ಒಟಿಟಿ ವೇದಿಕೆ ಲೈಮ್‌ಲೈಟ್‌ನಲ್ಲಿ ʼನಾನೇಕೆ ಗಾಂಧಿ ಕೊಂದೆʼ (ವೈ ಐ ಕಿಲ್ಡ್ ಗಾಂಧಿ) ಸಿನಿಮಾ ಬಿಡುಗಡೆ ತಡೆ ನೀಡುವಂತೆ ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಸಿಕರಂದರ್ ಬೆಹ್ಲ್ ಎನ್ನುವವರು ವಕೀಲ ಅನೂಜ್ ಭಂಡಾರಿ ಅವರ ಮೂಲಕ ಮನವಿ ಸಲ್ಲಿಸಿದ್ದಾರೆ. ರಾಷ್ಟ್ರಪತಿ ಮಹಾತ್ಮ ಗಾಂಧೀಜಿ ಅವರ ವರ್ಚಸ್ಸಿಗೆ ಧಕ್ಕೆ ಉಂಟು ಮಾಡಿ, ಕೊಲೆಗಡುಕ ನಾಥುರಾಮ್ ಗೋಡ್ಸೆ ಅವರ ವಿಜೃಂಭಣೆಯನ್ನು ಸಿನಿಮಾದಲ್ಲಿ ಮಾಡಲಾಗಿದೆ ಎಂದು ಮನವಿಯಲ್ಲಿ ಆಕ್ಷೇಪಿಸಲಾಗಿದೆ. ಕೋಮು ಸೌಹಾರ್ದತೆಗೆ ಧಕ್ಕೆ ಉಂಟು ಮಾಡುವ, ವಿಷ ಬೀಜ ಬಿತ್ತುವ ಮೂಲಕ ಶಾಂತಿಗೆ ಭಂಗ ಉಂಟು ಮಾಡುವ ಉದ್ದೇಶವನ್ನು ಸಿನಿಮಾ ಹೊಂದಲಾಗಿದೆ ಎಂದು ಮನವಿಯಲ್ಲಿ ವಿವರಿಸಲಾಗಿದೆ. ಸಿನಿಮಾಗೆ ಸೆನ್ಸಾರ್ ಮಂಡಳಿಯು ಒಪ್ಪಿಗೆ ನೀಡಿಲ್ಲವಾದರೂ ಜನವರಿ 30ರಂದು ಒಟಿಟಿಯಲ್ಲಿ ಸಿನಿಮಾ ಬಿಡುಗಡೆ ಮಾಡಲು ಸಿದ್ಧತೆ ಮಾಡಲಾಗಿದೆ.
ಹೆಚ್ಚಿನ ಮಾಹಿತಿಗೆ ʼಬಾರ್ ಅಂಡ್ ಬೆಂಚ್ʼ ಇಂಗ್ಲಿಷ್ ತಾಣದ ಲಿಂಕ್ ಗಮನಿಸಿ.