ಜಮ್ಮು ಮತ್ತು ಕಾಶ್ಮೀರ ಉನ್ನತ ನ್ಯಾಯಾಂಗ ಸೇವೆಗಾಗಿ ನಡೆದ ಜಿಲ್ಲಾ ನ್ಯಾಯಾಧೀಶರ ನೇರ ನೇಮಕಾತಿ ಲಿಖಿತ ಪರೀಕ್ಷೆ ಬರೆದ 217 ವಕೀಲರಲ್ಲಿ ಯಾರೊಬ್ಬರೂ ತೇರ್ಗಡೆಯಾಗಿಲ್ಲ. ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್‌ನ ಹೈಕೋರ್ಟ್‌ನ ರಿಜಿಸ್ಟ್ರಾರ್ ಜನರಲ್ ಹೊರಡಿಸಿದ ಅಧಿಸೂಚನೆಯ ಪ್ರಕಾರ, 217 ಅಭ್ಯರ್ಥಿಗಳು ಲಿಖಿತ ಪರೀಕ್ಷೆಗೆ ಹಾಜರಾಗಿದ್ದರು. ಆದರೆ ಅವರಲ್ಲಿ ಯಾರೊಬ್ಬರೂ ಸಾಮಾನ್ಯ ವರ್ಗಕ್ಕೆ ಮೀಸಲಿಟ್ಟಿದ್ದ 96 ಮತ್ತು ಮೀಸಲು ವರ್ಗಕ್ಕೆ ನೀಡಲಾಗಿದ್ದ 80 ಅಂಕಗಳನ್ನು ಪಡೆದುಕೊಂಡಿಲ್ಲ. ಹೀಗೆ ವಕೀಲರು ಪರೀಕ್ಷೆಯಲ್ಲಿ ತೇರ್ಗಡೆ ಹೊಂದದೇ ಇರುವುದು ಇದು ಐದನೇ ಬಾರಿ ಎಂದು ಹಿರಿಯ ನ್ಯಾಯಾಂಗ ಅಧಿಕಾರಿಯೊಬ್ಬರು ʼಬಾರ್ & ಬೆಂಚ್ʼಗೆ ತಿಳಿಸಿದರು.
ಹೆಚ್ಚಿನ ಮಾಹಿತಿಗೆ ʼಬಾರ್ ಅಂಡ್ ಬೆಂಚ್ʼ ಇಂಗ್ಲಿಷ್ ತಾಣದ ಲಿಂಕ್ ಗಮನಿಸಿ.