Nawab Malik, Enforcement Directorate
ramesh sogemane
ಸುದ್ದಿಗಳು
ಮಧ್ಯಂತರ ಪರಿಹಾರ ನಿರಾಕರಿಸಿದ್ದ ಬಾಂಬೆ ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂ ಮೊರೆ ಹೋದ ನವಾಬ್ ಮಲೀಕ್ [ಚುಟುಕು]
ಜಾರಿ ನಿರ್ದೇಶನಾಲಯ ತನಿಖೆ ನಡೆಸುತ್ತಿರುವ ಭೂಗತ ದೊರೆ ದಾವೂದ್ ಇಬ್ರಾಹಿಂಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಡಿ ನ್ಯಾಯಾಂಗ ಬಂಧನದಲ್ಲಿರುವ ತಮ್ಮನ್ನು ಬಿಡುಗಡೆ ಮಾಡುವಂತೆ ಕೋರಿದ್ದ ಅರ್ಜಿಯನ್ನು ಬಾಂಬೆ ಹೈಕೋರ್ಟ್ ತಿರಸ್ಕರಿಸಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಸಚಿವ ಮತ್ತು ಎನ್‌ಸಿಪಿ ನಾಯಕ ನವಾಬ್ ಮಲಿಕ್ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ.
ತನ್ನನ್ನು ಬಿಡುಗಡೆ ಮಾಡುವಂತೆ ಕೋರಿ ಹೇಬಿಯಸ್ ಕಾರ್ಪಸ್ ಅರ್ಜಿಯಲ್ಲಿ ಮಲಿಕ್ ಅವರು ಕೋರಿದ್ದ ಮಧ್ಯಂತರ ಪರಿಹಾರವನ್ನು ಮಾರ್ಚ್ 15 ರಂದು ಬಾಂಬೆ ಹೈಕೋರ್ಟ್ ನ್ಯಾಯಮೂರ್ತಿಗಳಾದ ಪ್ರಸನ್ನ ಬಿ ವರಾಳೆ ಮತ್ತು ಶ್ರೀರಾಮ್ ಎಂ ಮೋದಕ್ ಅವರಿದ್ದ ಬಾಂಬೆ ಹೈಕೋರ್ಟ್ ಪೀಠ ತಿರಸ್ಕರಿಸಿತ್ತು.
ಹೆಚ್ಚಿನ ಮಾಹಿತಿಗೆ ʼಬಾರ್ ಅಂಡ್ ಬೆಂಚ್ʼ ಇಂಗ್ಲಿಷ್ ತಾಣದ ಲಿಂಕ್ ಗಮನಿಸಿ.

