[ಒಮಿಕ್ರಾನ್] ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಂದೂಡಲು ಕೋರಿ ದೆಹಲಿ ಹೈಕೋರ್ಟ್‌ ಮೊರೆ ಹೋದ ಕಾಂಗ್ರೆಸ್ ಮುಖಂಡ

Omicron variant

Omicron variant


ಒಮಿಕ್ರಾನ್‌ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಐದು ರಾಜ್ಯಗಳಲ್ಲಿ ನಡೆಯಬೇಕಿರುವ ವಿಧಾನಸಭಾ ಚುನಾವಣೆ ಮುಂದೂಡುವಂತೆ ಕೋರಿ ಕಾಂಗ್ರೆಸ್ ನಾಯಕ ಜಗದೀಶ್ ಶರ್ಮಾ ದೆಹಲಿ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ. ಚುನಾವಣೆ ನಡೆಯುತ್ತಿರುವ ರಾಜ್ಯಗಳಿಂದ ಮರಳುತ್ತಿರುವವರನ್ನು ಕಡ್ಡಾಯವಾಗಿ ಕ್ವಾರಂಟೈನ್‌ಗೆ ಒಳಪಡಿಸಬೇಕು ಎಂದು ಅವರು ಕೋರಿದ್ದಾರೆ. ಉತ್ತರ ಪ್ರದೇಶ, ಪಂಜಾಬ್, ಮಣಿಪುರ, ಉತ್ತರಾಖಂಡ ಹಾಗೂ ಗೋವಾ ರಾಜ್ಯಗಳ ವಿಧಾನಸಭಾ ಚುನಾವಣೆ ಫೆಬ್ರವರಿಯಿಂದ, ಮಾರ್ಚ್ ವರೆಗೆ ನಡೆಯಲಿದೆ. ಮಾರ್ಚ್ 10 ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.

ಹೆಚ್ಚಿನ ಮಾಹಿತಿಗೆ ʼಬಾರ್‌ ಅಂಡ್‌ ಬೆಂಚ್‌ʼ ಇಂಗ್ಲಿಷ್‌ ತಾಣದ ಲಿಂಕ್‌ ಗಮನಿಸಿ.

Related Stories

No stories found.
Kannada Bar & Bench
kannada.barandbench.com