ವಿಧಾನಸಭೆಯಲ್ಲಿ ನ್ಯಾಯವಾದಿಗಳ ಮೇಲಿನ ಹಿಂಸಾಚಾರ ನಿಷೇಧ ವಿಧೇಯಕ ಅಂಗೀಕಾರ

ನ್ಯಾಯವಾದಿಗಳ ಮೇಲಿನ ಹಿಂಸಾಚಾರ ನಿಷೇಧ ಕಾಯಿದೆಯನ್ನು ಡಿಸೆಂಬರ್‌ 12ರಂದು ಮತ್ತು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌ ಕೆ ಪಾಟೀಲ್‌ ವಿಧಾನಸಭೆಯಲ್ಲಿ ಮಂಡಿಸಿದ್ದರು.
ವಿಧಾನಸಭೆಯಲ್ಲಿ ನ್ಯಾಯವಾದಿಗಳ ಮೇಲಿನ ಹಿಂಸಾಚಾರ ನಿಷೇಧ ವಿಧೇಯಕ ಅಂಗೀಕಾರ
Published on

ಕರ್ನಾಟಕ ನ್ಯಾಯವಾದಿಗಳ ಮೇಲಿನ ಹಿಂಸಾಚಾರ ನಿಷೇಧ ವಿಧೇಯಕ ಸೇರಿ ಮೂರು ಮಸೂದೆಗಳು ಗುರುವಾರ ವಿಧಾನಸಭೆಯಲ್ಲಿ ಅಂಗೀಕಾರ ಪಡೆದಿವೆ.

ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ (ತಿದ್ದುಪಡಿ) ವಿಧೇಯಕ ಮತ್ತು ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ (ಎರಡನೇ ತಿದ್ದುಪಡಿ) ವಿಧೇಯಕಗಳಿಗೂ ಮಂಜೂರಾತಿ ದೊರೆತಿದೆ. ಈ ಎರಡೂ ಮಸೂದೆಗಳನ್ನು ಬುಧವಾರ ಕೆಳಮನೆಯಲ್ಲಿ ಮಂಡಿಸಲಾಗಿತ್ತು.

Also Read
ಕರ್ನಾಟಕ ನ್ಯಾಯವಾದಿಗಳ ಮೇಲಿನ ಹಿಂಸಾಚಾರ ನಿಷೇಧ ವಿಧೇಯಕ ವಿಧಾನಸಭೆಯಲ್ಲಿ ಮಂಡನೆ

ನ್ಯಾಯವಾದಿಗಳ ಮೇಲಿನ ಹಿಂಸಾಚಾರ ನಿಷೇಧ ಕಾಯಿದೆಯನ್ನು ಡಿಸೆಂಬರ್‌ 12ರಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌ ಕೆ ಪಾಟೀಲ್‌ ವಿಧಾನಸಭೆಯಲ್ಲಿ ಮಂಡಿಸಿದ್ದರು.

Kannada Bar & Bench
kannada.barandbench.com