ಕರ್ನಾಟಕ ಪೊಲೀಸ್ ಕಾಯಿದೆ ಜಾರಿ: ಆನ್‌ಲೈನ್‌ ಜೂಜಾಟ ಪ್ರಶ್ನಿಸಿದ್ದ ಮನವಿ ವಜಾ ಮಾಡಿದ ಹೈಕೋರ್ಟ್‌

ರಾಜ್ಯದಲ್ಲಿ ಎಲ್ಲಾ ರೀತಿಯ ಆನ್‌ಲೈನ್ ಗ್ಯಾಂಬ್ಲಿಂಗ್ ಹಾಗೂ ಬೆಟ್ಟಿಂಗ್ ನಿಷೇಧಿಸುವ ಸಲುವಾಗಿ ಕರ್ನಾಟಕ ಪೊಲೀಸ್ (ತಿದ್ದುಪಡಿ) ಕಾಯಿದೆ-2021 ಜಾರಿಗೆ ತರಲಾಗಿದೆ. ಅರ್ಜಿದಾರರ ಮನವಿ ಈಡೇರಿರುವುದರಿಂದ ಅರ್ಜಿಯು ವಿಚಾರಣಾ ಮಾನ್ಯತೆ ಕಳೆದುಕೊಂಡಿದೆ
ಕರ್ನಾಟಕ ಪೊಲೀಸ್ ಕಾಯಿದೆ ಜಾರಿ: ಆನ್‌ಲೈನ್‌ ಜೂಜಾಟ ಪ್ರಶ್ನಿಸಿದ್ದ ಮನವಿ ವಜಾ ಮಾಡಿದ ಹೈಕೋರ್ಟ್‌

ರಾಜ್ಯದಲ್ಲಿ ಎಲ್ಲಾ ಬಗೆಯ ಆನ್‌ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್ ನಿಷೇಧಿಸುವ ಸಲುವಾಗಿ ಕರ್ನಾಟಕ ಪೊಲೀಸ್ ಕಾಯಿದೆಗೆ ತಿದ್ದುಪಡಿ ತರಲಾಗಿದೆ ಎಂದು ಮಂಗಳವಾರ ರಾಜ್ಯ ಸರ್ಕಾರ ಕರ್ನಾಟಕ ಹೈಕೋರ್ಟ್‌ಗೆ ಮಾಹಿತಿ ನೀಡಿದೆ.

ಆನ್‌ಲೈನ್ ಜೂಜಿನಿಂದ ಸಮಾಜದ ಸ್ವಾಸ್ಥ್ಯ ಹಾಳಾಗುತ್ತಿದ್ದು, ಅವುಗಳನ್ನು ನಿಷೇಧಿಸಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ದಾವಣಗೆರೆಯ ಡಿ ಆರ್ ಶಾರದಾ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಮನವಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಮತ್ತು ನ್ಯಾಯಮೂರ್ತಿ ಸಚಿನ್‌ ಶಂಕರ್‌ ಮಗದುಮ್‌ ನೇತೃತ್ವದ ವಿಭಾಗೀಯ ಪೀಠ ನಡೆಸಿತು.

ಸರ್ಕಾರದ ಪರ ವಕೀಲರು “ರಾಜ್ಯದಲ್ಲಿ ಎಲ್ಲಾ ರೀತಿಯ ಆನ್‌ಲೈನ್ ಗ್ಯಾಂಬ್ಲಿಂಗ್ ಹಾಗೂ ಬೆಟ್ಟಿಂಗ್ ನಿಷೇಧಿಸುವ ಸಲುವಾಗಿ ಕರ್ನಾಟಕ ಪೊಲೀಸ್ (ತಿದ್ದುಪಡಿ) ಕಾಯಿದೆ-2021 ಜಾರಿಗೆ ತರಲಾಗಿದೆ. ಅರ್ಜಿದಾರರ ಮನವಿ ಈಡೇರಿರುವುದರಿಂದ ಅರ್ಜಿಯು ವಿಚಾರಣಾ ಮಾನ್ಯತೆ ಕಳೆದುಕೊಂಡಿದೆ” ಎಂದು ಪೀಠಕ್ಕೆ ತಿಳಿಸಿದರು.

Also Read
ಆನ್‌ಲೈನ್ ಜೂಜಾಟ ನಿಷೇಧಿಸುವ ಪೊಲೀಸ್ ಕಾಯಿದೆಯ ಸಾಂವಿಧಾನಿಕ ಸಿಂಧುತ್ವದ ಪ್ರಶ್ನೆ: ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌

ಅರ್ಜಿದಾರರ ಪರ ವಕೀಲ ಶ್ರೀಧರ ಪ್ರಭು ಅವರು “ಕರ್ನಾಟಕ ಪೊಲೀಸ್ ಕಾಯಿದೆಗೆ ಸರ್ಕಾರ ತಿದ್ದುಪಡಿ ತಂದಿದೆಯಾದರೂ, ಆನ್‌ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್ ನಿಷೇಧಕ್ಕೆ ಸೂಕ್ತ ವ್ಯವಸ್ಥೆ ರೂಪಿಸಬೇಕಿದೆ. ಈ ನಿಟ್ಟಿನಲ್ಲಿ ಸರ್ಕಾರ ಗಮನ ಹರಿಸಬೇಕಿದೆ. ಅದಾಗ್ಯೂ ನಮ್ಮ ಮನವಿಯನ್ನು ಸರ್ಕಾರ ಪರಿಗಣಿಸಿರುವ ಹಿನ್ನೆಲೆಯಲ್ಲಿ ಅರ್ಜಿ ವಿಚಾರಣಾ ಮಾನ್ಯತೆ ಕಳೆದುಕೊಂಡಿದ್ದು, ಅದನ್ನು ಇತ್ಯರ್ಥಪಡಿಸಬಹುದು” ಎಂದರು.

ಈಗಾಗಲೇ ಸರ್ಕಾರ ಆನ್‌ಲೈನ್ ಬೆಟ್ಟಿಂಗ್ ನಿಷೇಧಿಸಿದೆ. ಅರ್ಜಿದಾರರ ಮನವಿ ಈಡೇರಿರುವ ಕಾರಣ ಅರ್ಜಿ ವಿಚಾರಣಾ ಮಾನ್ಯತೆ ಕಳೆದುಕೊಂಡಿದ್ದು, ಅರ್ಜಿದಾರರೂ ಅದನ್ನು ಒಪ್ಪಿಕೊಂಡಿದ್ದಾರೆ. ವಿಚಾರಣಾ ಮಾನ್ಯತೆ ಕಳೆದುಕೊಂಡ ಅರ್ಜಿಯನ್ನು ಇತ್ಯರ್ಥಪಡಿಸಲು ಸಾಧ್ಯವಿಲ್ಲ. ಅದನ್ನು ವಜಾಗಳಿಸಬೇಕಾಗುತ್ತದೆ ಎಂದು ತಿಳಿಸಿದ ನ್ಯಾಯಾಯಲವು ಅರ್ಜಿ ವಜಾಗೊಳಿಸಿ ಆದೇಶಿಸಿತು.

Related Stories

No stories found.
Kannada Bar & Bench
kannada.barandbench.com