ಪಿಎಫ್‌ಐ ನಿಷೇಧ ಪ್ರಕರಣ: ರಾಜ್ಯ ಸರ್ಕಾರದ ವಿಶೇಷ ವಕೀಲರಾಗಿ ಪ್ರಸನ್ನ ಕುಮಾರ್ ನೇಮಕ

P Prasanna Kumar, Special Counsel
P Prasanna Kumar, Special Counsel
Published on

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಮತ್ತದರ ಸಹವರ್ತಿ ಸಂಘಟನೆಗಳ ನಿಷೇಧಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ರಾಜ್ಯ ಸರ್ಕಾರವನ್ನು ಪ್ರತಿನಿಧಿಸುವ ವಿಶೇಷ ವಕೀಲರನ್ನಾಗಿ ಪಿ ಪ್ರಸನ್ನ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ.

ಈ ಸಂಬಂಧ ರಾಜ್ಯ ಗೃಹ ಇಲಾಖೆ ಬುಧವಾರ ಆದೇಶ ಹೊರಡಿಸಿದ್ದು, ಕಾನೂನುಬಾಹಿರ ಚಟುವಟಿಕೆ ನಿಯಂತ್ರಣ ಕಾಯಿದೆ - 1964ರ ಅಡಿಯಲ್ಲಿ ಸ್ಥಾಪಿತಗೊಂಡಿರುವ ನ್ಯಾಯ ಮಂಡಳಿಯ ಮುಂದಿರುವ ಪಿಎಫ್‌ಐ ನಿಷೇಧ ಪ್ರಕರಣದ ವಿಚಾರಣೆಯಲ್ಲಿ ಪ್ರಸನ್ನ ಕುಮಾರ್ ಸರ್ಕಾರದ ಪರವಾಗಿ ವಾದ ಮಂಡಿಸಲಿದ್ದಾರೆ ಎಂದು ಜನವರಿ 25ರಂದು ಮಾಡಿರುವ ಆದೇಶದಲ್ಲಿ ತಿಳಿಸಲಾಗಿದೆ.

Kannada Bar & Bench
kannada.barandbench.com