ಸಂಸತ್ ವಿಶೇಷ ಅಧಿವೇಶನ: ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಮಂಡನೆ

ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಮೂರನೇ ಒಂದು ಭಾಗದಷ್ಟು ಸ್ಥಾನ ಮೀಸಲಿಡಲು ಮಸೂದೆ ಮುಂದಾಗಿದೆ.
Women's Reservation Bill
Women's Reservation Bill

ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಮೂರನೇ ಒಂದು ಭಾಗದಷ್ಟು ಸ್ಥಾನ ಮೀಸಲಿಡುವ ಉದ್ದೇಶದಿಂದ ಕೇಂದ್ರ ಸರ್ಕಾರ ಮಂಗಳವಾರ ಲೋಕಸಭೆಯಲ್ಲಿ ಸಂವಿಧಾನ (128ನೇ ತಿದ್ದುಪಡಿ) ಮಸೂದೆ- 2023 (ಮಹಿಳಾ ಮೀಸಲಾತಿ ಮಸೂದೆ) ಮಂಡಿಸಿದೆ.

ಈಗಾಗಲೇ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಮೀಸಲಿಟ್ಟಿರುವ ಸ್ಥಾನಗಳೂ ಮಹಿಳಾ ಮೀಸಲಾತಿ ವ್ಯಾಪ್ತಿಗೆ ಬರಲಿವೆ.

Also Read
ಎರಡೂ ಕಡೆ ಒಂದೇ ಪಕ್ಷದ ಅಧಿಕಾರವಿದ್ದರೂ ನಾಗಾಲ್ಯಾಂಡ್‌ ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳಾ ಮೀಸಲಾತಿ ಇಲ್ಲ: ಸುಪ್ರೀಂ ಬೇಸರ

ಕೇಂದ್ರ ಕಾನೂನು ಮತ್ತು ನ್ಯಾಯ ಖಾತೆ ರಾಜ್ಯ ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ಲೋಕಸಭೆಯಲ್ಲಿ ಮಸೂದೆ ಮಂಡಿಸಲು ಅವಕಾಶ ಕೋರಿದರು. ಅದರೆ ಮಸೂದೆಯನ್ನು ಓದದ ಹಿನ್ನೆಲೆಯಲ್ಲಿ ಅನೇಕ ಸಂಸದರು ಮಂಡನೆಗೆ ಆಕ್ಷೇಪ ವ್ಯಕ್ತಪಡಿಸಿದರು,. ಈ ಹಿನ್ನೆಲೆಯಲ್ಲಿ ಕೆಲಕಾಲ ಸದನದ ಕಲಾಪವನ್ನು ಮುಂದೂಡಲಾಗಿತ್ತು.

ಇದೇ ವೇಳೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಅವರು ಮಸೂದೆಯನ್ನು ವ್ಯವಹಾರದ ಪೂರಕ ಪಟ್ಟಿಯಲ್ಲಿ ಪ್ರಕಟಿಸಲಾಗಿದೆ ಎಂದು ಸಮರ್ಥಿಸಿಕೊಂಡರು.

Also Read
ವಕೀಲರ ನೇಮಿಸಿಕೊಳ್ಳಲಾಗದವರಿಗೆ ಜೈಲು, ಶ್ರೀಮಂತರಿಗೆ ಜಾಮೀನು: ನ್ಯಾ. ಕೌಲ್ ಕಳವಳ

ಕಲಾಪ ಮತ್ತೆ ಆರಂಭವಾದ ಬಳಿಕ ಧ್ವನಿ ಮತದ ಮೂಲಕ ಮಸೂದೆಯನ್ನು ಮಂಡಿಸಲಾಯಿತು. ಇದಾದ ಬಳಿಕ ಸದನವನ್ನು ಬುಧವಾರ ಬೆಳಿಗ್ಗೆ 11 ಗಂಟೆಗೆ ಮುಂದಡಲಾಯಿತು.

ಗಮನಾರ್ಹ ಅಂಶವೆಂದರೆ, ಕಾಯಿದೆಯ ಪ್ರಾರಂಭದ ನಂತರ  ನಡೆಯುವ ಮೊದಲ ಜನಗಣತಿಯಲ್ಲಿ ಕ್ಷೇತ್ರ ಪುನರ್‌ವಿಂಗಡಣೆ ಕಾರ್ಯ ಕೈಗೊಂಡ ನಂತರ ಈ ಮೀಸಲಾತಿ ಜಾರಿಗೆ ಬರಲಿದೆ ಎಂದು ಮಸೂದೆ ಹೇಳುತ್ತದೆ. ಮಹಿಳೆಯರಿಗೆ ಮೀಸಲಾತಿ ಕಲ್ಪಿಸುವ ಈ ತಿದ್ದುಪಡಿ ಮಸೂದೆಯು ಜಾರಿಗೆ ಬಂದ 15 ವರ್ಷಗಳ ನಂತರ ತನ್ನ ಅಸ್ತಿತ್ವ ಕಳೆದುಕೊಳ್ಳಲಿದೆ.

ಮಸೂದೆ ಪ್ರಕಾರ ವಿಕಾಸ ಭಾರತವಾಗುವ ಗುರಿ ಸಾಧಿಸುವಲ್ಲಿ ಜನಸಂಖ್ಯೆಯಲ್ಲಿ ದೇಶದ ಅರ್ಧದಷ್ಟಿರುವ ಮಹಿಳೆಯರ ಪಾತ್ರ ಅತ್ಯಂತ ಮಹತ್ವದ್ದಾಗಿದೆ.

Related Stories

No stories found.
Kannada Bar & Bench
kannada.barandbench.com