ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಿ ಆಕೆಯ ಗರ್ಭಪಾತಕ್ಕೆ ಕಾರಣನಾದ ವೈದ್ಯನನ್ನು ಪ್ರಕರಣದಿಂದ ಬಿಡುಗಡೆಗೊಳಿಸಲು ನಿರಾಕರಿಸಿದ ಬಾಂಬೆ ಹೈಕೋರ್ಟ್‌ನ ಔರಂಗಾಬಾದ್ ಪೀಠ “ವೈದ್ಯಕೀಯ ವಿಜ್ಞಾನ ಎಷ್ಟು ಮುಂದುವರೆದಿದೆ ಎಂದರೆ ಗರ್ಭಧಾರಣೆಯ ಕಾರಣಕ್ಕೆ ಮಹಿಳೆಯ ದೇಹದಲ್ಲಾದ ಬದಲಾವಣೆಗಳ ಆಧಾರದ ಮೇಲೆ ಆಕೆ ಗರ್ಭಧರಿಸಿದ್ದನ್ನು ನಿರ್ಧರಿಸಬಹುದು” ಎಂದು ಅಭಿಪ್ರಾಯಪಟ್ಟಿದೆ.
ಪ್ರಕರಣದಿಂದ ಬಿಡುಗಡೆ ಮಾಡಲು ನಿರಾಕರಿಸಿದ ಪೋಕ್ಸೊ ವಿಶೇಷ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಆರೋಪಿ, ಜಲ್ನಾ ಜಿಲ್ಲೆಯ ಮಕ್ಕಳ ತಜ್ಞ ಬಲವಂತರಾವ್ ಭಿಸೆ ಸಲ್ಲಿಸಿದ್ದ ಕ್ರಿಮಿನಲ್ ಮರುಪರಿಶೀಲನಾ ಅರ್ಜಿಯನ್ನು ನ್ಯಾ. ಎಂ ಜಿ ಸೆವ್ಲಿಕರ್ ಅವರಿದ್ದ ಏಕಸದಸ್ಯ ಪೀಠ ತಿರಸ್ಕರಿಸಿತು.
ಹೆಚ್ಚಿನ ಮಾಹಿತಿಗೆ ʼಬಾರ್ ಅಂಡ್ ಬೆಂಚ್ʼ ಇಂಗ್ಲಿಷ್ ತಾಣದ ಲಿಂಕ್ ಗಮನಿಸಿ.