ದೇಶೀಯ ಭಾಷೆಗಳಲ್ಲಿ ತೀರ್ಪು ಲಭ್ಯತೆ: ಸುಪ್ರೀಂ ಕೋರ್ಟ್‌ಗೆ ಧನ್ಯವಾದ ಅರ್ಪಿಸಿದ ಪ್ರಧಾನಿ ಮೋದಿ

ದೆಹಲಿಯ ಕೆಂಪು ಕೋಟೆಯಲ್ಲಿ ರಾಷ್ಟ್ರವನ್ನುದ್ದೇಶಿಸಿ ಪ್ರಧಾನಮಂತ್ರಿ ಮಾತನಾಡಿದರು. ವಿವಿಧ ಗಣ್ಯರೊಂದಿಗೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ದೇಶೀಯ ಭಾಷೆಗಳಲ್ಲಿ ತೀರ್ಪು ಲಭ್ಯತೆ: ಸುಪ್ರೀಂ ಕೋರ್ಟ್‌ಗೆ ಧನ್ಯವಾದ ಅರ್ಪಿಸಿದ ಪ್ರಧಾನಿ  ಮೋದಿ
A1
Published on

ಪ್ರಾದೇಶಿಕ ಭಾಷೆಗಳಲ್ಲಿ ನ್ಯಾಯಾಲಯದ ತೀರ್ಪುಗಳು ಲಭ್ಯವಾಗುವಂತೆ ಮಾಡುತ್ತಿರುವ ಸುಪ್ರೀಂ ಕೋರ್ಟ್‌ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಂಗಳವಾರ ಸ್ವಾತಂತ್ರ್ಯ ದಿನದ ಭಾಷಣದ ವೇಳೆ ಧನ್ಯವಾದ ಅರ್ಪಿಸಿದರು.

ದೆಹಲಿಯ ಕೆಂಪು ಕೋಟೆಯಲ್ಲಿ ಅವರು ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದರು. ವಿವಿಧ ಗಣ್ಯರೊಂದಿಗೆ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್‌ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Also Read
ಪ್ರಾದೇಶಿಕ ಭಾಷೆಗಳಲ್ಲಿ ನ್ಯಾಯಾಲಯದ ವಿಚಾರಣೆಯ ಲಿಪ್ಯಂತರ ಲಭ್ಯವಾಗುವಂತೆ ಮಾಡುವ ಕೆಲಸ ಪ್ರಗತಿಯಲ್ಲಿದೆ: ಸಿಜೆಐ

“ನಾನು ಭಾರತದ ಸುಪ್ರೀಂ ಕೋರ್ಟ್‌ಗೆ ಧನ್ಯವಾದ ಹೇಳಲು ಬಯಸುತ್ತೇನೆ. ನ್ಯಾಯಾಲಯಕ್ಕೆ ಬಂದ ಪಕ್ಷಕಾರರಿಗೆ ತೀರ್ಪುಗಳ ಕಾರ್ಯಕಾರಿ ಭಾಗವನ್ನು ಪ್ರಾದೇಶಿಕ ಭಾಷೆಗಳಲ್ಲಿ ಲಭ್ಯವಾಗುವಂತೆ ಮಾಡಲಾಗುವುದು ಎಂದು ಸುಪ್ರೀಂ ಕೋರ್ಟ್‌ ಹೇಳಿದೆ. ಮಾತೃಭಾಷೆಯ ಮಹತ್ವ ಹೆಚ್ಚುತ್ತಿದೆ” ಎಂಬುದಾಗಿ ಅವರು ತಿಳಿಸಿದರು.

ಪ್ರಧಾನಿ ಮೋದಿ ಅವರ ಭಾಷಣದ ತುಣುಕನ್ನು ಇಲ್ಲಿ ವೀಕ್ಷಿಸಬಹುದು:

Kannada Bar & Bench
kannada.barandbench.com