ಬಾಬಾಬುಡನ್ ಗಿರಿ ದತ್ತ ಪೀಠದ ಪೂಜೆಗೆ ಮುಜಾವರ್ ನೇಮಕ: ಏಕಸದಸ್ಯ ಪೀಠದ ಆದೇಶ ಎತ್ತಿ ಹಿಡಿದ ಹೈಕೋರ್ಟ್‌ನ ವಿಭಾಗೀಯ ಪೀಠ

ನ್ಯಾ. ಪಿ ಎಸ್‌ ದಿನೇಶ್‌ ಕುಮಾರ್‌ ಅವರ ನೇತೃತ್ವದ ಏಕ ಸದಸ್ಯ ಪೀಠವು 2021ರ ಸೆಪ್ಟೆಂಬರ್‌ 28ರಂದು ಸರ್ಕಾರದ ಆದೇಶ ರದ್ದುಪಡಿಸಿ, ಪ್ರಕರಣವನ್ನು ಹಿಂದಿರುಗಿಸಿತ್ತು.
Justices Alok Aradhe and Vijaykumar A. Patil
Justices Alok Aradhe and Vijaykumar A. Patil
Published on

ಚಿಕ್ಕಮಗಳೂರು ಜಿಲ್ಲೆಯ ಬಾಬಾ ಬುಡನ್‌ಗಿರಿಯ ದತ್ತಾತ್ರೇಯ ಪೀಠದಲ್ಲಿ ಪೂಜಾ ವಿಧಿ ವಿಧಾನ ನೆರವೇರಿಸಲು ಮುಜಾವರ್‌ ನೇಮಕ ಮಾಡಿ ಅಂದಿನ ರಾಜ್ಯ ಸರ್ಕಾರ ನೇಮಕ ಮಾಡಿದ್ದ ಆದೇಶವನ್ನು ವಜಾ ಮಾಡಿದ್ದ ಏಕಸದಸ್ಯ ಪೀಠದ ಆದೇಶವನ್ನು ಕರ್ನಾಟಕ ಹೈಕೋರ್ಟ್‌ನ ವಿಭಾಗೀಯ ಪೀಠವು ಸೋಮವಾರ ಎತ್ತಿ ಹಿಡಿದಿದೆ.

ಚಿಕ್ಕಮಗಳೂರಿನ ಸೈಯದ್ ಗೌಸ್ ಮೊಹಿಯುದ್ದೀನ್ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿ, ಕಾಯ್ದಿರಿಸಿದ್ದ ಆದೇಶವನ್ನು ನ್ಯಾಯಮೂರ್ತಿಗಳಾದ ಅಲೋಕ್ ಅರಾಧೆ ಮತ್ತು ನ್ಯಾಯಮೂರ್ತಿ ಎಸ್‌ ವಿಶ್ವಜಿತ್‌ ಶೆಟ್ಟಿ ಅವರ ನೇತೃತ್ವದ ವಿಭಾಗೀಯ ಪೀಠವು ಸೋಮವಾರ ಪ್ರಕಟಿಸಿತು. ವಿಸ್ತೃತ ಆದೇಶ ಇನ್ನಷ್ಟೇ ಬಿಡುಗಡೆಯಾಗಬೇಕಿದೆ.

Also Read
ಬಾಬಾಬುಡನ್ ಗಿರಿ ದತ್ತಾತ್ರೇಯ ಪೀಠದ ಪೂಜೆ ನೆರವೇರಿಸಲು ಮುಜಾವರ್ ನೇಮಕ: ಸರ್ಕಾರದ ಆದೇಶ ರದ್ದುಪಡಿಸಿದ ಹೈಕೋರ್ಟ್‌

ದತ್ತಪೀಠದಲ್ಲಿ ಪೂಜೆ ನೆರವೇರಿಸಲು ಮುಜಾವರ್ ಅವರನ್ನು ನೇಮಕ ಮಾಡಿ 2018ರ ಮಾರ್ಚ್‌ 19ರಂದು ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ಶ್ರೀಗುರು ದತ್ತಾತ್ರೇಯ ಪೀಠ ದೇವಸ್ಥಾನ ಸಂವರ್ಧನಾ ಸಮಿತಿ 2018ರ ಏಪ್ರಿಲ್‌ನಲ್ಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಇದರ ವಿಚಾರಣೆ ನಡೆಸಿದ್ದ ನ್ಯಾ. ಪಿ ಎಸ್‌ ದಿನೇಶ್‌ ಕುಮಾರ್‌ ಅವರ ನೇತೃತ್ವದ ಏಕ ಸದಸ್ಯ ಪೀಠವು 2021ರ ಸೆಪ್ಟೆಂಬರ್‌ 28ರಂದು ಸರ್ಕಾರದ ಆದೇಶ ರದ್ದುಪಡಿಸಿ, ಪ್ರಕರಣವನ್ನು ಹಿಂದಿರುಗಿಸಿತ್ತು. ಹಾಗೆಯೇ, ಪ್ರಕರಣದ ಕುರಿತು ರಚಿಸಲಾಗಿದ್ದ ಉನ್ನತ ಮಟ್ಟದ ಸಮಿತಿ ನೀಡಿರುವ ವರದಿ ಗಣನೆಗೆ ತೆಗೆದುಕೊಳ್ಳದೇ ಪ್ರಕರಣವನ್ನು ಹೊಸದಾಗಿ ಪರಿಗಣಿಸಬೇಕು ನಿರ್ದೇಶಿಸಿತ್ತು. ಈ ತೀರ್ಪು ಪ್ರಶ್ನಿಸಿ ಗೌಸ್ ಮೊಹಿಯುದ್ದೀನ್ ಮೇಲ್ಮನವಿ ಸಲ್ಲಿಸಿದ್ದರು.

Kannada Bar & Bench
kannada.barandbench.com