ಪ್ರಜ್ವಲ್‌ ರೇವಣ್ಣ ಲೈಂಗಿಕ ದೌರ್ಜನ್ಯ ಹಗರಣ: ವಿಶೇಷ ಸರ್ಕಾರಿ ಅಭಿಯೋಜಕರಾಗಿ ಜಗದೀಶ್‌ ನೇಮಕ

ದಂಡ ಪ್ರಕ್ರಿಯಾ ಸಂಹಿತೆ 1975ರ ಸೆಕ್ಷನ್‌ 24ರ ಉಪ ಸೆಕ್ಷನ್‌ 8ರ ಅಡಿಯಲ್ಲಿ ಜಗದೀಶ್‌ ಅವರ ನೇಮಕ ಮಾಡಲಾಗಿದೆ.
BN Jagadeesha, Special Public Prosecutor
BN Jagadeesha, Special Public Prosecutor

ಹಾಸನ ಲೋಕಸಭಾ ಸದಸ್ಯ ಪ್ರಜ್ವಲ್‌ ರೇವಣ್ಣ ಮತ್ತು ಅವರ ತಂದೆ ಎಚ್‌ ಡಿ ರೇವಣ್ಣ ವಿರುದ್ಧ ಹೊಳೆನರಸೀಪುರದ ಟೌನ್‌ ಠಾಣೆಯಲ್ಲಿ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಪ್ರಕರಣವನ್ನು ರಾಜ್ಯ ಸರ್ಕಾರದ ಪರವಾಗಿ ನಡೆಸಲು ಹೆಚ್ಚುವರಿ ರಾಜ್ಯ ಸರ್ಕಾರಿ ಅಭಿಯೋಜಕರಾಗಿರುವ ಬಿ ಎನ್‌ ಜಗದೀಶ್‌ ಅವರನ್ನು ವಿಶೇಷ ಸರ್ಕಾರಿ ಅಭಿಯೋಜಕರನ್ನಾಗಿ ಮುಂದಿನ ಆದೇಶದವರೆಗೆ ನೇಮಕ ಮಾಡಿ ಮಂಗಳವಾರ ಆದೇಶಿಸಲಾಗಿದೆ.

ದಂಡ ಪ್ರಕ್ರಿಯಾ ಸಂಹಿತೆ 1975ರ ಸೆಕ್ಷನ್‌ 24ರ ಉಪ ಸೆಕ್ಷನ್‌ 8ರ ಅಡಿಯಲ್ಲಿ ಜಗದೀಶ್‌ ಅವರ ನೇಮಕ ಮಾಡಲಾಗಿದೆ.

Also Read
ಪ್ರಜ್ವಲ್‌ ರೇವಣ್ಣ ಹಗರಣ: ರಾಜ್ಯ ರಾಜಕಾರಣಿಗಳ ವಿರುದ್ಧ ಕೇಳಿಬಂದ ಲೈಂಗಿಕ ದೌರ್ಜನ್ಯ ಪ್ರಕರಣಗಳ ಸ್ಥಿತಿಗತಿಯ ಮಾಹಿತಿ

ಸಂತ್ರಸ್ತ ಮಹಿಳೆ ನೀಡಿದ ದೂರಿನ ಅನ್ವಯ ಹಾಸನ ಜಿಲ್ಲೆಯ ಹೊಳೆನರಸೀಪುರ ಟೌನ್‌ ಠಾಣೆಯಲ್ಲಿ ಪ್ರಜ್ವಲ್‌ ರೇವಣ್ಣ ಮತ್ತು ಅವರ ತಂದೆ ಮಾಜಿ ಸಚಿವ ಎಚ್‌ ಡಿ ರೇವಣ್ಣ ವಿರುದ್ಧ ಏಪ್ರಿಲ್‌ 28ರಂದು ಭಾರತೀಯ ದಂಡ ಸಂಹಿತೆ ಸೆಕ್ಷನ್‌ಗಳಾದ 354(ಎ), 354(ಡಿ), 506, 509 ಅಡಿ ಎಫ್‌ಐಆರ್‌ ದಾಖಲಾಗಿದೆ. ಇದರ ತನಿಖೆಯನ್ನು ಹಿರಿಯ ಐಪಿಎಸ್‌ ಅಧಿಕಾರಿ ಬಿ ಕೆ ಸಿಂಗ್‌ ನೇತೃತ್ವದ ವಿಶೇಷ ತನಿಖಾ ತಂಡ ಆರಂಭಿಸಿದೆ.

Kannada Bar & Bench
kannada.barandbench.com