ಆದಾಯ ಮರೆಮಾಚಿದ ಪ್ರಕರಣ: ಹೈಕೋರ್ಟ್‌ನಲ್ಲಿ ವಿಚಾರಣೆ ಎದುರಿಸಿದ ಸಂಸದ ಪ್ರಜ್ವಲ್‌ ರೇವಣ್ಣ

ಬಿಜೆಪಿಯ ಪರಾಜಿತ ಅಭ್ಯರ್ಥಿ ಎ ಮಂಜು ಸಲ್ಲಿಸಿರುವ ಚುನಾವಣಾ ತಕರಾರು ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಕೆ ನಟರಾಜನ್ ಅವರಿದ್ದ ಏಕಸದಸ್ಯ ವಿಚಾರಣೆ ನಡೆಸಿತು.
Karnataka HC and Loksabha Member Prajwal Revanna
Karnataka HC and Loksabha Member Prajwal Revanna
Published on

ಕಳೆದ ಲೋಕಸಭೆ ಚುನಾವಣೆ ವೇಳೆ ಪ್ರಜ್ವಲ್‌ ರೇವಣ್ಣ ಅವರು ನಾಮಪತ್ರ ಸಲ್ಲಿಸುವಾಗ ಪೂರ್ಣ ಪ್ರಮಾಣದಲ್ಲಿ ಆಸ್ತಿ ವಿವರ ಘೋಷಿಸಿಲ್ಲ. ನೈಜ ಆದಾಯ ಬಚ್ಚಿಟ್ಟು ಸುಳ್ಳು ಅಫಿಡವಿಟ್‌ ಸಲ್ಲಿಸಿ ಲೋಕಸಭಾ ಚುನಾವಣೆಯಲ್ಲಿ ಹಾಸನ ಸಂಸತ್‌ ಕ್ಷೇತ್ರದಿಂದ ಗೆದ್ದಿರುವ ಪ್ರಜ್ವಲ್‌ ಅವರ ಆಯ್ಕೆಯನ್ನು ಅಸಿಂಧುಗೊಳಿಸಬೇಕು ಎಂದು ಕೋರಿರುವ ಅರ್ಜಿಗೆ ಸಂಬಂಧಿಸಿದ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಕರ್ನಾಟಕ ಹೈಕೋರ್ಟ್‌ನಲ್ಲಿ ಮಂಗಳವಾರ ವಿಚಾರಣೆ ಎದುರಿಸಿದರು.

ಬಿಜೆಪಿಯ ಪರಾಜಿತ ಅಭ್ಯರ್ಥಿ ಎ ಮಂಜು ಸಲ್ಲಿಸಿರುವ ಚುನಾವಣಾ ತಕರಾರು ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಕೆ ನಟರಾಜನ್ ಅವರಿದ್ದ ಏಕಸದಸ್ಯ ವಿಚಾರಣೆ ನಡೆಸಿತು.

Also Read
ಪ್ರಜ್ವಲ್‌ ರೇವಣ್ಣ ಆಯ್ಕೆ ಪ್ರಶ್ನಿಸಿರುವ ಅರ್ಜಿ ವಿಚಾರಣೆ: ಪರಾಜಿತ ಅಭ್ಯರ್ಥಿ ಸತೀಶ್‌ಗೆ ಪೊಲೀಸರ ಮೂಲಕ ಸಮನ್ಸ್

ಈ ವೇಳೆ ಕಟಕಟೆಯಲ್ಲಿ ನಿಂತು ಪ್ರಮಾಣ ಮಾಡಿ ವಿಚಾರಣೆ ಎದುರಿಸಿದ ಪ್ರಜ್ವಲ್ ರೇವಣ್ಣ ಅವರು ಹಿರಿಯ ವಕೀಲ ಉದಯ ಹೊಳ್ಳ ಮತ್ತು ಕೇಶವ ರೆಡ್ಡಿ ಅವರ ಪ್ರಶ್ನೆಗಳಿಗೆ ಉತ್ತರಿಸಿದರು. ಇದನ್ನು ದಾಖಲಿಸಿಕೊಂಡ ಪೀಠವು ವಿಚಾರಣೆಯನ್ನು ಇದೇ 15ಕ್ಕೆ ಮುಂದೂಡಿದೆ.

Also Read
ಪ್ರಜ್ವಲ್ ಅಕ್ರಮ ಆಸ್ತಿ ಪ್ರಕರಣ: ಹೈಕೋರ್ಟ್‌ ಆದೇಶ ಬದಿಗೆ ಸರಿಸಿದ ಸುಪ್ರೀಂ ಕೋರ್ಟ್‌; ವಿಚಾರಣೆಗೆ ಸೂಚನೆ
Kannada Bar & Bench
kannada.barandbench.com