Prajwal Revanna
Prajwal RevannaFacebook

ಅತ್ಯಾಚಾರ ಪ್ರಕರಣ: ಜಾಮೀನು ಕೋರಿ ಎರಡನೇ ಬಾರಿಗೆ ವಿಶೇಷ ನ್ಯಾಯಾಲಯದ ಮೊರೆ ಹೋದ ಪ್ರಜ್ವಲ್‌ ರೇವಣ್ಣ

ಮನೆಗೆಲಸದ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಆರೋಪಿ ಪ್ರಜ್ವಲ್‌ ಜಾಮೀನು ಕೋರಿ ಮೊದಲ ಬಾರಿಗೆ ಸಲ್ಲಿಸಿದ್ದ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಹೈಕೋರ್ಟ್‌ ಮತ್ತು ಸುಪ್ರೀಂ ಕೋರ್ಟ್‌ ವಜಾಗೊಳಿಸಿತ್ತು.
Published on

ಮನೆಗೆಲಸದ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಜಾಮೀನು ಕೋರಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಎರಡನೇ ಬಾರಿಗೆ ಅರ್ಜಿ ಸಲ್ಲಿಸಿದ್ದಾರೆ.

ಹೈಕೋರ್ಟ್‌ ಸೂಚನೆ ಮೇರೆಗೆ ಪ್ರಜ್ವಲ್‌ ರೇವಣ್ಣ ಜಾಮೀನು ಕೋರಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮೊರೆ ಹೋಗಿದ್ದಾರೆ. ಈ ಅರ್ಜಿ ಸಂಬಂಧ ಮಂಗಳವಾರ ನಡೆದ ವಿಚಾರಣೆಗೆ ಹಾಜರಾದ ಸಿಐಡಿಯ ಎಸ್‌ಐಟಿ ತನಿಖಾಧಿಕಾರಿಗಳ ಪರ ವಿಶೇಷ ಸರ್ಕಾರಿ ಅಭಿಯೋಜಕರು, ವಾದ ಮಂಡನೆಗೆ ಕಾಲಾವಕಾಶ ನೀಡುವಂತೆ ಕೋರಿದರು. ಈ ಹಿನ್ನೆಲೆಯಲ್ಲಿ ನ್ಯಾಯಾಲಯವು ವಿಚಾರಣೆಯನ್ನು ಬುಧವಾರ ಮಧ್ಯಾಹ್ನ 3 ಗಂಟೆಗೆ ಮುಂದೂಡಿದೆ.

Also Read
ಅತ್ಯಾಚಾರ ಪ್ರಕರಣ: ವಿಚಾರಣಾ ನ್ಯಾಯಾಲಯದಲ್ಲಿ ಜಾಮೀನು ಕೋರಲು ಪ್ರಜ್ವಲ್‌ಗೆ ಹೈಕೋರ್ಟ್‌ ನಿರ್ದೇಶನ

ಇದಕ್ಕೂ ಮುನ್ನ ಆರೋಪಿ ಪರ ಹಿರಿಯ ವಕೀಲ ವಿಕ್ರಂ ಹುಯಿಲಗೋಳ ವಾದ ಮಂಡಿಸಿ, ಪ್ರಜ್ವಲ್‌ ಬಂಧನವಾಗಿ 14 ತಿಂಗಳು ಕಳೆದಿದೆ. ಇದೇ ಪ್ರಕರಣದ ಆರೋಪಿ ಎಚ್‌ ಡಿ ರೇವಣ್ಣ ವಿರುದ್ಧದ ತನಿಖೆಗೆ ಹೈಕೋರ್ಟ್‌ ತಡೆ ನೀಡಿದೆ. ಹೀಗಾಗಿ ಪ್ರಜ್ವಲ್‌ಗೂ ಜಾಮೀನು ನೀಡುವಂತೆ ಕೋರಿದರು.

ಈ ಪ್ರಕರಣದಲ್ಲಿ ಆರೋಪಿ ಪ್ರಜ್ವಲ್‌ ಜಾಮೀನು ಕೋರಿ ಮೊದಲ ಬಾರಿಗೆ ಸಲ್ಲಿಸಿದ್ದ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಹೈಕೋರ್ಟ್‌ ಮತ್ತು ಸುಪ್ರೀಂ ಕೋರ್ಟ್‌ ವಜಾಗೊಳಿಸಿತ್ತು. ಬಳಿಕ ಪ್ರಜ್ವಲ್‌ ಜಾಮೀನು ಕೋರಿ ಕಳೆದ ಜೂನ್‌ನಲ್ಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ್ದ ಹೈಕೋರ್ಟ್‌, ವಿಚಾರಣಾಧೀನ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸುವಂತೆ ಸೂಚಿಸಿತ್ತು. ಅದರಂತೆ ಪ್ರಜ್ವಲ್‌ ಜಾಮೀನು ಕೋರಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಎರಡನೇ ಬಾರಿಗೆ ಅರ್ಜಿ ಸಲ್ಲಿಸಿದ್ದಾರೆ.

Kannada Bar & Bench
kannada.barandbench.com