ನೇಹಾ ಹಿರೇಮಠ ಕೊಲೆ ಪ್ರಕರಣ: ಆರೋಪಿ ಫಯಾಜ್‌ನನ್ನು ಆರು ದಿನ ಸಿಐಡಿ ಕಸ್ಟಡಿಗೆ ನೀಡಿದ ಹುಬ್ಬಳ್ಳಿ ನ್ಯಾಯಾಲಯ

ಆರೋಪಿ ಫಯಾಜ್‌ನನ್ನು ತಮ್ಮ ವಶಕ್ಕೆ ನೀಡುವಂತೆ ಕೋರಿ ಸಿಐಡಿ ಪೊಲೀಸ್‌ ವರಿಷ್ಠಾಧಿಕಾರಿ ವೆಂಕಟೇಶ್‌ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಒಂದನೇ ಹೆಚ್ಚುವರಿ ಸಿವಿಲ್‌ ನ್ಯಾಯಾಧೀಶರಾದ ನಾಗೇಶ್‌ ನಾಯ್ಕ್‌ ನಡೆಸಿದರು.
Fayaz Babasaheb
Fayaz Babasaheb

ಹುಬ್ಬಳ್ಳಿಯ ನೇಹಾ ಹಿರೇಮಠ ಕೊಲೆ ಪ್ರಕರಣದ ಆರೋಪಿ ಫಯಾಜ್‌ ಬಾಬಾಸಾಹೇಬ್‌ನನ್ನು ಹುಬ್ಬಳ್ಳಿಯ ನ್ಯಾಯಾಲಯವು ಬುಧವಾರ ಆರು ದಿನಗಳ ಕಾಲ ಸಿಐಡಿ ಕಸ್ಟಡಿಗೆ ನೀಡಿದೆ.

ಆರೋಪಿ ಫಯಾಜ್‌ನನ್ನು ತಮ್ಮ ವಶಕ್ಕೆ ನೀಡುವಂತೆ ಕೋರಿ ಸಿಐಡಿ ಪೊಲೀಸ್‌ ವರಿಷ್ಠಾಧಿಕಾರಿ ವೆಂಕಟೇಶ್‌ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಒಂದನೇ ಹೆಚ್ಚುವರಿ ಸಿವಿಲ್‌ ನ್ಯಾಯಾಧೀಶರಾದ ನಾಗೇಶ್‌ ನಾಯ್ಕ್‌ ನಡೆಸಿದರು.

ಆನಂತರ ತನಿಖಾ ತಂಡದ ಕೋರಿಕೆಯಂತೆ ಆರೋಪಿ ಫಯಾಜ್‌ನನ್ನು ಆರು ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ನೀಡಿದೆ.

ನೇಹಾ ಅವರನ್ನು ಹುಬ್ಬಳ್ಳಿ ನಗರದ ಬಿವಿಬಿ ಕಾಲೇಜು ಆವರಣದಲ್ಲಿ ಆರೋಪಿ ಫಯಾಜ್‌ ಕಳೆದ ಗುರುವಾರ ಹಲವು ಬಾರಿ ಚಾಕುವಿನಿಂದ ಇರಿದು ಕೊಲೆ ಮಾಡಿದ್ದ. ಇದನ್ನು ಆಧರಿಸಿ ನೇಹಾ ಸಂಬಂಧಿ ಗೀತಾ ಅವರು ನೀಡಿದ ದೂರಿನ ಅನ್ವಯ ವಿದ್ಯಾನಗರ ಠಾಣೆಯಲ್ಲಿ ಆರೋಪಿ ಫಯಾಜ್‌ ವಿರುದ್ಧ ಐಪಿಸಿ ಸೆಕ್ಷನ್‌ಗಳಾದ 302 ಮತ್ತು 506 ಅಡಿ ಪ್ರಕರಣ ದಾಖಲಿಸಲಾಗಿದೆ.

Related Stories

No stories found.
Kannada Bar & Bench
kannada.barandbench.com