ಐಪಿಎಸ್‌ ಮತ್ತಿತರ ಸೇವೆಗಳಲ್ಲಿ ವಿಕಲ ಚೇತನರಿಗೆ ಅವಕಾಶ ನೀಡದಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ

ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಸಹಾಯ ಮಾಡುವಂತೆ ಅಟಾರ್ನಿ ಜನರಲ್ (ಎಜಿ) ಕೆ ಕೆ ವೇಣುಗೋಪಾಲ್ ಅವರನ್ನು ಪೀಠ ಕೇಳಿತು. ಮತ್ತು ಅರ್ಜಿಯ ಪ್ರತಿಯನ್ನು ಎಜಿ ಕಚೇರಿಗೂ ಸಲ್ಲಿಸುವಂತೆ ಅರ್ಜಿದಾರರಿಗೆ ಸೂಚಿಸಿತು.
ಐಪಿಎಸ್‌ ಮತ್ತಿತರ ಸೇವೆಗಳಲ್ಲಿ ವಿಕಲ ಚೇತನರಿಗೆ ಅವಕಾಶ ನೀಡದಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ

Supreme Court


ಭಾರತೀಯ ಪೊಲೀಸ್ ಸೇವೆ (IPS), ಭಾರತೀಯ ರೈಲ್ವೆ ರಕ್ಷಣಾ ಪಡೆ ಸೇವೆ (IRPFS) ಮತ್ತು ದೆಹಲಿ, ದಮನ್‌ - ದಿಯು, ದಾದ್ರಾ - ನಗರ್ ಹವೇಲಿ, ಅಂಡಮಾನ್‌ ಮತ್ತು ನಿಕೋಬಾರ್ ದ್ವೀಪಗಳು ಮತ್ತು ಲಕ್ಷದ್ವೀಪ ಪೊಲೀಸ್ ಸೇವೆಗಳಲ್ಲಿ (DANIPS) ವಿಕಲ ಚೇತಲ ಚೇತನರಿಗೆ ಅವಕಾಶ ನೀಡದಂತೆ ಕೇಂದ್ರ ಸರ್ಕಾರ ಹೊರಡಿಸಿರುವ ಅಧಿಸೂಚನೆ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ.

ʼನ್ಯಾಷನಲ್‌ ಪ್ಲಾಟ್‌ಫಾರ್ಮ್‌ ಫಾರ್‌ ದಿ ರೈಟ್ಸ್‌ ಆಫ್‌ ದಿ ಡಿಸೇಬಲ್ಡ್‌ʼ ಸಂಘಟನೆ ಸಲ್ಲಿಸಿರುವ ಅರ್ಜಿ, ಕೇಂದ್ರ ಸರ್ಕಾರ 2021ರ ಸೆಪ್ಟೆಂಬರ್‌ನಲ್ಲಿ ಹೊರಡಿಸಿದ್ದ ಅಧಿಸೂಚನೆಯನ್ನು ಪ್ರಶ್ನಿಸಿದೆ. ಕಾಳಗದ ಹುದ್ದೆಗಳನ್ನು (Combat Posts) ಮಾತ್ರವಲ್ಲದೆ ಆಡಳಿತಾತ್ಮಕ ಹುದ್ದೆಗಳಿಂದಲೂ ವಿಕಲ ಚೇತನರನ್ನು ದೂರ ಇಡಲಾಗಿದೆ ಎಂದು ಅದು ದೂರಿದೆ.

Also Read
ಆತ್ಮಾಹುತಿ ಪ್ರಕರಣ: ನಿವೃತ್ತ ಐಪಿಎಸ್‌ ಅಧಿಕಾರಿ ಠಾಕೂರ್‌ರನ್ನು ನ್ಯಾಯಾಂಗ ಬಂಧನಕ್ಕೆ ನೀಡಿದ ಉತ್ತರ ಪ್ರದೇಶ ನ್ಯಾಯಾಲಯ

ಸೋಮವಾರ ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ನ್ಯಾಯವಾದಿ ಅರವಿಂದ ದಾತಾರ್, ಇದು ರಾಷ್ಟ್ರೀಯ ಪ್ರಾಮುಖ್ಯತೆಯ ಪ್ರಶ್ನೆಯಾಗಿರುವುದರಿಂದ ಪ್ರಕರಣವನ್ನು ತುರ್ತಾಗಿ ವಿಚಾರಣೆ ನಡೆಸುವಂತೆ ಮನವಿ ಮಾಡಿದರು.

ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಸಹಾಯ ಮಾಡುವಂತೆ ಅಟಾರ್ನಿ ಜನರಲ್ (ಎಜಿ) ಕೆ ಕೆ ವೇಣುಗೋಪಾಲ್ ಅವರನ್ನು ನ್ಯಾಯಮೂರ್ತಿಗಳಾದ ಎ ಎಂ ಖಾನ್ವಿಲ್ಕರ್ ಮತ್ತು ಅಭಯ್ ಎಸ್ ಓಕಾ ಅವರಿದ್ದ ಪೀಠ ಕೇಳಿತು. ಮತ್ತು ಅರ್ಜಿಯ ಪ್ರತಿಯನ್ನು ಎಜಿ ಕಚೇರಿಗೂ ಸಲ್ಲಿಸುವಂತೆ ಅರ್ಜಿದಾರರಿಗೆ ಸೂಚಿಸಿತು.

Related Stories

No stories found.
Kannada Bar & Bench
kannada.barandbench.com