ಮಳೆನೀರು ನುಗ್ಗಿ ಯುಪಿಎಸ್‌ಸಿ ಆಕಾಂಕ್ಷಿಗಳ ಸಾವು: ಉನ್ನತ ಮಟ್ಟದ ತನಿಖೆ ಕೋರಿ ದೆಹಲಿ ಹೈಕೋರ್ಟ್‌ಗೆ ಪಿಐಎಲ್

ಭಾರೀ ಮಳೆ ಬಳಿಕ ದೆಹಲಿಯ ಯುಪಿಎಸ್‌ಸಿ ಕೋಚಿಂಗ್ ಕೇಂದ್ರದ ನೆಲಮಾಳಿಗೆಗೆ ಪ್ರವಾಹದ ನೀರು ನುಗ್ಗಿ ಮೂವರು ನಾಗರಿಕ ಸೇವಾ ಆಕಾಂಕ್ಷಿಗಳು ಸಾವನ್ನಪ್ಪಿದ್ದರು.
Delhi Rain
Delhi Rain
Published on

ದೆಹಲಿಯ ರಾಜೇಂದ್ರ ನಗರದಲ್ಲಿರುವ ಕೋಚಿಂಗ್ ಕೇಂದ್ರವೊಂದಕ್ಕೆ ಮಳೆ ನೀರು ನುಗ್ಗಿ ಮೂವರು ನಾಗರಿಕ ಸೇವಾ ಆಕಾಂಕ್ಷಿಗಳು ಸಾವನ್ನಪ್ಪಿದ ಘಟನೆ ಕುರಿತು "ಉನ್ನತ ಮಟ್ಟದ" ತನಿಖೆ ನಡೆಸುವಂತೆ ಕೋರಿ ದೆಹಲಿ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಲಾಗಿದೆ.

ವಕೀಲ ರುದ್ರ ವಿಕ್ರಮ್ ಸಿಂಗ್ ಪ್ರಕರಣವನ್ನು ಮಂಗಳವಾರ ಪ್ರಸ್ತಾಪಿಸಿದಾಗ ನಾಳೆ ವಿಚಾರಣೆ ನಡೆಸುವುದಾಗಿ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಮನಮೋಹನ್ ಮತ್ತು ನ್ಯಾಯಮೂರ್ತಿ ತುಷಾರ್ ರಾವ್ ಗೆಡೆಲಾ ಅವರಿದ್ದ ಪೀಠ ತಿಳಿಸಿತು. "ಪ್ರಕರಣಕ್ಕೆ ಸಂಬಂಧಿಸಿದ ಕಡತಗಳು ಸೂಕ್ತವಾಗಿ ಸಲ್ಲಿಕೆಯಾಗಿದ್ದರೆ ಪ್ರಕರಣವನ್ನು ನಾಳೆಗೆ ಪಟ್ಟಿ ಮಾಡಿ" ಎಂದು ಪೀಠವು ರಿಜಿಸ್ಟ್ರಿಗೆ ಸೂಚಿಸಿತು.

Also Read
ಪ್ರವಾಹ ಪರಿಹಾರ: ಕೇಂದ್ರ ₹ 37 ಸಾವಿರ ಕೋಟಿ ಬಿಡುಗಡೆ ಮಾಡುತ್ತಿಲ್ಲ ಎಂದು ದೂರಿ ಸುಪ್ರೀಂ ಮೆಟ್ಟಿಲೇರಿದ ತಮಿಳುನಾಡು

ಕುಟುಂಬ್‌ ಹೆಸರಿನ ಸಂಘಟನೆಯು ಘಟನೆ ಸಂಬಂಧ ಪಿಐಎಲ್‌ ಸಲ್ಲಿಸಿದೆ. ದೆಹಲಿ ಸರ್ಕಾರ, ದೆಹಲಿ ಮಹಾನಗರ ಪಾಲಿಕೆ ಹಾಗೂ ದೆಹಲಿ ಅಭಿವೃದ್ಧಿ ಪ್ರಾಧಿಕಾರವನ್ನು ಪ್ರಕರಣದಲ್ಲಿ ಪ್ರತಿವಾದಿಗಳನ್ನಾಗಿ ಮಾಡಲಾಗಿದ್ದು ದೆಹಲಿ ಅಧಿಕಾರಿಗಳ ಭ್ರಷ್ಟಾಚಾರ ಮತ್ತು ವೈಫಲ್ಯದಿಂದಾಗಿ ಘಟನೆ ನಡೆದಿದೆ ಎಂದು ದೂರಲಾಗಿದೆ.

Also Read
ಹಾಥ್‌ರಸ್‌ ಕಾಲ್ತುಳಿತ ದುರಂತ: ನ್ಯಾಯಾಂಗ ತನಿಖೆ ಕೋರಿ ಸುಪ್ರೀಂ ಕೋರ್ಟ್‌, ಅಲಾಹಾಬಾದ್‌ ಹೈಕೋರ್ಟ್‌ನಲ್ಲಿ ಅರ್ಜಿ

ಕಳೆದ ಶನಿವಾರ ಸುರಿದ ಭಾರೀ ಮಳೆಗೆ ರಾಜೇಂದ್ರ ನಗರದ ʼರಾವ್ಸ್‌ ಐಎಎಸ್‌ ಸ್ಟಡಿ ಸರ್ಕಲ್‌ʼ ಕೋಚಿಂಗ್‌ ಕೇಂದ್ರದ ನೆಲಮಾಳಿಯ ಗ್ರಂಥಾಲಯಕ್ಕೆ  ಅಪಾರ ಪ್ರಮಾಣದ ನೀರು ನುಗ್ಗಿತ್ತು.

ಘಟನೆಯಲ್ಲಿ ಮೃತಪಟ್ಟ ಮೂವರು ನಾಗರಿಕ ಸೇವಾ ಆಕಾಂಕ್ಷಿಗಳು ತೆಲಂಗಾಣದ ತಾನಿಯಾ ಸೋನಿ (25 ವರ್ಷ), ಉತ್ತರಪ್ರದೇಶದ ಶ್ರೇಯಾ ಯಾದವ್ (25) ಮತ್ತು ಕೇರಳದ ನವೀನ್ ಡೆಲ್ವಿನ್ (28) ಎಂದು ತಿಳಿದುಬಂದಿತ್ತು.

Kannada Bar & Bench
kannada.barandbench.com