ಲೈಮ್‌ಲೈಟ್ ಒಟಿಟಿಯಲ್ಲಿ ʼನಾನೇಕೆ ಗಾಂಧಿ ಕೊಂದೆʼ (ವೈ ಐ ಕಿಲ್ಡ್ ಗಾಂಧಿ) ಸಿನಿಮಾ ಬಿಡುಗಡೆಗೆ ತಡೆ ನೀಡುವಂತೆ ಕೋರಿ ಸಲ್ಲಿಸಿದ್ದ ಮನವಿಯನ್ನು ಸೋಮವಾರ ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಸಿನಿಮಾ ಬಿಡುಗಡೆಯಿಂದ ಸಂವಿಧಾನದ 32ನೇ ವಿಧಿಯಡಿ ಅರ್ಜಿದಾರರ ಮೂಲಭೂತ ಹಕ್ಕಿಗೆ ಚ್ಯುತಿಯಾಗಿಲ್ಲ. ಹೀಗಾಗಿ, ಈ ವಿಧಿಯಡಿ ಸಲ್ಲಿಸಲಾಗಿರುವ ಮನವಿಯನ್ನು ಪರಿಗಣಿಸಲಾಗದು ಎಂದು ನ್ಯಾ. ಇಂದಿರಾ ಬ್ಯಾನರ್ಜಿ ನೇತೃತ್ವದ ಪೀಠವು ಹೇಳಿದ್ದು, ಹೈಕೋರ್ಟ್‌ನಲ್ಲಿ ಮನವಿ ಸಲ್ಲಿಸಲು ಅರ್ಜಿದಾರರಿಗೆ ಸ್ವಾತಂತ್ರ್ಯ ಕಲ್ಪಿಸಿದೆ.
ಹೆಚ್ಚಿನ ವಿವರಗಳಿಗೆ ʼಬಾರ್ ಅಂಡ್ ಬೆಂಚ್ʼ ಇಂಗ್ಲಿಷ್ ತಾಣದ ಲಿಂಕ್ ಗಮನಿಸಿ.