ಎಸ್‌ಸಿ, ಎಸ್‌ಟಿ, ಹಿಂದುಳಿದ ವರ್ಗದ ಮೀಸಲಾತಿ ಶೇ.65ಕ್ಕೆ ಹೆಚ್ಚಿಸುವ ಬಿಹಾರ ಕಾಯಿದೆ ರದ್ದುಪಡಿಸಿದ ಪಾಟ್ನಾ ಹೈಕೋರ್ಟ್

ಮೀಸಲಾತಿ ವರ್ಗಗಳ ಒಟ್ಟು ಮೀಸಲಾತಿಯನ್ನು 2023ರಲ್ಲಿ ಶೇ.65ಕ್ಕೆ ಹೆಚ್ಚಿಸಲಾಯಿತು. ಈ ನಿರ್ಧಾರದಿಂದಾಗಿ ಮೆರಿಟ್ ವರ್ಗದವರಿಗೆ ಇದ್ದ ಅವಕಾಶ ಶೇ.35ಕ್ಕೆ ಇಳಿದಿತ್ತು.
Patna High Court
Patna High Court
Published on

ಹಿಂದುಳಿದ ವರ್ಗಗಳು, ಅತ್ಯಂತ ಹಿಂದುಳಿದ ವರ್ಗಗಳು, ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳಿಗೆ (ಎಸ್‌ಸಿ/ಎಸ್‌ಟಿ) ಇದ್ದ ಶೇಕಡಾ 50ರಷ್ಟು ಮೀಸಲಾತಿಯನ್ನು ಶೇ 65 ಕ್ಕೆ ಹೆಚ್ಚಿಸಲು 2023ರಲ್ಲಿ ಬಿಹಾರ ಶಾಸಕಾಂಗ ಅಂಗೀಕರಿಸಿದ್ದ ತಿದ್ದುಪಡಿಗಳನ್ನು ಪಾಟ್ನಾ ಹೈಕೋರ್ಟ್ ಗುರುವಾರ ರದ್ದುಗೊಳಿಸಿದೆ.

ಉದ್ಯೋಗ ಮತ್ತು ಶಿಕ್ಷಣದ ಕ್ಷೇತ್ರದಲ್ಲಿ ಜನರಿಗೆ ಸಮಾನ ಅವಕಾಶ ನೀಡದ ಕಾಯಿದೆಗಳನ್ನು ಪ್ರಶ್ನಿಸಿದ ಅರ್ಜಿಗಳಿಗೆ ಸಂಬಂಧಿಸಿದಂತೆ ಮುಖ್ಯ ನ್ಯಾಯಮೂರ್ತಿ ಕೆ ವಿನೋದ್ ಚಂದ್ರನ್ ಮತ್ತು ನ್ಯಾಯಮೂರ್ತಿ ಹರೀಶ್ ಕುಮಾರ್ ಅವರಿದ್ದ ವಿಭಾಗೀಯ ಪೀಠ ಈ ತೀರ್ಪು ನೀಡಿದೆ.  

ಸಂವಿಧಾನವನ್ನು ಮತ್ತು 14 15 ಮತ್ತು 16ನೇ ವಿಧಿಯಡಿ ಒದಗಿಸಲಾದ ಸಮಾನತೆಯ ಹಕ್ಕನ್ನು ಉಲ್ಲಂಘಿಸುವ ಹುದ್ದೆಗಳು ಮತ್ತು ಸೇವೆಗಳಲ್ಲಿ ಖಾಲಿ ಹುದ್ದೆಗಳ ಬಿಹಾರ ಮೀಸಲಾತಿ (ತಿದ್ದುಪಡಿ) ಕಾಯಿದೆ, 2023 ಮತ್ತು ಬಿಹಾರ (ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶಾತಿ) ಮೀಸಲಾತಿ (ತಿದ್ದುಪಡಿ) ಕಾಯಿದೆ, 2023 ಅನ್ನು ನ್ಯಾಯಾಲಯ ಬದಿಗೆ ಸರಿಸಿದೆ.

ಸರ್ಕಾರಿ ಸೇವೆಯಲ್ಲಿ ತುಲನಾತ್ಮಕವಾಗಿ ಎಸ್‌ಸಿ ಎಸ್‌ಟಿ ಮತ್ತು ಹಿಂದುಳಿದ ವರ್ಗಗಳ ಸದಸ್ಯರ ಸಂಖ್ಯೆ ಕಡಿಮೆ ಇದೆ ಎಂಬ ದತ್ತಾಂಶ ಆಧರಿಸಿ ಶಾಸಕಾಂಗ 1991ರ ಕಾಯಿದೆಗೆ ತಿದ್ದುಪಡಿ ಮಾಡಿತ್ತು.

ಮೀಸಲಾತಿ ವರ್ಗಗಳ ಒಟ್ಟು ಮೀಸಲಾತಿಯನ್ನು 2023ರಲ್ಲಿ ಶೇ 65ಕ್ಕೆ ಹೆಚ್ಚಿಸಲಾಯಿತು. ಈ ನಿರ್ಧಾರದಿಂದಾಗಿ ಮುಕ್ತ ಅರ್ಹತೆಯ ವರ್ಗದವರಿಗೆ ಇದ್ದ ಅವಕಾಶ  ಶೇ 35ಕ್ಕೆ ಇಳಿದಿತ್ತು. 

ಒದಗಿಸಲಾಗಿದ್ದ ಮೀಸಲಾತಿ ವಿವರ ಹೀಗಿದೆ:

Kannada Bar & Bench
kannada.barandbench.com