ನಮ್ಮ ಮೆಟ್ರೊ ಕಾಮಗಾರಿ: 257 ಮರ ತೆರವಿಗೆ ಬಿಎಂಆರ್‌ಸಿಎಲ್‌ಗೆ ಹೈಕೋರ್ಟ್‌ ಅನುಮತಿ

ವಾಸ್ತವಿಕ ಅಂಶಗಳು ನಮ್ಮ ಗಮನಕ್ಕೆ ಇದ್ದು, ಇಂದಿನ ಅಗತ್ಯಕ್ಕೆ ಅನುಗುಣವಾಗಿ ಸಮತೋಲನ ಕಾಯ್ದುಕೊಳ್ಳಬೇಕಿದೆ. ಮರಗಳನ್ನು ಸ್ಥಳಾಂತರ ಮಾಡಲಾಗುತ್ತದೆ ಹಾಗೂ ಕಡಿದ ಮರಗಳಿಗೆ ಪರ್ಯಾಯವಾಗಿ ಗಿಡ ನೆಡಬೇಕು ಎಂದು ಆದೇಶದಲ್ಲಿ ಹೇಳಿರುವ ನ್ಯಾಯಾಲಯ.
BMRCL and Karnataka HC
BMRCL and Karnataka HC

ಬೆಂಗಳೂರು ಮೆಟ್ರೊ ನಿರ್ಮಾಣ ಕಾಮಗಾರಿಗಾಗಿ 257 ಮರಗಳನ್ನು ಕಡಿಯಲು ಅಥವಾ ಸ್ಥಳಾಂತರಗೊಳಿಸಲು ಅನುಮತಿ ಕೋರಿ ಬೆಂಗಳೂರು ಮೆಟ್ರೊ ರೈಲು ನಿಗಮ ನಿಯಮಿತ (ಬಿಎಂಆರ್‌ಸಿಎಲ್‌) ಸಲ್ಲಿಸಿದ್ದ ಎರಡು ಮಧ್ಯಂತರ ಅರ್ಜಿಗಳಿಗೆ ಕರ್ನಾಟಕ ಹೈಕೋರ್ಟ್‌ ಈಚೆಗೆ ಅನುಮತಿಸಿದೆ.

ಮೆಟ್ರೊ ಕಾಮಗಾರಿ ಸೇರಿ ಅಭಿವೃದ್ಧಿ ಕಾಮಗಾರಿಗಳಿಗಾಗಿ ಮರಗಳನ್ನು ಕಡಿಯುವುದನ್ನು ಆಕ್ಷೇಪಿಸಿ ಬೆಂಗಳೂರು ಪರಿಸರ ಟ್ರಸ್ಟ್‌ ಹಾಗೂ ಪರಿಸರವಾದಿ ದತ್ತಾತ್ರೇಯ ಟಿ. ದೇವರೆ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ವೇಳೆ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್.‌ ದೀಕ್ಷಿತ್‌ ಅವರ ನೇತೃತ್ವದ ವಿಭಾಗೀಯ ಪೀಠ ಈ ಆದೇಶ ನೀಡಿದೆ.

“ವಾಸ್ತವಿಕ ಅಂಶಗಳು ನಮ್ಮ ಗಮನದಲ್ಲಿದ್ದು, ಇಂದಿನ ಅಗತ್ಯಕ್ಕೆ ಅನುಗುಣವಾಗಿ ಸಮತೋಲನ ಕಾಯ್ದುಕೊಳ್ಳಬೇಕಿದೆ. ಮರಗಳನ್ನು ಸ್ಥಳಾಂತರ ಮಾಡಲಾಗುತ್ತದೆ ಮತ್ತು ಕಡಿದ ಮರಗಳಿಗೆ ಪರ್ಯಾಯವಾಗಿ ಗಿಡ ನೆಡಲಾಗುತ್ತದೆ ಎಂದು ತಿಳಿಸಲಾಗಿದೆ. ಈ ಹಿನ್ನೆಲೆಯಲ್ಲಿ 2023ರ ಜೂನ್‌ 8ರಂದು ಮಾಡಿದ್ದ ಆದೇಶದಲ್ಲಿದ್ದ ವಿಧಿಸಿದ್ದ ಷರತ್ತುಗಳಿಗೆ ಒಳಪಟ್ಟು ಬಿಎಂಆರ್‌ಸಿಎಲ್‌ ಮಧ್ಯಂತರ ಕೋರಿಕೆಗಳನ್ನು ಪುರಸ್ಕರಿಸಲಾಗಿದೆ” ಎಂದು ನ್ಯಾಯಾಲಯವು ಆದೇಶದಲ್ಲಿ ಹೇಳಿದೆ.

Related Stories

No stories found.
Kannada Bar & Bench
kannada.barandbench.com