6 ಕೆಜಿಯಷ್ಟು ಗಾಂಜಾ ವಾಣಿಜ್ಯ ಪ್ರಮಾಣದ್ದಲ್ಲ ಎಂದ ಆಂಧ್ರ ಪ್ರದೇಶ ಹೈಕೋರ್ಟ್: ಆರೋಪಿಗೆ ಜಾಮೀನು [ಚುಟುಕು]

Andhra Pradesh HC
Andhra Pradesh HC ramesh sogemane

ಮಾದಕವಸ್ತು ಮತ್ತು ಅಮಲು ಪದಾರ್ಥ ನಿಯಂತ್ರಣ ಕಾಯಿದೆಯಡಿ 6 ಕಿಲೋಗ್ರಾಂಗಳಷ್ಟು ಗಾಂಜಾ ವಾಣಿಜ್ಯ ಪ್ರಮಾಣದ್ದಲ್ಲ ಎಂದು ಆಂಧ್ರಪ್ರದೇಶ ಹೈಕೋರ್ಟ್ ಇತ್ತೀಚೆಗೆ ಹೇಳಿದೆ. ಅಲ್ಲದೆ ತನಿಖೆಯಲ್ಲಿ ಸಾಕಷ್ಟು ಪ್ರಗತಿಯಾಗಿದ್ದುಅರ್ಜಿದಾರರು ಕಳೆದ ಎರಡು ತಿಂಗಳಿನಿಂದ ಜೈಲಿನಲ್ಲಿರುವುದನ್ನು ಪರಿಗಣಿಸಿದ ನ್ಯಾಯಾಲಯ ಆರೋಪಿಗೆ ಜಾಮೀನು ನೀಡಿತು.

ನ್ಯಾಯಮೂರ್ತಿ ಚೀಕಟಿ ಮಾನವೇಂದ್ರನಾಥ್ ರಾಯ್ ಅವರು ಅರ್ಜಿದಾರರಿಗೆ ಜಾಮೀನು ಮಂಜೂರು ಮಾಡಿದ್ದು, ಎನ್‌ಡಿಪಿಎಸ್ ಕಾಯಿದೆಯ ಸೆಕ್ಷನ್ 37ರ ಅಡಿಯಲ್ಲಿ ಒದಗಿಸಲಾದ ಜಾಮೀನಿನ ಮೇಲಿನ ನಿರ್ಬಂಧೆ ಈ ಪ್ರಕರಣದಲ್ಲಿ ಅನ್ವಯಿಸುವುದಿಲ್ಲ ಎಂದಿದ್ದಾರೆ.

ಹೆಚ್ಚಿನ ಮಾಹಿತಿಗೆ ʼಬಾರ್‌ ಅಂಡ್‌ ಬೆಂಚ್‌ʼ ಇಂಗ್ಲಿಷ್‌ ತಾಣದ ಲಿಂಕ್‌ ಗಮನಿಸಿ.

Related Stories

No stories found.
Kannada Bar & Bench
kannada.barandbench.com