ಕಳೆದ ಐದು ವರ್ಷಗಳಲ್ಲಿ ಶೌಚಗುಂಡಿ ಸ್ವಚ್ಛಗೊಳಿಸುವ ಕಾರ್ಮಿಕರ ಸಾವು ವರದಿಯಾಗಿಲ್ಲ ಎಂದ ಕೇಂದ್ರ

ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಜ್ಯಸಭಾ ಸದಸ್ಯರಾದ ಡಾ ಎಲ್ ಹನುಮಂತಯ್ಯ ಅವರು ಈ ಸಂಬಂಧ ಸರ್ಕಾರಕ್ಕೆ ಪ್ರಶ್ನೆ ಕೇಳಿದ್ದರು.
ಕಳೆದ ಐದು ವರ್ಷಗಳಲ್ಲಿ ಶೌಚಗುಂಡಿ ಸ್ವಚ್ಛಗೊಳಿಸುವ ಕಾರ್ಮಿಕರ ಸಾವು ವರದಿಯಾಗಿಲ್ಲ ಎಂದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ ದೇಶದಲ್ಲಿ ಶೌಚಗುಂಡಿ ಸ್ವಚ್ಛತೆ ವೇಳೆ ಯಾವುದೇ ಸಾವುಗಳು ವರದಿಯಾಗಿಲ್ಲ ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ ರಾಜ್ಯಸಭೆಗೆ ತಿಳಿಸಿದೆ.

ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ರಾಮದಾಸ್ ಅಠಾವಳೆ ಅವರಿಗೆ ರಾಜ್ಯಸಭೆಯ ವಿರೋಧಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಜ್ಯಸಭಾ ಸದಸ್ಯ ಡಾ. ಎಲ್‌ ಹನುಮಂತಯ್ಯ ಅವರು ಈ ಸಂಬಂಧ ಪ್ರಶ್ನೆ ಕೇಳಿದ್ದರು.

Also Read
ಕಳೆದ ಐದು ವರ್ಷಗಳಲ್ಲಿ ಶೌಚಗುಂಡಿ ಸ್ವಚ್ಛಗೊಳಿಸುವ ಕಾರ್ಮಿಕರ ಸಾವು ವರದಿಯಾಗಿಲ್ಲ ಎಂದ ಕೇಂದ್ರ

ಅಲ್ಲದೆ ಈವರೆಗೆ ರಾಷ್ಟ್ರೀಯ ಸಫಾಯಿ ಕರ್ಮಚಾರಿ ಹಣಕಾಸು ಮತ್ತು ಅಭಿವೃದ್ಧಿ ನಿಗಮಕ್ಕೆ (NSKFDC) 192.6 ಕೋಟಿ ರೂಪಾಯಿ ವಿನಿಯೋಗಿಸಲಾಗಿದ್ದು 211.84 ಕೋಟಿ ರೂ.ಗಳನ್ನು ಬಳಸಲಾಗಿದೆ (ಇದರಲ್ಲಿ ಹಿಂದಿನ ವರ್ಷಗಳಿಂದ ಖರ್ಚು ಮಾಡದ ಬಾಕಿ ಮೊತ್ತವೂ ಸೇರಿದೆ) ಎನ್ನುವ ಮಾಹಿತಿಯನ್ನು ನೀಡಲಾಗಿದೆ.

ಇಲ್ಲಿಯವರೆಗೆ ದೇಶಾದ್ಯಂತ ಸುಮಾರು 66,692 ಶೌಚಗುಂಡಿ ಸ್ವಚ್ಛಗೊಳಿಸುವ ಕಾರ್ಮಿಕರನ್ನು ಗುರುತಿಸಲಾಗಿದೆ ಎಂದು ಸಚಿವಾಲಯ ಬಹಿರಂಗಪಡಿಸಿದೆ. ಇದರಲ್ಲಿ ಕರ್ನಾಟಕದಲ್ಲಿ 3204 ಮಂದಿ ಶೌಚಗುಂಡಿ ಕಾರ್ಮಿಕರಿದ್ದಾರೆ.

Also Read
2013ರ ಮಲ ಹೊರುವ ವೃತ್ತಿ ನಿಷೇಧ ಕಾಯಿದೆ ಜಾರಿ: ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದ ಕರ್ನಾಟಕ ಹೈಕೋರ್ಟ್

ಶೌಚಗುಂಡಿ ಸ್ವಚ್ಛಗೊಳಿಸುವ ಕಾರ್ಮಿಕರ ರಾಜ್ಯವಾರು ವಿವರ ಇಲ್ಲಿದೆ:

ಕೋವಿಡ್‌ ವೇಳೆ ಆಮ್ಲಜನಕದ ಕೊರತೆಯಿಂದಾಗಿ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಯಾವುದೇ ಸಾವು ಸಂಭವಿಸಿಲ್ಲ ಎಂದು ಕೇಂದ್ರ ಇತ್ತೀಚೆಗೆ ಸಂಸತ್ತಿನಲ್ಲಿ ಹೇಳಿತ್ತು.

Also Read
ಆಮ್ಲಜನಕ ಕೊರತೆಯಿಂದ ತಂದೆ ದುರ್ಮರಣ: ಮಕ್ಕಳ ಪರಿಹಾರ ಕೋರಿಕೆ ಆಧರಿಸಿ ಕೇಂದ್ರ, ರಾಜ್ಯಕ್ಕೆ ದೆಹಲಿ ಹೈಕೋರ್ಟ್‌ ನೋಟಿಸ್‌

ಕೇಂದ್ರ ಸರ್ಕಾರ ನೀಡಿರುವ ಉತ್ತರದ ಪ್ರತಿಯನ್ನು ಓದಲು ಇಲ್ಲಿ ಕ್ಲಿಕ್ಕಿಸಿ:

Attachment
PDF
Manual_Scavenging___Rajya_Sabha.pdf
Preview

Related Stories

No stories found.
Kannada Bar & Bench
kannada.barandbench.com