ರಾಜ್ಯ ಸರ್ಕಾರದಿಂದ ಮುರುಘಾ ಮಠಕ್ಕೆ ಆಡಳಿತಾಧಿಕಾರಿ ನೇಮಕ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆ

ನಿವೃತ್ತ ಐಎಎಸ್ ಅಧಿಕಾರಿ ಪಿ ಎಸ್ ವಸ್ತ್ರದ್ ನೇಮಕ ರದ್ದುಪಡಿಸುವಂತೆ ಕೋರಿ ಚಿತ್ರದುರ್ಗದ ಡಿ ಎಸ್ ಮಲ್ಲಿಕಾರ್ಜುನ ಮತ್ತಿತರರು ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ.
Murugha Mutt and Dr. Shivamurthy Murugha Sharanaru
Murugha Mutt and Dr. Shivamurthy Murugha Sharanaru

ಚಿತ್ರದುರ್ಗದ ಮುರುಘರಾಜೇಂದ್ರ ಮಠಕ್ಕೆ ಆಡಳಿತಾಧಿಕಾರಿಯನ್ನಾಗಿ ನಿವೃತ್ತ ಐಎಎಸ್‌ ಅಧಿಕಾರಿ ಪಿ ಎಸ್‌ ವಸ್ತ್ರದ್‌ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರವು ಮಾಡಿರುವ ಆದೇಶವನ್ನು ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್‌ಗೆ ಗುರುವಾರ ಅರ್ಜಿ ಸಲ್ಲಿಸಲಾಗಿದೆ.

ನಿವೃತ್ತ ಐಎಎಸ್ ಅಧಿಕಾರಿ ಪಿ ಎಸ್ ವಸ್ತ್ರದ್ ನೇಮಕ ರದ್ದುಪಡಿಸುವಂತೆ ಕೋರಿ ಚಿತ್ರದುರ್ಗದ ಡಿ ಎಸ್ ಮಲ್ಲಿಕಾರ್ಜುನ ಮತ್ತಿತರರು ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ.

ಮುರುಘಾ ಮಠದ ಶಿಕ್ಷಣ ಸಂಸ್ಥೆಗಳ ನಿರ್ವಹಣೆಗೆ ಸಂಬಂಧಿಸಿದಂತೆ ನಿವೃತ್ತ ನ್ಯಾಯಾಧೀಶರಿಗೆ ಶಿವಮೂರ್ತಿ ಮುರುಘಾ ಶರಣರು ಈಗಾಗಲೇ ಜಿಪಿಎ‌ ನೀಡಿದ್ದಾರೆ. ಮಠದ ವ್ಯವಹಾರಗಳಿಗೆ ಸಂಬಂಧಿಸಿದಂತೆ ಬಸವಪ್ರಭು ಸ್ವಾಮೀಜಿಗೆ ಜಿಪಿಎ ನೀಡಲಾಗಿದೆ. ಮಠಾಧಿಪತಿ ಜೈಲಿನಲ್ಲಿರುವುದು ಆಡಳಿತಾಧಿಕಾರಿ ನೇಮಿಸಲು ಸಕಾರಣವಲ್ಲ. ಹೀಗಾಗಿ, ಆಡಳಿತಾಧಿಕಾರಿ ನೇಮಕ ರದ್ದುಪಡಿಸಬೇಕು ಎಂದು ಕೋರಲಾಗಿದೆ ಎನ್ನಲಾಗಿದೆ.

Also Read
ಚಿತ್ರದುರ್ಗ ಮುರುಘಾ ಮಠದ ಆಡಳಿತಾಧಿಕಾರಿಯಾಗಿ ನಿವೃತ್ತ ಐಎಎಸ್‌ ಅಧಿಕಾರಿ ವಸ್ತ್ರದ್‌ ನೇಮಕ

ಶಿವಮೂರ್ತಿ ಮುರುಘಾ ಶರಣರು ಸೆಪ್ಟೆಂಬರ್‌ 1ರಿಂದ ನ್ಯಾಯಾಂಗ ಬಂಧನದಲ್ಲಿದ್ದಾರೆ ಎಂದು ಅಕ್ಟೋಬರ್‌ 22ರಂದು ಚಿತ್ರದುರ್ಗದ ಜಿಲ್ಲಾಧಿಕಾರಿ ವರದಿ ನೀಡಿದ್ದರು. ಅಡ್ವೊಕೇಟ್‌ ಜನರಲ್‌ ಅವರು ಸಂವಿಧಾನದ 162ನೇ ವಿಧಿಯ ಅನ್ವಯ ಟ್ರಸ್ಟಿನ ಸ್ವತ್ತನ್ನು ರಕ್ಷಿಸುವ ದೃಷ್ಟಿಯಿಂದ ಸಂಸ್ಥೆಗೆ ಆಡಳಿತಾಧಿಕಾರಿ ನೇಮಿಸಬಹುದು ಎಂದು ಅಭಿಪ್ರಾಯ ನೀಡಿದ್ದನ್ನು ಆಧರಿಸಿ ರಾಜ್ಯ ಸರ್ಕಾರವು ಆಡಳಿತಾಧಿಕಾರಿ ನೇಮಿಸಿ ಮಂಗಳವಾರ ಆದೇಶ ಮಾಡಿತ್ತು.

Kannada Bar & Bench
kannada.barandbench.com