪುಗಳ ನಡುವೆ ದ್ವೇಷಕ್ಕೆ ಪ್ರಚೋದನೆ ನೀಡಿದ ಆರೋಪದ ಮೇಲೆ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪಂಜಾಬ್‌ನ ಮೊಹಾಲಿ ನ್ಯಾಯಾಲಯವು ಬಿಜೆಪಿ ನಾಯಕ ತಜಿಂದರ್ ಸಿಂಗ್ ಬಗ್ಗಾ ವಿರುದ್ಧ ಬಂಧನ ವಾರೆಂಟ್ ಹೊರಡಿಸಿದೆ.
ಎಸ್‌ಎಎಸ್ ನಗರದ ನ್ಯಾಯಿಕ ಮ್ಯಾಜಿಸ್ಟ್ರೇಟ್ ಇಂದರ್‌ಜಿತ್ ಸಿಂಗ್ ಅವರು ಬಂಧನ ವಾರೆಂಟ್ ಹೊರಡಿಸಿದ್ದಾರೆ. ಬಗ್ಗಾ ವಿರುದ್ಧ ಪಂಜಾಬ್ ಪೊಲೀಸರು ಐಪಿಸಿ ಸೆಕ್ಷನ್ 153ಎ (ಧಾರ್ಮಿಕ ಗುಂಪುಗಳ ನಡುವೆ ದ್ವೇಷ ಹರಡುವುದು), 505 (ಸಾರ್ವಜನಿಕ ಕಿರುಕುಳಕ್ಕೆ ಕಾರಣವಾಗುವ ಹೇಳಿಕೆ), 506 (ಕ್ರಿಮಿನಲ್ ಬೆದರಿಕೆ) ಪ್ರಕರಣ ದಾಖಲಿಸಿದ್ದಾರೆ. 'ದಿ ಕಾಶ್ಮೀರ್ ಫೈಲ್ಸ್' ಬಗ್ಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಅಭಿಪ್ರಾಯ ವ್ಯಕ್ತಪಡಿಸಿದ ಬಳಿಕ ಬಗ್ಗಾ ಅವರು ಕೇಜ್ರಿವಾಲ್ ಅವರ ಕಟು ಟೀಕಾಕಾರರಾಗಿದ್ದಾರೆ. ಬಗ್ಗಾ ಹೇಳಿಕೆ ಹಿನ್ನೆಲೆಯಲ್ಲಿ ಅವರ ವಿರುದ್ದ ದೂರು ದಾಖಲಿಸಲಾಗಿದೆ.
ಹೆಚ್ಚಿನ ಮಾಹಿತಿಗೆ ʼಬಾರ್ ಅಂಡ್ ಬೆಂಚ್ʼ ಇಂಗ್ಲಿಷ್ ತಾಣದ ಲಿಂಕ್ ಗಮನಿಸಿ.