ಕಾಶ್ಮೀರಿ ಪಂಡಿತರ ಪುನರ್ವಸತಿಗಾಗಿ ನಿವೇಶನ ಹಂಚಿಕೆ ಪರಿಶೀಲಿಸಿ: ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್

1947ರಲ್ಲಿ ಪಾಕಿಸ್ತಾನದಿಂದ ಸ್ಥಳಾಂತರಗೊಂಡ ವ್ಯಕ್ತಿಗಳಿಗೆ ಭಾರತ ಸರ್ಕಾರ ಪಂಜಾಬ್‌ನ ವಿವಿಧ ಜಿಲ್ಲೆಗಳಲ್ಲಿ ಪುನರ್ವಸತಿ ಕಲ್ಪಿಸಿದ್ದು ಪ್ರಸ್ತುತ ಪ್ರಕರಣದಲ್ಲಿ ಇದೇ ವಿಧಾನ ಅಳವಡಿಸಿಕೊಳ್ಳಬಹುದು ಎಂದು ನ್ಯಾಯಾಲಯ ಸಲಹೆ ನೀಡಿದೆ.
ಕಾಶ್ಮೀರಿ ಪಂಡಿತರ ಪುನರ್ವಸತಿಗಾಗಿ ನಿವೇಶನ ಹಂಚಿಕೆ ಪರಿಶೀಲಿಸಿ: ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್
A1

ಜಮ್ಮು ಕಾಶ್ಮೀರದಲ್ಲಿ 90ರ ದಶಕದಲ್ಲಿ ಭಯೋತ್ಪಾದಕರಿಂದಾಗಿ ನೆಲೆ ಕಳೆದುಕೊಂಡ ಕಾಶ್ಮೀರಿ ಪಂಡಿತರ ಸ್ಥಿತಿಗತಿ ಪರಿಶೀಲಿಸುವಂತೆ ಹರಿಯಾಣ ಹೈಕೋರ್ಟ್ ಮಂಗಳವಾರ ಹರಿಯಾಣ ಸರ್ಕಾರಕ್ಕೆ ತಿಳಿಸಿದೆ [ರಮೇಶ್ ರಜ್ದಾನ್ ವಿರುದ್ಧ ಹರಿಯಾಣ ಸರ್ಕಾರ ನಡುವಣ ಪ್ರಕರಣ].

1947ರಲ್ಲಿ ಪಾಕಿಸ್ತಾನದಿಂದ ಸ್ಥಳಾಂತರಗೊಂಡ ವ್ಯಕ್ತಿಗಳಿಗೆ ಭಾರತ ಸರ್ಕಾರ ಪಂಜಾಬ್‌ನ ವಿವಿಧ ಜಿಲ್ಲೆಗಳಲ್ಲಿ ಪುನರ್ವಸತಿ ಕಲ್ಪಿಸಿದ್ದು ಪ್ರಸ್ತುತ ಪ್ರಕರಣದಲ್ಲಿ ಇದೇ ವಿಧಾನ ಅಳವಡಿಸಿಕೊಳ್ಳಬಹುದು ಎಂದು ನ್ಯಾಯಮೂರ್ತಿಗಳಾದ ಅಮೋಲ್ ರತ್ತನ್ ಸಿಂಗ್ ಮತ್ತು ಲಲಿತ್ ಬಾತ್ರಾ ಅವರಿದ್ದ ಪೀಠ ಸಲಹೆ ನೀಡಿದೆ.

Also Read
1990ರ ಕಾಶ್ಮೀರಿ ಪಂಡಿತರ ಹತ್ಯಾಕಾಂಡ: ಸಿಬಿಐ ಅಥವಾ ಎನ್ಐಎ ತನಿಖೆಗೆ ಕೋರಿ ಸುಪ್ರೀಂಗೆ ಅರ್ಜಿ ಸಲ್ಲಿಸಿದ ಸಂಘಟನೆ

"ಭಯೋತ್ಪಾದನೆಯಿಂದಾಗಿ ಕಾಶ್ಮೀರದಲ್ಲಿ ತಮ್ಮ ಪೂರ್ವಜರ ಮನೆಗಳಿಂದ ಸ್ಥಳಾಂತರಗೊಂಡ ಕಾಶ್ಮೀರಿ ಪಂಡಿತರಿಗೆ ಪುನರ್ವಸತಿ ಕಲ್ಪಿಸಲು ಹರಿಯಾಣ ಸರ್ಕಾರ ಈ ಕೋನದಿಂದ ಸಮಸ್ಯೆ ಪರಿಶೀಲಿಸಬಹುದು" ಎಂದು ನ್ಯಾಯಾಲಯ ಹೇಳಿದೆ.

Also Read
ಕಾಶ್ಮೀರ ಫೈಲ್ಸ್ ಚಿತ್ರ ಬಿಡುಗಡೆಗೆ ತಡೆ ಕೋರಿದ್ದ ಮನವಿಯ ವಿಚಾರಣೆ ನಾಳೆ ನಡೆಸಲು ಬಾಂಬೆ ಹೈಕೋರ್ಟ್ ಒಪ್ಪಿಗೆ [ಚುಟುಕು]

ನೆಲೆ ಕಳೆದುಕೊಂಡ ಕಾಶ್ಮೀರಿ ಪಂಡಿತರ ವಸತಿಗಾಗಿ ನಿವೇಶನ ಹಂಚಿಕೆ ಸಂಬಂಧ ಸಲ್ಲಿಸಿದ್ದ ಅರ್ಜಿಯಲ್ಲಿ ಏಪ್ರಿಲ್ 6 ರಂದು ನಡೆಯಲಿರುವ ಲಾ ಡ್ರಾಗೆ (ಚೀಟಿ ಎತ್ತುವಿಕೆ) ತಡೆಯಾಜ್ಞೆ ನೀಡುವಂತೆಯೂ ಕೋರಲಾಗಿತ್ತು. ಆದರೆ ಲಾಟ್‌ ಡ್ರಾಗೆ ತಡೆ ನೀಡದ ನ್ಯಾಯಾಲಯ ಜಮ್ಮ ಕಾಶ್ಮೀರದಿಂದ ಸ್ಥಳಾಂತರಗೊಂಡಿರುವ ಎಲ್ಲಾ ವ್ಯಕ್ತಿಗಳನ್ನೂ ಅದರಲ್ಲಿ ಒಳಗೊಳ್ಳಬೇಕು ಎಂದು ಸೂಚಿಸಿದೆ.

Related Stories

No stories found.
Kannada Bar & Bench
kannada.barandbench.com