![ನವಾಬ್ ಮಲಿಕ್ ಹೇಬಿಯಸ್ ಕಾರ್ಪಸ್ ಅರ್ಜಿ: ಇ ಡಿ ಪ್ರತಿಕ್ರಿಯೆ ಕೇಳಿದ ಬಾಂಬೆ ಹೈಕೋರ್ಟ್ [ಚುಟುಕು]](https://gumlet.assettype.com/barandbench-kannada%2F2022-03%2F7bb46a39-9c15-417d-85c6-94e5768d9685%2Fbarandbench_2022_03_538e3013_8b6c_431e_9a6a_c0a6439ce4ec_BOMBAY__WEB_PAGE_1600x900er.jpg?auto=format%2Ccompress&fit=max)
ತಮ್ಮ ವಿರುದ್ಧ ದಾಖಲಿಸಲಾಗಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣ ಪ್ರಶ್ನಿಸಿ ಮತ್ತು ಕೂಡಲೇ ತಮ್ಮನ್ನು ಬಿಡುಗಡೆ ಮಾಡುವಂತೆ ಕೋರಿ ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ಅವರು ಸಲ್ಲಿಸಿರುವ ಹೇಬಿಯಸ್ ಕಾರ್ಪಸ್ ಅರ್ಜಿಗೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ ಜಾರಿ ನಿರ್ದೇಶನಾಲಯದ (ಇಡಿ) ಪ್ರತಿಕ್ರಿಯೆ ಕೇಳಿದೆ. ನವಾಬ್ ಪರ ವಕೀಲ ಅಮಿತ್ ದೇಸಾಯಿ ಅವರ ವಾದವನ್ನು ಸ್ವಲ್ಪ ಸಮಯದವರೆಗೆ ಆಲಿಸಿದ ನ್ಯಾಯಮೂರ್ತಿಗಳಾದ ಎಸ್ ಬಿ ಸುಕ್ರೆ ಮತ್ತು ಜಿ ಎ ಸನಪ್ ಅವರಿದ್ದ ಪೀಠ, ಪ್ರಕರಣವನ್ನು ಸಾಮಾನ್ಯ ಪೀಠದ ಮುಂದೆ ಪಟ್ಟಿ ಮಾಡುವುದಾಗಿ ತಿಳಿಸಿತು. ಹೇಬಿಯಸ್ ಕಾರ್ಪಸ್ ಅರ್ಜಿಯಲ್ಲಿ ವೈಯಕ್ತಿಕ ಸ್ವಾತಂತ್ರ್ಯದ ಪ್ರಶ್ನೆ ಇರುವುದರಿಂದ ಬೇಗನೇ ಅಲಿಸುವಂತೆ ಮಲಿಕ್ ಪರ ವಕೀಲ ಅಮಿತ್ ದೇಸಾಯಿ ವಾದಿಸಿದರು.
ಹೆಚ್ಚಿನ ಮಾಹಿತಿಗೆ ʼಬಾರ್ ಅಂಡ್ ಬೆಂಚ್ʼ ಇಂಗ್ಲಿಷ್ ತಾಣದ ಲಿಂಕ್ ಗಮನಿಸಿ.