ನ್ಯಾಷನಲ್ ಹೆರಾಲ್ಡ್ ಪ್ರಕರಣ: ಅಕ್ರಮ ಹಣ ವರ್ಗಾವಣೆ ಆರೋಪದಡಿ ಸೋನಿಯಾ, ರಾಹುಲ್ ಗಾಂಧಿಗೆ ಇ ಡಿ ಸಮನ್ಸ್

ಜೂನ್ 2ರಂದು ವಿಚಾರಣೆಗೆ ಹಾಜರಾಗುವಂತೆ ರಾಹುಲ್ ಗಾಂಧಿ ಅವರಿಗೆ ಹಾಗೂ ಜೂನ್ 8 ರಂದು ಹಾಜರಾಗುವಂತೆ ಸೋನಿಯಾ ಗಾಂಧಿ ಅವರಿಗೆ ಸಮನ್ಸ್ ನೀಡಲಾಗಿದೆ.
ನ್ಯಾಷನಲ್ ಹೆರಾಲ್ಡ್ ಪ್ರಕರಣ: ಅಕ್ರಮ ಹಣ ವರ್ಗಾವಣೆ ಆರೋಪದಡಿ ಸೋನಿಯಾ, ರಾಹುಲ್ ಗಾಂಧಿಗೆ ಇ ಡಿ ಸಮನ್ಸ್

ಕಾಂಗ್ರೆಸ್ ಮಾಲೀಕತ್ವದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿ ಮತ್ತು ವಯನಾಡು ಕ್ಷೇತ್ರದ ಸಂಸದ ರಾಹುಲ್ ಗಾಂಧಿ ಅವರಿಗೆ ಜಾರಿ ನಿರ್ದೇಶನಾಲಯ ( ಇ ಡಿ ) ಬುಧವಾರ ಸಮನ್ಸ್ ಜಾರಿ ಮಾಡಿದೆ.

ಜೂನ್ 2ರಂದು ವಿಚಾರಣೆಗೆ ಹಾಜರಾಗುವಂತೆ ರಾಹುಲ್ ಗಾಂಧಿ ಅವರಿಗೆ ಹಾಗೂ ಜೂನ್ 8 ರಂದು ಹಾಜರಾಗುವಂತೆ ಸೋನಿಯಾ ಗಾಂಧಿ ಅವರಿಗೆ ಸಮನ್ಸ್‌ ನೀಡಲಾಗಿದೆ.

Also Read
[ರಾಜೀವ್ ಗಾಂಧಿ ಹತ್ಯೆ] ಕ್ಷಮಾದಾನ ಅರ್ಜಿ ನಿರ್ಧರಿಸಲು ರಾಜ್ಯಪಾಲರ ವಿಳಂಬ: ಪೇರರಿವಾಳನ್ ಬಿಡುಗಡೆಗೆ ಸುಪ್ರೀಂ ಆದೇಶ

ನ್ಯಾಷನಲ್‌ ಹೆರಾಲ್ಡ್‌ ಪತ್ರಿಕೆಯ ಒಡೆತನ ಹೊಂದಿದ್ದ ಅಸೋಸಿಯೇಟೆಡ್‌ ಜರ್ನಲ್ಸ್‌ ಲಿಮಿಟೆಡ್‌ಗೆ (ಎಜೆಎಲ್‌) ಕಾಂಗ್ರೆಸ್‌ ಪಕ್ಷ ₹ 90 ಕೋಟಿಯಷ್ಟು ಸಾಲ ನೀಡಿತ್ತು. ಯಂಗ್‌ ಇಂಡಿಯಾ ಸಂಸ್ಥೆ ಕಾಂಗ್ರೆಸ್‌ಗೆ ಕೇವಲ ₹ 50 ಲಕ್ಷ ಹಣ ನೀಡಿ ಎಜೆಎಲ್‌ ಕಾಂಗ್ರೆಸ್‌ಗೆ ನೀಡಬೇಕಿದ್ದ ₹ 90 ಕೋಟಿಯಷ್ಟು ಹಣ ಹಿಂಪಡೆಯಬೇಕಾದ ಹಕ್ಕನ್ನು ತನ್ನದಾಗಿಸಿಕೊಂಡಿತ್ತು ಎಂಬುದು ಹಗರಣದ ಸಾರ. ಈಕ್ವಿಟಿ ವಹಿವಾಟಿನಲ್ಲಿ ₹2,000 ಕೋಟಿಗೂ ಅಧಿಕ ಆಸ್ತಿ ಅವ್ಯವಹಾರ ನಡೆದಿದೆ ಎಂಬ ಆರೋಪವೂ ಕೇಳಿಬಂದಿತ್ತು.

ಸೋನಿಯಾ, ರಾಹುಲ್ ಗಾಂಧಿ, ಮೋತಿಲಾಲ್ ವೋರಾ, ಆಸ್ಕರ್ ಫರ್ನಾಂಡಿಸ್, ಸುಮನ್ ದುಬೆ, ಸ್ಯಾಮ್ ಪಿತ್ರೋಡಾ ಮತ್ತು ಗಾಂಧಿ ಕುಟುಂಬದ ನಿಯಂತ್ರಣದಲ್ಲಿರುವ - ಯಂಗ್ ಇಂಡಿಯನ್ ಲಿಮಿಟೆಡ್‌ ವಿರುದ್ಧ ಬಿಜೆಪಿ ನಾಯಕ ಸುಬ್ರಮಣಿಯನ್‌ ಸ್ವಾಮಿ ಖಾಸಗಿ ದೂರು ದಾಖಲಿಸಿ ವಂಚನೆ, ಕ್ರಿಮಿನಲ್ ಪಿತೂರಿ, ಕ್ರಿಮಿನಲ್ ನಂಬಿಕೆ ದ್ರೋಹ ಹಾಗೂ ಆಸ್ತಿ ದುರುಪಯೋಗದ ಆರೋಪ ಮಾಡಿದ್ದರು. ಕ್ರಿಮಿನಲ್ ಪ್ರಕರಣದ ವಿಚಾರಣೆ ದೆಹಲಿ ನ್ಯಾಯಾಲಯದಲ್ಲಿ ನಡೆಯುತ್ತಿದೆ.

Related Stories

No stories found.
Kannada Bar & Bench
kannada.barandbench.com