ಪೋಕ್ಸೊ ಪ್ರಕರಣ: ಮುರುಘಾ ಶರಣರಿಗೆ ಸೆ.14ರವರೆಗೆ ನ್ಯಾಯಾಂಗ ಬಂಧನ ವಿಧಿಸಿದ ಚಿತ್ರದುರ್ಗ ನ್ಯಾಯಾಲಯ

ಪೋಕ್ಸೊ ಪ್ರಕರಣ: ಮುರುಘಾ ಶರಣರಿಗೆ ಸೆ.14ರವರೆಗೆ ನ್ಯಾಯಾಂಗ ಬಂಧನ ವಿಧಿಸಿದ ಚಿತ್ರದುರ್ಗ ನ್ಯಾಯಾಲಯ

ಸೆ 4ರಂದು ಶರಣರು ತಂಗುತ್ತಿದ್ದ ಕೊಠಡಿಯ ಮಹಜರು ಪ್ರಕ್ರಿಯೆ ನಡೆದಿತ್ತು. ಅದರ ವಿವರಗಳನ್ನು ಪೊಲೀಸರು ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ.

ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರಿಗೆ ಚಿತ್ರದುರ್ಗದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಸೆ.14ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

Also Read
[ಪೋಕ್ಸೊ ಪ್ರಕರಣ] ಮುರುಘಾ ಶ್ರೀಗಳಿಂದ ಜಾಮೀನು ಅರ್ಜಿ ಸಲ್ಲಿಕೆ; ಇತರೆ ಮೂವರು ಆರೋಪಿಗಳಿಂದ ನಿರೀಕ್ಷಣಾ ಜಾಮೀನು ಕೋರಿಕೆ

ಪೋಕ್ಸೊ ಕಾಯಿದೆಯಡಿ ಬಂಧಿತರಾಗಿದ್ದ ಶರಣರ ಪೊಲೀಸ್‌ ಕಸ್ಟಡಿ ಅವಧಿ ಇಂದು ಮುಕ್ತಾಯವಾದ ಹಿನ್ನೆಲೆಯಲ್ಲಿ ಪೊಲೀಸರು ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದರು. ಈ ವೇಳೆ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶರಾದ ಬಿ ಕೆ ಕೋಮಲ ಅವರು ಸೆ. 14ರವರೆಗೆ ಶ್ರೀಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಿದರು.

Also Read
ಮಠದ ಜಮೀನು ಮಾರಾಟ: ಮುರುಘಾ ಶರಣರ ವಿರುದ್ಧ ಜಾಮೀನು ರಹಿತ ವಾರೆಂಟ್​ ಜಾರಿ ಮಾಡಿದ ಬೆಂಗಳೂರಿನ ಎಸಿಎಂಎಂ ನ್ಯಾಯಾಲಯ

ಸೆಪ್ಟೆಂಬರ್‌ 1ರಂದು ಬಂಧಿತರಾಗಿದ್ದ ಶ್ರೀಗಳಿಗೆ ಮೊದಲು ನ್ಯಾಯಾಂಗ ಬಂಧನ ವಿಧಿಸಲಾಗಿತ್ತು. ನಂತರ ತನಿಖೆಯ ಸಲುವಾಗಿ ಪೊಲೀಸರ ಕೋರಿಕೆಯ ಮೇರೆಗೆ ಸೆ 2ರಂದು ಅವರನ್ನು ಪೊಲೀಸ್‌ ವಶಕ್ಕೆ ನೀಡಲಾಗಿತ್ತು. ಶರಣರು ಸೆ. 3ರಂದು ಪುರುಷತ್ವ ಪರೀಕ್ಷೆಗೆ ಒಳಗಾಗಿದ್ದರು. ಸೆ 4ರಂದು ಶರಣರು ತಂಗುತ್ತಿದ್ದ ಕೊಠಡಿಯ ಮಹಜರು ಪ್ರಕ್ರಿಯೆ ನಡೆದಿತ್ತು. ಅದರ ವಿವರಗಳನ್ನು ಪೊಲೀಸರು ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ.

Related Stories

No stories found.
Kannada Bar & Bench
kannada.barandbench.com